IPL 2025: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್ ನಡುವೆ ಹೈವೋಲ್ಟೇಜ್ ಕದನ!
DC vs GT Match Preview: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಭಾನುವಾರ ದಿಲ್ಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 60ನೇ ಪಂದ್ಯದಲ್ಲಿ ಕಾದಾಟ ನಡೆಸಲು ಸಜ್ಜಾಗುತ್ತಿವೆ. ಪ್ಲೇಆಫ್ಸ್‌ಗೆ ಅರ್ಹತೆ ಪಡೆಯುವ ನಿಟ್ಟಿಯಲ್ಲಿ ಈ ಪಂದ್ಯ ಎರಡೂ ತಂಡಗಳಿಗೆ ಮುಖ್ಯವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 60ನೇ ಪಂದ್ಯದಲ್ಲಿ (DC vs GT) ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಕಾದಾಟ ನಡೆಸಲು ಸಜ್ಜಾಗುತ್ತಿವೆ. ಪ್ಲೇಆಫ್ಸ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಈ ಪಂದ್ಯದಲ್ಲಿ ಈ ಎರಡೂ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಈ ಎರಡೂ ತಂಡಗಳು ಪಂದ್ಯವನ್ನು ಗೆಲ್ಲಲು ಹೊಸ ರಣತಂತ್ರದೊಂದಿಗೆ ಕಣಕ್ಕೆ ಇಳಿಯಲಿವೆ. ಪ್ರಸ್ತುತ ನಾಕ್‌ಔಟ್ ರೇಸ್‌ನಲ್ಲಿ 7 ತಂಡಗಳಿವೆ. ಹಾಗಾಗಿ ಮುಂದಿನ ಎಲ್ಲಾ ಪಂದ್ಯಗಳು ಅತ್ಯಂತ ಪ್ರಮುಖವಾಗಿವೆ.
ಗುಜರಾತ್ ಟೈಟನ್ಸ್ ತಂಡ ಇಲ್ಲಿಯವರೆಗೂ ಆಡಿದ 11 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಪಡೆದಿದ್ದು, ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಈ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆದ್ದರೆ ಗುಜರಾತ್ ಟೈಟನ್ಸ್ ತಂಡ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲಿದೆ. ಈ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಗುಜರಾತ್ ಟೈಟನ್ಸ್ ತಂಡಕ್ಕೆ ನಾಯಕ ಶುಭಮನ್ ಗಿಲ್, ಸಾಯಿ ಸುದರ್ಶನ್ ಹಾಗೂ ಜೋಸ್ ಬಟ್ಲರ್ ಕೀ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ, ಜೆರಲ್ಡ್ ಕೊಯೆಡ್ಜಿ, ಸಾಯಿ ಕಿಶೋರ್, ರಶೀದ್ ಖಾನ್ ಬೌಲಿಂಗ್ ವಿಭಾಗದಲ್ಲಿ ಕೀ ಬೌಲರ್ಸ್ ಆಗಿದ್ದಾರೆ.
IPL 2025: ಆರ್‌ಸಿಬಿಗೆ ಇನ್ನು ಗೆಲುವು ಬೇಕು? 7 ತಂಡಗಳ ಪ್ಲೇಆಫ್ಸ್ ಲೆಕ್ಕಾಚಾರ!
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಟೂರ್ನಿಯಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಟೂರ್ನಿಯ ಆರಂಭಿಕ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಂಡಿದ್ದ ಅಕ್ಷರ್ ಪಟೇಲ್ ನಂತರ ಗೆಲುವಿನ ಲಯವನ್ನು ಕಳೆದುಕೊಂಡಿತ್ತು. ಇಲ್ಲಿಯ ತನಕ ಆಡಿದ 11 ಪಂದ್ಯಗಳಿಂದ ಆರರಲ್ಲಿ ಗೆಲುವು ಪಡೆದಿದೆ. ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ ಡೆಲ್ಲಿ ತಂಡ ಇನ್ನುಳಿದ ಮೂರೂ ಪಂದ್ಯಗಳಲ್ಲಿ ಗೆಲುವು ಪಡೆಯಬೇಕಾದ ಅನಿವಾರ್ಯತೆ ಇದೆ. ಇನ್ನೂ ಯಾವುದೇ ತಂಡ ಗುಜರಾತ್ ಹಾಗೂ ಬೆಂಗಳೂರು ತಂಡಗಳು ತಲಾ 16 ಅಂಕಗಳನ್ನು ಕಲೆ ಹಾಕಿದ್ದರೂ ಕೂಡ ಇನ್ನು ಪ್ಲೇಆಫ್ಸ್‌ಗೆ ಅರ್ಹತೆ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಪಂದ್ಯಗಳು ಅತ್ಯಂತ ರೋಚಕತೆಯನ್ನು ಕೆರಳಿಸಿದೆ.
ಪಿಚ್ ರಿಪೋರ್ಟ್
ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದ ಪಿಚ್ ಬೌಲರ್‌ಗಳಿಗಿಂತ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಅರ್ಧ ಪಂದ್ಯ ಮುಗಿದ ಬಳಿಕ ಬೌಲರ್‌ಗಳು ಪಿಚ್‌ನ ನೆರವನ್ನು ಪಡೆಯಲಿದೆ. ಈ ಪಂದ್ಯದಲ್ಲಿ ಟಾಸ್ ತುಂಬಾ ನಿರ್ಣಾಯಕವಾಗಲಿದೆ. ಟಾಸ್ ಗೆದ್ದ ತಂಡದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳಲಿದೆ.
IPL 2025: ಐಪಿಎಲ್ ಉಳಿದ ಪಂದ್ಯ ಆಡದಂತೆ ವಿದೇಶಿ ಆಟಗಾರರಿಗೆ ಮನವಿ ಮಾಡಿದ ಆಸೀಸ್ ವೇಗಿ
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 06
ಡೆಲ್ಲಿ ಕ್ಯಾಪಿಟಲ್ಸ್ ಗೆಲುವು: 03
ಗುಜರಾತ್ ಟೈಟನ್ಸ್ : 03
ಇತ್ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್ (ವಿ.ಕೀ), ಕರುಣ್ ನಾಯರ್, ಕೆಎಲ್ ರಾಹುಲ್, ಸಮೀರ್ ರಿಝ್ವಿ, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟನ್ ಸ್ಟಬ್ಸ್, ವಿಪ್ರಾಝ್ ನಿಗಮ್, ದುಷ್ಮಾಂತ ಚಮೀರಾ, ಕುಲ್ದೀಪ್ ಯಾದವ್, ಟಿ ನಟರಾಜನ್
IPL 2025: ಪ್ಲೇ ಆಫ್ ಪಂದ್ಯಕ್ಕೆ ಗುಜರಾತ್ ಟೈಟಾನ್ಸ್ ಸೇರಿದ ಕುಸಲ್ ಮೆಂಡಿಸ್
ಇಂಪ್ಯಾಕ್ಟ್ ಪ್ಲೇಯರ್: ಆಶುತೋಷ್ ಶರ್ಮಾ
ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿ.ಕೀ), ರಾಹುಲ್ ತೆವಾಟಿಯಾ, ಶಾರೂಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಅರ್ಷದ್ ಖಾನ್, ಜೆರಾಲ್ಡ್ ಕೋಯೆಡ್ಜಿ, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ
ಇಂಪ್ಯಾಕ್ಟ್ ಪ್ಲೇಯರ್: ಶೆರ್ಫೆನ್ ಋದರ್‌ಫೋರ್ಡ್
ಪಂದ್ಯದ ವಿವರ
ಐಪಿಎಲ್ 2025-60ನೇ ಪಂದ್ಯ
ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್
ದಿನಾಂಕ: ಮೇ 18, 2025
ಸಮಯ: ಸಂಜೆ 07: 30
ಸ್ಥಳ: ಅರುಣ್ ಜೇಟ್ಲಿ ಕ್ರೀಡಾಂಗಣ, ನವದೆಹಲಿ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ ಹಾಟ್‌ಸ್ಟಾರ್