MI vs SRH: ಮೂರನೇ ಗೆಲುವಿನ ಮೇಲೆ ಸನ್‌ರೈಸರ್ಸ್ ಹೈದರಾಬಾದ್-ಮುಂಬೈ ಇಂಡಿಯನ್ಸ್ ಕಣ್ಣು!
MI vs SRH Match Preview: ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಏಪ್ರಿಲ್ 17 ರಂದು ಗುರುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 33ನೇ ಪಂದ್ಯದಲ್ಲಿ ಕಾದಾಟ ನಡೆಸಲಿದೆ. ಈ ಎರಡೂ ತಂಡಗಳು ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿದ್ದು, ಇದೀಗ ಮೂರನೇ ಗೆಲುವಿನ ಮೇಲೆ ಕಣ್ಣಿಟ್ಟಿವೆ.

ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್

ಮುಂಬೈ: ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ (MI vs SRH) ತಂಡಗಳು ಏಪ್ರಿಲ್ 17 ರಂದು ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ 2025 ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 33ನೇ ಪಂದ್ಯದಲ್ಲಿ ಕಾದಾಟ ನಡೆಸಲು ಸಜ್ಜಾಗುತ್ತಿವೆ. ಆ ಮೂಲಕ ಮೂರನೇ ಪಂದ್ಯದ ಗೆಲುವಿನ ಮೇಲೆ ಈ ಎರಡೂ ತಂಡಗಳು ಕಣ್ಣಿಟ್ಟಿವೆ. ಈ ಎರಡೂ ತಂಡಗಳ ಪರಿಸ್ಥಿತಿ ಒಂದೇ ರೀತಿ ಇದೆ. ಮುಂಬೈ ಹಾಗೂ ಹೈದರಾಬಾದ್ ತಂಡಗಳು ತಮ್ಮ ಪ್ಲೇಆಫ್ಸ್ ಹಾದಿಯನ್ನು ಜೀವಂತವಾಗಿಸಿಕೊಳ್ಳಬೇಕೆಂದರೆ ಮುಂದಿನ ಪಂದ್ಯವನ್ನು ಗೆಲ್ಲಬೇಕಾಗಿದೆ. ಒಂದು ವೇಳೆ ಸೋತರೆ ದಿನದಿಂದ ದಿನಕ್ಕೆ ಈ ತಂಡದ ನಾಕ್‌ಔಟ್ ಹಾದಿ ಕಠಿಣವಾಗಲಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ತನ್ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್‌ಗಳಿಂದ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 205 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಕರುಣ್ ನಾಯರ್ (89 ರನ್) ಅವರ ಸ್ಪೋಟಕ ಬ್ಯಾಟ್ ಹೊರತಾಗಿಯೂ ಇನ್ನುಳಿದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ 19 ಓವರ್‌ಗಳಿಗೆ 193 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಆ ಮೂಲಕ ಮುಂಬೈ ತನ್ನ ಎರಡನೇ ಪಂದ್ಯವನ್ನು ಗೆದ್ದುಕೊಂಡಿತ್ತು.
IPL 2025: ಸೋಲಿಗೆ ಕಳಪೆ ಬ್ಯಾಟಿಂಗ್ ಕಾರಣ; ಅಜಿಂಕ್ಯ ರಹಾನೆ
ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡ ತನ್ನ ಕೊನೆಯ ಪಂದ್ಯವನ್ನು ಗೆದ್ದುಕೊಂಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಸನ್‌ರೈಸರ್ಸ್ ಹೈದಾರಾಬಾದ್ ತಂಡ, ಶ್ರೇಯಸ್ ಅಯ್ಯರ್ (82 ರನ್) ಅವರ ಬ್ಯಾಟಿಂಗ್ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 245 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ 246 ರನ್ ಗುರಿ ನೀಡಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಎಸ್‌ಆರ್‌ಎಚ್ ತಂಡ, ಅಭಿಷೇಕ್ ಶರ್ಮಾ (141) ಶತಕದ ಬಲದಿಂದ 18.3 ಓವರ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು 247 ರನ್ ಗಳಿಸಿ 8 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು.
ಇಲ್ಲಿಯವರೆಗೂ ಆಡಿದ 6 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್, ಎರಡರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ 4ರಲ್ಲಿ ಸೋಲು ಅನುಭವಿಸಿದೆ. ಒಟ್ಟು 4 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಏಳನೇ ಸ್ಥಾನದಲ್ಲಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ 4 ಅಂಕಗಳೊಂದಿಗೆ ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ 9ನೇ ಸ್ಥಾನದಲ್ಲಿದೆ. ಮುಂಬೈ ಹಾಗೂ ಹೈದರಾಬಾದ್ ಎರಡೂ ತಂಡಗಳು ತಲಾ 4 ಅಂಕಗಳನ್ನು ಕಲೆ ಹಾಕಿವೆ. ಆದರೆ, ಎಸ್‌ಆರ್‌ಎಚ್‌ಗಿಂತಲೂ ಉತ್ತಮ ರನ್ ರೇಟ್ ಹೊಂದಿರುವ ಕಾರಣ ಮುಂಬೈ ಎರಡು ಸ್ಥಾನಗಳು ಮೇಲಿದೆ.
IPL 2025: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಪಂಜಾಬ್ ಕಿಂಗ್ಸ್
ಪಿಚ್ ರಿಪೂರ್ಟ್
ಮುಂಬೈನ ವಾಂಖೆಡೆ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಹಿ ವಿಕೆಟ್ ಆಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಟಾಸ್ ಗೆದ್ದ ತಂಡದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳುತ್ತಾರೆ. ಇಲ್ಲಿನ ಪಿಚ್ ಕಂಡೀಷನ್ಸ್ ಫ್ಲ್ಯಾಟ್ ಆಗಿದೆ ಹಾಗಾಗಿ ಮುಂಬೈ ಹಾಗೂ ಹೈದರಾಬಾದ್ ನಡುವಣ ಪಂದ್ಯದಲ್ಲಿ ರನ್ ಹೊಳೆ ಹರಿಸುವ ಸಾಧ್ಯತೆ ಇದೆ. ಈ ಮೈದಾನದಲ್ಲಿ ನಡೆದಿದ್ದ ಕಳೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ತಂಡ ಗೆದ್ದಿತ್ತು.
ಮುಂಬೈ vs ಹೈದರಾಬಾದ್ ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 23
ಮುಂಬೈ ಇಂಡಿಯನ್ಸ್ ಗೆಲುವು: 13
ಸನ್‌ರೈಸರ್ಸ್ ಹೈದಾರಾಬಾದ್ ಗೆಲುವು: 10
ಫಲಿತಾಂಶವಿಲ್ಲ: 00
IPL 2025: ಕರುಣ್ ನಾಯರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿ, ವಿರಾಟ್ ಕೊಹ್ಲಿಯನ್ನು ಟೀಕಿಸಿದ ಇರ್ಫಾನ್ ಪಠಾಣ್!
ಇತ್ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಮುಂಬೈ ಇಂಡಿಯನ್ಸ್: ರಯಾನ್ ರಿಕೆಲ್ಟನ್ (ವಿ.ಕೀ), ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಕರಣ್ ಶರ್ಮಾ, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ
ಇಂಪ್ಯಾಕ್ಟ್ ಪ್ಲೇಯರ್: ರೋಹಿತ್ ಶರ್ಮಾ/ಅಶ್ವಿನಿ ಕುಮಾರ್
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿ.ಕೀ), ಅನಿಕೇತ್ ವರ್ಮಾ, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಝೀಸನ್ ಅನ್ಸಾರಿ, ಮೊಹಮ್ಮದ್ ಶಮಿ, ಜಯದೇವ್ ಉನಾದ್ಕಟ್
ಇಂಪ್ಯಾಕ್ಟ್ ಪ್ಲೇಯರ್: ಅಭಿನವ್ ಮನೋಹರ್/ಇಶಾನ್ ಮಾಲಿಂಗ
IPL 2025; ಕ್ಯಾನ್ಸರ್ ಗೆದ್ದು ಐಪಿಎಲ್ ಕಾಮೆಂಟ್ರಿ ತಂಡ ಸೇರಿದ ಅಲನ್ ವಿಲ್ಕಿನ್ಸ್
ಪಂದ್ಯದ ವಿವರ
ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್
2025ರ ಐಪಿಎಲ್ 33ನೇ ಪಂದ್ಯ
ದಿನಾಂಕ: ಏಪ್ರಿಲ್ 17, 2025
ಸಮಯ: ಸಂಜೆ 07: 30ಕ್ಕೆ
ಸ್ಥಳ: ವಾಂಖಡೆ ಕ್ರೀಡಾಂಗಣ, ಮುಂಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸಸ್ನಿ ಹಾಟ್‌ಸ್ಟಾರ್ಮ ಜಿಯೋ ಸಿನಿಮಾ