ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: 6 ಪಂದ್ಯಗಳನ್ನು ಸೋತ ಸಿಎಸ್‌ಕೆಗೆ ಪ್ಲೇಆಫ್ಸ್‌ಗೆ ಅವಕಾಶ ಇದೆಯಾ? ಇಲ್ಲಿದೆ ಲೆಕ್ಕಾಚಾರ!

CSK's playoffs Scenario: ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಎದುರು ಚೆನ್ನೈ ಸೂಪರ್‌ ಕಿಂಗ್ಸ್‌ 9 ವಿಕೆಟ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಸಿಎಸ್‌ಕೆ ತಂಡದ ಪ್ಲೇಆಫ್ಸ್‌ ಹಾದಿ ಕಠಿಣವಾಗಿದೆ. ಆದರೂ ಚೆನ್ನೈ ತಂಡದ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ ಎಷ್ಟು ಪಂದ್ಯಗಳನ್ನು ಗೆಲ್ಲಬೇಕೆಂದು ಇಲ್ಲಿ ವಿವರಿಸಲಾಗಿದೆ.

6 ಪಂದ್ಯಗಳನ್ನು ಸೋತ ಸಿಎಸ್‌ಕೆಗೆ ಪ್ಲೇಆಫ್ಸ್‌ಗೆ ಅವಕಾಶ ಇದೆಯಾ?

ಮುಂಬೈ ಇಂಡಿಯನ್ಸ್‌ ವಿರುದ್ದ 9 ವಿಕೆಟ್‌ಗಳಿಂದ ಸೋಲು ಅನುಭವಿಸಿದ ಮುಂಬೈ ಇಂಡಿಯನ್ಸ್‌.

Profile Ramesh Kote Apr 21, 2025 8:24 AM

ಮುಂಬೈ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2205) ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡದಿಂದ ನಿರೀಕ್ಷಿತ ಪ್ರದರ್ಶನ ಇನ್ನೂ ಮೂಡಿ ಬಂದಿಲ್ಲ. ಇಲ್ಲಿಯ ತನಕ 8 ಪಂದ್ಯಗಳನ್ನು ಆಡಿರುವ ಸಿಒಎಸ್‌ಕೆ ಗೆದ್ದಿರುವುದು ಕೇವಲ ಎರಡೇ ಎರಡು ಪಂದ್ಯಗಳು ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಋತುರಾಜ್‌ ಗಾಯಕ್ವಾಡ್‌ ಗಾಯಕ್ಕೆ ತುತ್ತಾಗಿ ಟೂರ್ನಿಯಿಂದ ಹೊರ ಬಿದ್ದ ಬಳಿಕ ಸಿಎಸ್‌ಕೆಗೆ ಎಂಎಸ್‌ ಧೋನಿ ನಾಯಕರಾಗಿ ಮರಳಿದರೂ ಚೆನ್ನೈ ತಂಡ ಸೋಲಿನ ಸರಪಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿಯೂ ಮುಂಬೈ ಇಂಡಿಯನ್ಸ್‌(Mumbai Indians) ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 9 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದೆ.

2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಋತುರಾಜ್‌ ಗಾಯಕ್ವಾಡ್‌ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 14 ಪಂದ್ಯಗಳಲ್ಲಿ 7ರಲ್ಲಿ ಗೆದ್ದಿತ್ತು. ಆದರೆ, ಕೊನೆಯ ಹಂತದಲ್ಲಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು. ಆದರೆ, ಹದಿನೆಂಟನೇ ಆವೃತ್ತಿಯಲ್ಲಿ ಸಿಎಸ್‌ಕೆ ತಂಡದಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಡಿದ ಎಂಟು ಪಂದ್ಯಗಳಿಂದ ಚೆನ್ನೈ ತಂಡ ಕಲೆ ಹಾಕಿರುವುದು ಕೇವಲ ಎರಡು ಅಂಕಗಳು ಮಾತ್ರ. ಹಾಗಾಗಿ ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಪ್ಲೇಆಫ್ಸ್‌ ಹಾದಿ ಅತ್ಯಂತ ಕಠಿಣವಾಗಿದೆ.

MI vs CSK: ರೋಹಿತ್‌-ಸೂರ್ಯ ಅಬ್ಬರ, ಮುಂಬೈ ಇಂಡಿಯನ್ಸ್‌ಗೆ ಹ್ಯಾಟ್ರಿಕ್‌ ಜಯ!

6 ಪಂದ್ಯ ಸೋತ ಸಿಎಸ್‌ಕೆಯ ಪ್ಲೇಆಫ್ಸ್‌ ಲೆಕ್ಕಾಚಾರ

ಈ ಟೂರ್ನಿಯಲ್ಲಿ ಪ್ರಶಸ್ತಿಗಾಗಿ ಒಟ್ಟು 10 ತಂಡಗಳು ಕಾದಾಟ ನಡಸುತ್ತಿವೆ. ನೆಟ್‌ ರನ್‌ರೇಟ್‌ ಅನ್ನು ಅವಲಂಬಿಸದೆ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಪಡೆಯಬೇಕಾದ ಅಗತ್ಯವಿದೆ. ಇದೀಗ 8 ಪಂದ್ಯಗಳನ್ನು ಮುಗಿಸಿರುವ ಸಿಎಸ್‌ಕೆ ಇನ್ನು ಉಳಿದಿರುವುದು ಕೇವಲ 6 ಪಂದ್ಯಗಳು ಮಾತ್ರ. ಹಾಗಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ ಇನ್ನುಳಿದ ಆರೂ ಪಂದ್ಯಗಳನ್ನು ಗೆಲ್ಲಬೇಕು. ಒಂದು ಇದರಲ್ಲಿ ಒಂದು ಪಂದ್ಯವನ್ನು ಸೋತರೂ ಸಿಎಸ್‌ಕೆಗೆ ಪ್ಲೇಆಫ್ಸ್‌ ಹಾದಿ ಕಠಿಣವಾಗಲಿದೆ.

IPL 2025 Points Table

7 ಪಂದ್ಯಗಳನ್ನು ಗೆದ್ದರೆ ಸಿಎಸ್‌ಕೆಗೆ ಅವಕಾಶ ಇದೆಯಾ?

ಒಂದು ವೇಳೆ ಮುಂದಿನ ಆರು ಪಂದ್ಯಗಳ ಪೈಕಿ 5ರಲ್ಲಿ ಗೆಲುವು ಪಡೆದರೂ ಚೆನ್ನೈ ಸೂಪರ್‌ ಕಿಂಗ್ಸ್‌ ಒಟ್ಟು 14 ಅಂಕಗಳನ್ನು ಕಲೆ ಹಾಕಿದಂತಾಗುತ್ತದೆ. ಆಗ ಸಿಎಸ್‌ಕೆ ತಂಡದ ಪ್ಲೇಆಫ್ಸ್‌ ನಿರ್ಧಾರ ಇತರೆ ತಂಡಗಳ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ ಹಾಗೂ ಮುಂದಿನ ಪಂದ್ಯಗಳನ್ನು ಸಿಎಸ್‌ಕೆ ಉತ್ತಮ ರನ್‌ರೇಟ್‌ನೊಂದಿಗೆ ಗೆಲ್ಲಬೇಕಾಗುತ್ತದೆ. ತನ್ನ ಮೊಟ್ಟ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಗೆದ್ದು ಟೂರ್ನಿಯಲ್ಲಿ ಶುಭಾರಂಭ ಕಂಡಿದ್ದ ಸಿಎಸ್‌ಕೆ, ನಂತರ ಬಹುತೇಕ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.

IPL 2025: ಪಂಜಾಬ್‌ ವಿರುದ್ದ ಅರ್ಧಶತಕ ಸಿಡಿಸಿ ಡೇವಿಡ್‌ ವಾರ್ನರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

ಮುಂಬೈ ಇಂಡಿಯನ್ಸ್‌ಗೆ 9 ವಿಕೆಟ್‌ ಭರ್ಜರಿ ಜಯ

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ, ಮೊದಲು ಬ್ಯಾಟ್‌ ಮಾಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 176 ರನ್‌ಗಳನ್ನು ಗಳಿಸಿತ್ತು. ಸಿಎಸ್‌ಕೆ ಪರ ರವೀಂದ್ರ ಜಡೇಜಾ 35 ಎಸೆತಗಳಲ್ಲಿ 53 ರನ್‌ಗಳನ್ನು ಕಲೆ ಹಾಕಿದ್ದರೆ, ಶಿವಂ ದುಬೆ 50 ರನ್‌ಗಳನ್ನು ಸಿಡಿಸಿದ್ದರು. ಇದಕ್ಕೂ ಮುನ್ನ 17ನೇ ವಯಸ್ಸಿನಲ್ಲಿ ಆಯಷ್‌ ಮ್ಹಾತ್ರೆ ಕೂಡ 32 ರನ್‌ಗಳ ಸ್ಪೋಟಕ ಇನಿಂಗ್ಸ್‌ ಆಡಿ ವಿಕೆಟ್‌ ಒಪ್ಪಿಸಿದ್ದರು.

ಬಳಿಕ ಗುರಿ ಹಿಂಬಾಲಿಸಿದ ಮುಂಬೈ ಇಂಡಿಯನ್ಸ್‌ ತಂಡದ ಪರ ಆರಂಭಿಕ ಬ್ಯಾಟ್ಸ್‌ಮನ್‌ ರಯಾನ್‌ ರಿಕೆಲ್ಟನ್‌ 24 ರನ್‌ ಗಳಿಸಿದ ಬಳಿಕ ವಿಕೆಟ್‌ ಒಪ್ಪಿಸಿದರು. ಆದರೆ, ಎರಡನೇ ವಿಕೆಟ್‌ಗೆ ಜೊತೆಯಾದ ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್‌ ಯಾದವ್‌ ವಾಂಖೆಡೆ ಕ್ರೀಡಾಂಗಣದಲ್ಲಿ ರನ್‌ ಹೊಳೆ ಹರಿಸಿದರು. ಈ ಇಬ್ಬರೂ 114 ರನ್‌ಗಳ ಜೊತೆಯಾಟವನ್ನು ಆಡಿದರು. ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನ ತೋರಿದ ರೋಹಿತ್‌ ಶರ್ಮಾ 45 ಎಸೆತಗಳಲ್ಲಿ ಅಜೇಯ 76 ರನ್‌ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸೂರ್ಯಕುಮಾರ್‌ ಯಾದವ್‌ ಕೂಡ ಅಜೇಯ 68 ರನ್‌ಗಳನ್ನು ಚಚ್ಚಿದ್ದರು. ಆ ಮೂಲಕ ಮುಂಬೈ ಇಂಡಿಯನ್ಸ್‌ 15.4 ಓವರ್‌ಗಳಿಗೆ ಗೆದ್ದು ಬೀಗಿತು.