IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ಫಾಫ್ ಡು ಪ್ಲೆಸಿಸ್ ಉಪ ನಾಯಕನಾಗಿ ನೇಮಕ!
Faf du Plessis vice-captain for Delhi Capitals: ಮುಂಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ನಿಮಿತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಉಪ ನಾಯಕನಾಗಿ ಫಾಫ್ ಡು ಪ್ಲೆಸಿಸ್ ನೇಮಕಗೊಂಡಿದ್ದಾರೆ. ಆ ಮೂಲಕ ನಾಯಕ ಅಕ್ಷರ್ ಪಟೇಲ್‌ಗೆ ಸಾಥ್ ನೀಡಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ ಫಾಫ್ ಡು ಪ್ಲೆಸಿಸ್ ಉಪ ನಾಯಕ.

ನವದೆಹಲಿ: ಮುಂಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ನಿಮಿತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ (Delhi Capitals) ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಉಪ ನಾಯಕನಾಗಿ ನೇಮಕಗೊಂಡಿದ್ದಾರೆ. ಆ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್‌ಗೆ ಫಾಫ್ ಡು ಪ್ಲೆಸಿಸ್ ಬೆಂಬಲ ನೀಡಲಿದ್ದಾರೆ. ಅಂದ ಹಾಗೆ ಹದಿನೆಂಟನೇ ಆವೃತ್ತಿಯ ಐಪಿಎಲ್ ಟೂರ್ನಿ ಮಾರ್ಚ್ 22 ರಂದು ಆರಂಭವಾಗಲಿದೆ. ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಕಾದಾಟ ನಡೆಸಲಿವೆ. ಮಾರ್ಚ್ 14 ರಂದು ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅಕ್ಷರ್ ಪಟೇಲ್ ನಾಯಕನಾಗಿ ನೇಮಕಗೊಂಡಿದ್ದರು.
ಕಳೆದ ಮೂರು ಆವೃತ್ತಿಗಳಲ್ಲಿ ಫಾಫ್ ಡು ಪ್ಲೆಸಿಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು. ಆದರೂ ಬೆಂಗಳೂರು ಫ್ರಾಂಚೈಸಿ ದಕ್ಷಿಣ ಆಫ್ರಿಕಾ ಆಟಗಾರನನ್ನು ಮೆಗಾ ಹರಾಜಿಗೆ ಉಳಿಸಿಕೊಂಡಿರಲಿಲ್ಲ. ಕಳೆದ ವರ್ಷ ಯುಇಎಯಲ್ಲಿ ನಡೆದಿದ್ದ ಮೆಗಾ ಹರಾಜಿನ ಮೊದಲನೇ ದಿನ ಫಾಫ್ ಡು ಪ್ಲೆಸಿಸ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಆದರೆ, ಹರಾಜಿನ ಎರಡನೇ ದಿನ ಡೆಲ್ಲಿ ಕ್ಯಾಪಿಟಲ್ಸ್ ತಂಡ 2 ಕೋಟಿ ರೂ. ಗಳಿಗೆ ಫಾಫ್ ಡು ಪ್ಲೆಸಿಸ್ ಅವರನ್ನು ಖರೀದಿಸಿತ್ತು.
IPL 2025: ಎಂಎಸ್ ಧೋನಿ ಅಲ್ಲ! ತಮ್ಮ ನೆಚ್ಚಿನ ನಾಯಕನನ್ನು ಹೆಸರಿಸಿದ ಶಶಾಂಕ್ ಸಿಂಗ್!
ಫಾಫ್ ಡು ಪ್ಲೆಸಿಸ್‌ಗೆ ಉಪ ನಾಯಕತ್ವ ನೀಡಿರುವ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಮವಾರ ತನ್ನ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ತಿಳಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಫಾಫ್ ಡುಪ್ಲೆಸಿಸ್ ಫೋನ್‌ನಲ್ಲಿ ಮಾತನಾಡುತ್ತಾ, ನಾನು ಸದ್ಯ ತವರು ಅಂಗಣ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿದ್ದೇನೆ. ಹೌದು! ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಉಪ ನಾಯಕನಾಗಿದ್ದೇನೆ ಎಂದು ಪ್ರಕಟಿಸಿದ್ದಾರೆ. ಈ ವಿಡಿಯೊವನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಶೇರ್ ಮಾಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಮೆಗರ್ಕ್ ಅವರ ಜೊತೆಗೆ ಫಾಫ್ ಡು ಪ್ಲೆಸಿಸ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಉಪ ನಾಯಕನಾಗಿರುವ ಕಾರಣ ಫಾಫ್ ಪ್ಲೇಯಿಂಗ್ XIನಲ್ಲಿ ಆಡಲಿದ್ದಾರೆ. ಈಗಾಗಲೇ ಮೆಗರ್ಕ್ ಕಳೆದ ಆವೃತ್ತಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ದಕ್ಷಿಣ ಆಫ್ರಿಕಾ 20 ಟೂರ್ನಿಯಲ್ಲಿ ಸಕ್ಸಸ್ ಆದ ಬಳಿಕ ಡುಪ್ಲೆಸಿಸ್, ಇದೀಗ ಅದೇ ಲಯವನ್ನು ಐಪಿಎಲ್ ಟೂರ್ನಿಯಲ್ಲಿ ಮುಂದುವರಿಸಲು ಎದುರು ನೋಡುತ್ತಿದ್ದಾರೆ. ಎಸ್‌ಎ20 ಟೂರ್ನಿಯಲ್ಲಿ ಫಾಫ್ ಆಡಿದ್ದ 11 ಪಂದ್ಯಗಳಿಂದ 286 ರನ್‌ಗಳನ್ನು ಕಲೆ ಹಾಕಿದ್ದರು. ಇದಕ್ಕೂ ಮುನ್ನ 2024ರ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಡು ಪ್ಲೆಸಿಸ್, 438 ರನ್‌ಗಳನ್ನು ಸಿಡಿಸಿದ್ದರು. 2023ರ ಆವೃತ್ತಿಯಲ್ಲಿ ರನ್ ಹೊಳೆ ಹರಿಸಿದ್ದ ಫಾಫ್, 730 ರನ್‌ಗಳನ್ನು ದಾಖಲಿಸಿದ್ದರು.
Pick up your phones, it’s your vice-captain calling 💙❤️ pic.twitter.com/W3AkYO4QKZ
— Delhi Capitals (@DelhiCapitals) March 17, 2025
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅಗ್ರ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಲ್ಲ ಹ್ಯಾರಿ ಬ್ರೂಕ್ ಕೂಡ ಇದ್ದರು. ಆದರೆ ಅವರು ವೈಯಕ್ತಿಕ ಕಾರಣಗಳಿಂದ ಅವರು 2024ರ ಐಪಿಎಲ್ ಟೂರ್ನಿಯನ್ನು ವಿಥ್‌ಡ್ರಾ ಮಾಡಿಕೊಂಡಿದ್ದಾರೆ. ಇವರ ಸ್ಥಾನಕ್ಕೆ ಡೆಲ್ಲಿ ತಂಡ ಬದಲಿ ಆಟಗಾರನನ್ನು ಇನ್ನೂ ಸೂಚಿಸಿಲ್ಲ. ಅಂದ ಹಾಗೆ ಕೊನೆಯ ಹಂತದಲ್ಲಿ ವಿಥ್‌ಡ್ರಾ ಮಾಡಿಕೊಂಡ ಕಾರಣ ಇಂಗ್ಲೆಂಡ್ ಆಟಗಾರನನ್ನು ಮುಂದಿನ ಎರಡು ಆವೃತ್ತಿಗಳಿಗೆ ರದ್ದುಗೊಳಿಸಲಾಗಿದೆ.
IPL 2025: ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಅಜಿಂಕ್ಯ ರಹಾನೆ
2025ರ ಐಪಿಎಲ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ
ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಜೇಕ್ ಫ್ರೇಸರ್-ಮೆಗರ್ಕ್, ಟಿ ನಟರಾಜನ್, ಕರುಣ್ ನಾಯರ್, ಸಮೀರ್ ರಿಜ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ಡಿ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.