RCB vs CSK: ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI ವಿವರ!
RCB vs CSK Match Preview: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವಿನ ವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್ ಸೇರಿದಂತೆ ಪ್ರಮುಖ ಅಂಶಗಳನ್ನು ಇಲ್ಲಿ ವಿವರಿಸಲಾಗಿದೆ.

ಆರ್‌ಸಿಬಿ vs ಸಿಎಸ್‌ಕೆ

ಬೆಂಗಳೂರು: ಸತತ ಮೂರು ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers bengaluru) ತಂಡ, ಶನಿವಾರ ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 52ನೇ ಪಂದ್ಯದಲ್ಲಿ (RCB vs CSK) ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ಎದುರು ಕಾದಾಟ ನಡೆಸಲು ಸಜ್ಜಾಗುತ್ತಿದೆ. ಸಿಎಸ್‌ಕೆ ಎದುರು ಗೆದ್ದು ಐಪಿಎಲ್ ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಆರ್‌ಸಿಬಿ ಎದುರು ನೋಡುತ್ತಿದ್ದರೆ, ಈಗಾಗಲೇ ಪ್ಲೇಆಫ್ಸ್ ರೇಸ್‌ನಿಂದ ಅಧಿಕೃತವಾಗಿ ಹೊರ ನಡೆದಿರುವ ಸಿಎಸ್‌ಕೆ, ಕೊನೆಯ ಪಂದ್ಯಗಳನ್ನು ಗೆದ್ದು ಗೌರವಯುತವಾಗಿ ಟೂರ್ನಿಯಿಂದ ನಿರ್ಗಮಿಸಲು ಬಯಸುತ್ತಿದೆ.
ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ತಂಡ, ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅವರದೇ ನೆಲದಲ್ಲಿ 6 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಇಲ್ಲಿಯ ತನಕ ಆಡಿದ 10 ಪಂದ್ಯಗಳಿಂದ 7 ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ 14 ಅಂಕಗಳನ್ನು ಕಲೆ ಹಾಕಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಶನಿವಾರ ಚೆನ್ನೈ ವಿರುದ್ದ ಗೆದ್ದರೆ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಪ್ಲೇಆಫ್ಸ್ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಆದರೆ, ಟೇಬಲ್‌ನಲ್ಲಿ ಅಗ್ರ ಎರಡರ ಮೇಲೆ ಕಣ್ಣಿಟ್ಟಿರುವ ಬೆಂಗಳೂರು ತಂಡ ಇನ್ನುಳಿದ ನಾಲ್ಕೂ ಪಂದ್ಯಗಳನ್ನು ಗೆಲ್ಲುವ ಕಡೆಗೆ ಗಮನ ಹರಿಸಲಿದೆ.
IPL 2025: ರಾಜಸ್ಥಾನ್ ವಿರುದ್ದ 48 ರನ್ ಗಳಿಸಿ ವಿಶೇಷ ದಾಖಲೆ ಬರೆದ ಸೂರ್ಯಕುಮಾರ್ ಯಾದವ್!
ಇನ್ನು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಟೂರ್ನಿಯ ಪ್ಲೇಆಫ್ಸ್ ರೇಸ್‌ನಿಂದ ಹೊರ ನಡೆದಿದೆ. ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಸಿಎಸ್‌ಕೆ ತನ್ನ ತವರು ಅಂಗಣದಲ್ಲಿ ಸೋಲು ಅನುಭವಿಸಿತ್ತು. ಇಲ್ಲಿಯ ತನಕ ಆಡಿದ 10 ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದು, ಇನ್ನುಳಿದ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.
ಈಗಾಗಲೇ ಆರ್‌ಸಿಬಿ ಹಾಗೂ ಸಿಎಸ್‌ಕೆ ತಂಡಗಳು ಈ ಸೀಸನ್‌ನ ಮೊದಲ ಬಾರಿ ಕಾದಾಟ ನಡೆಸಿದ್ದವು. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಪಡೆದಿತ್ತು. ಇದೀಗ ಸಿಎಸ್‌ಕೆ, ಬೆಂಗಳೂರಿನಲ್ಲಿ ಆರ್‌ಸಿಬಿಯನ್ನು ಮಣಿಸಿ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.
RCB vs CSK: ಐಪಿಎಲ್ ಟೂರ್ನಿಯಲ್ಲಿ 8500 ರನ್‌ಗಳ ಸನಿಹದಲ್ಲಿ ವಿರಾಟ್ ಕೊಹ್ಲಿ!
ಪಿಚ್ ರಿಪೋರ್ಟ್
ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಣ ಪಂದ್ಯ ನಡೆಯುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ತಂಡಗಳ ನಡುವಣ ಪಂದ್ಯ ಹೈಸ್ಕೋರಿಂಗ್ ಆಗುವ ಸಾಧ್ಯತೆ ಇದೆ. ಆರ್‌ಸಿಬಿ ಈ ಸೀಸನ್‌ನಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದ ಒಂದರಲ್ಲಿ ಗೆಲುವು ಪಡೆದಿದೆ. ಅಂದ ಹಾಗೆ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳಬಹುದು.
IPL 2025: ಮುಂಬೈ ಇಂಡಿಯನ್ಸ್ ಪರ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ!
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 34
ಆರ್‌ಸಿಬಿ ಗೆಲುವು: 12
ಸಿಎಸ್‌ಕೆ: 21
ಇತ್ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್/ ಜಾಕೋಬ್ ಬೆಥೆಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ರೊಮ್ಯಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜಾಶ್ ಹೇಝಲ್‌ವುಡ್, ಯಶ್ ದಯಾಳ್
ಚೆನ್ನೈ ಸೂಪರ್ ಕಿಂಗ್ಸ್: ಶೇಖ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕರನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ದೀಪಕ್ ಹೂಡ, ಎಂಎಸ್ ಧೋನಿ (ನಾಯಕ, ವಿ.ಕೀ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮತೀಶ ಪತಿರಣ
IPL 2025: ಗೆಲುವಿನ ಖುಷಿಯಲ್ಲಿದ್ದ ಅಯ್ಯರ್‌ಗೆ ಬಿತ್ತು 12 ಲಕ್ಷ ದಂಡದ ಬರೆ
ಪಂದ್ಯದ ವಿವರ
2025ರ ಇಂಡಿಯನ್ ಪ್ರೀಮಿಯರ್ ಲೀಗ್
52ನೇ ಪಂದ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್
ದಿನಾಂಕ: ಏಪ್ರಿಲ್ 03
ಸಮಯ: ಸಂಜೆ 07: 30 ಕ್ಕೆ
ಸ್ಥಳ: ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್‌ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್