ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ನಾಯಕತ್ವವನ್ನು ನಿರಾಕರಿಸಿದ ಕೆಎಲ್‌ ರಾಹುಲ್‌!

Axar Patel Likely to DC Captain: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌ 2025) ಟೂರ್ನಿಯ ನಿಮಿತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೂತನ ನಾಯಕನನ್ನಾಗಿ ಅಕ್ಷರ್ ಪಟೇಲ್ ಅವರನ್ನು ನೇಮಿಸುವ ಸಾಧ್ಯತೆಯಿದೆ. ಆದರೆ, ನಾಯಕತ್ವದ ಅನುಭವ ಹೊಂದಿರುವ ಕೆಎಲ್ ರಾಹುಲ್ ಫ್ರಾಂಚೈಸಿಯನ್ನು ಮುನ್ನಡೆಸಲು ನಿರಾಕರಿಸಿದ್ದಾರೆ ಎಂಬ ವರದಿಯಾಗಿದೆ.

IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ಅಕ್ಷರ್‌ ಪಟೇಲ್‌ ನಾಯಕನಾಗುವ ಸಾಧ್ಯತೆ!

ಡೆಲ್ಲಿ ಕ್ಯಾಪಿಟಲ್ಸ್‌ಗೆ ಅಕ್ಷರ್‌ ಪಟೇಲ್‌ ನಾಯಕ.

Profile Ramesh Kote Mar 11, 2025 6:56 PM

ನವದೆಹಲಿ: ಭಾರತ ತಂಡದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಆಲ್‌ರೌಂಡ್ ಪ್ರದರ್ಶನದ ಮೂಲಕ ಪ್ರಮುಖ ಪಾತ್ರ ವಹಿಸಿದ್ದ ಅಕ್ಷರ್ ಪಟೇಲ್ (Axar Patel)2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ನಿಮಿತ್ತ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಕ್ಕೆ ನೂತನ ನಾಯಕನಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ. 2024ರ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಅಕ್ಷರ್‌ ಪಟೇಲ್‌ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಓವರ್ ರೇಟ್ ಅಪರಾಧದಿಂದಾಗಿ ಡೆಲ್ಲಿ ಮಾಜಿ ನಾಯಕ ರಿಷಭ್ ಪಂತ್ ಒಂದು ಪಂದ್ಯದಿಂದ ನಿಷೇಧ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಅಕ್ಷರ್‌ ಮುನ್ನಡೆಸಿದ್ದರು. ಇದೀಗ ಅವರು ಪೂರ್ಣ ಪ್ರಮಾಣದ ನಾಯಕರಾಗಲಿದ್ದಾರೆಂದು ವರದಿಯಾಗಿದೆ.

"ಹೌದು, 2025ರ ಐಪಿಎಲ್ ಟೂರ್ನಿಗೆ ಅಕ್ಷರ್ ಪಟೇಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರನ್ನಾಗಿ ಮಾಡುವ ಸಾಧ್ಯತೆಯಿದೆ. ಫ್ರಾಂಚೈಸಿ ಕೆಎಲ್ ರಾಹುಲ್ ಅವರನ್ನು ತಂಡದ ನಾಯಕರನ್ನಾಗಿ ಮಾಡುವಂತೆ ಕೇಳಿಕೊಂಡಿತ್ತು ಆದರೆ, ಅವರು ಇದನ್ನು ನಿರಾಕರಿಸಿದ್ದಾರೆ. ಹಾಗಾಗಿ ಮುಂಬರುವ ಟೂರ್ನಿಯಲ್ಲಿ ರಾಹುಲ್ ಆಟಗಾರನಾಗಿ ತಂಡಕ್ಕೆ ಕೊಡುಗೆ ನೀಡಲು ಬಯಸುತ್ತಾರೆ," ಎಂದು ಮೂಲಗಳು ತಿಳಿಸಿರುವುದನ್ನು ಐಎಎನ್‌ಎಸ್‌ ವರದಿ ಮಾಡಿದೆ.

IPL 2025: ʻನನ್ನನ್ನು ಯಾರೂ ಗುರುತಿಸಲಿಲ್ಲʼ-ಕೆಕೆಆರ್‌ ವಿರುದ್ಧ ಶ್ರೇಯಸ್‌ ಅಯ್ಯರ್‌ ಗಂಭೀರ ಆರೋಪ!

ಕೆಎಲ್ ರಾಹುಲ್ ಐಪಿಎಲ್‌ನ ಮೊದಲ ಕೆಲವು ಪಂದ್ಯಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಕೆಎಲ್ ರಾಹುಲ್ ಅವರ ಪತ್ನಿ ಅತಿಯಾ ಶೆಟ್ಟಿ ಗರ್ಭಿಣಿ. ಇಬ್ಬರೂ ಕಳೆದ ವರ್ಷ ನವೆಂಬರ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದರು.

ಅಕ್ಷರ್ ಪಟೇಲ್ ಐಪಿಎಲ್ ವೃತ್ತಿಜೀವನ

ಅಕ್ಷರ್‌ ಪಟೇಲ್‌ ತಮ್ಮ ಐಪಿಎಲ್‌ ವೃತ್ತಿ ಜೀವನದಲ್ಲಿ 150 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 130.88 ಸ್ಟ್ರೈಕ್ ರೇಟ್‌ನಲ್ಲಿ 1653 ರನ್ ಗಳಿಸಿದ್ದಾರೆ ಮತ್ತು 7.28ರ ಎಕಾನಮಿ ರೇಟ್‌ನಲ್ಲಿ ಎಡಗೈ ಸ್ಪಿನ್ ಬೌಲಿಂಗ್‌ನಲ್ಲಿ 123 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ವರ್ಷ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟಿ20ಐ ಸರಣಿಯನ್ನು 4-1 ಅಂತರದಿಂದ ಗೆದ್ದಾಗ ಅಕ್ಷರ್ ಪಟೇಲ್‌ ಭಾರತ ತಂಡದ ಉಪನಾಯಕರಾಗಿದ್ದರು. ಆದರೆ, 2025ರ ಐಪಿಎಲ್‌ ಟೂರ್ನಿಯಲ್ಲಿ ಡಿಸಿ ನಾಯಕನಾಗಿ ಅವರ ನಾಯಕತ್ವ ಕೌಶಲವನ್ನು ಪರೀಕ್ಷಿಸಬಹುದಾಗಿದೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಚೊಚ್ಚಲ ಪ್ರಶಸ್ತಿಗಾಗಿ ಎದುರು ನೋಡುತ್ತಿದೆ. ಸ್ಪಿನ್‌ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಅವರು 2019ರಿಂದಲೂ ಡೆಲ್ಲಿ ತಂಡದ ಭಾಗವಾಗಿದ್ದಾರೆ. 2025ರ ಐಪಿಎಲ್‌ ಮೆಗಾ ಹರಾಜಿಗೂ ಮುನ್ನ ಅಕ್ಷರ್‌ ಪಟೇಲ್‌ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ 18 ಕೋಟಿ ರೂ. ಗಳಿಗೆ ಉಳಿಸಿಕೊಂಡಿತ್ತು.

IPL 2025: ಈ ಬಾರಿಯೂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಂಸ್ಕರಿತ ನೀರು

ನಾಯಕತ್ವದ ಅನುಭವ ಹೊಂದಿರುವ ರಾಹುಲ್‌

ಕಳೆದ ವರ್ಷ ನಡೆದಿದ್ದ ಐಪಿಎಲ್‌ ಮೆಗಾ ಹರಾಜಿನಲ್ಲಿ 14 ಕೋಟಿ ರೂ ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪಾಲಾಗಿದ್ದ ಕೆಎಲ್‌ ರಾಹುಲ್ ನಾಯಕತ್ವದ ಸ್ಥಾನಕ್ಕೆ ಸ್ಪರ್ಧಿಯಾಗಿದ್ದರು. ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಈ ಹಿಂದೆ ಐಪಿಎಲ್‌ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಲಖನೌ ಸೂಪರ್ ಜಯಂಟ್ಸ್ (ಎಲ್‌ಎಸ್‌ಜಿ) ಪರ ತಲಾ ಎರಡು ಸೀಸನ್‌ಗಳನ್ನು ಆಡಿದ್ದರು. ಅವರ ನಾಯಕತ್ವದಲ್ಲಿ ಎಲ್‌ಎಸ್‌ಜಿ 2022 ಮತ್ತು 2023 ಸೀಸನ್‌ಗಳಲ್ಲಿ ಪ್ಲೇಆಫ್ ತಲುಪಿತ್ತು.

ಆದರೆ ಮೂಲಗಳ ಪ್ರಕಾರ, ಅವರು ಈಗ ನಾಯಕತ್ವವಿಲ್ಲದೆ ಡಿಸಿ ಪರ ಕೇವಲ ಹಿರಿಯ ಆಟಗಾರನಾಗಿ ಆಡಲಿದ್ದಾರೆ. 2025ರ ಐಪಿಎಲ್ ಮೊದಲ ಪಂದ್ಯ ಡಿಸಿ, ಮಾರ್ಚ್ 24 ರಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ಲಖನೌ ಸೂಪರ್ ಜಯಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಆಡಲಿದೆ. ಈ ವಾರ ನವದೆಹಲಿಯಲ್ಲಿ ಮೂರು ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಿದ್ದು, ಮಾರ್ಚ್ 17 ರಂದು ವಿಶಾಖಪಟ್ಟಣಕ್ಕೆ ತೆರಳಲಿದೆ.

IPL 2025: ಐಪಿಎಲ್ ವೇಳೆ ತಂಬಾಕು, ಮದ್ಯದ ಜಾಹೀರಾತಿಗೆ ನಿರ್ಬಂಧ!