IPL 2025: ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಕೋಚ್ ಮುನಾಪ್ ಪಟೇಲ್‌ಗೆ ದಂಡ ವಿಧಿಸಿದ ಬಿಸಿಸಿಐ! ಕಾರಣ ಇಲ್ಲಿದೆ
DC vs RR: ರಾಜಸ್ಥಾನ ರಾಯಲ್ಸ್ ವಿರುದ್ಧದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಕೋಚ್ ಮುನಾಫ್ ಪಟೇಲ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 25 ರಷ್ಟು ದಂಡ ವಿಧಿಸಲಾಗಿದೆ. ಇದರ ಜೊತೆಗೆ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಲಾಗಿದೆ.

ಮುನಾಫ್ ಪಟೇಲ್‌ಗೆ ದಂಡ ವಿಧಿಸಿದ ಬಿಸಿಸಿಐ.

ನವದೆಹಲಿ: ರಾಜಸ್ಥಾನ ರಾಯಲ್ಸ್ (Rajasthan Royals) ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಬೌಲಿಂಗ್ ಕೋಚ್ ಮುನಾಫ್ ಪಟೇಲ್ (Munaf Patel) ಅವರಿಗೆ ಪಂದ್ಯ ಶುಲ್ಕದ ಶೇಕಡಾ 25 ರಷ್ಟು ದಂಡ ವಿಧಿಸಲಾಗಿದೆ. ಇದರೊಂದಿಗೆ ಅವರ ಖಾತೆಗೆ ಒಂದು ಡಿಮೆರಿಟ್ ಪಾಯಿಂಟ್ ಸೇರ್ಪಡೆಯಾಗಿದೆ. ಬುಧವಾರ ನಡೆದ ಈ ಪಂದ್ಯ ರೋಮಾಂಚನಕಾರಿಯಾಗಿತ್ತು. ನಿಗದಿತ 20 ಓವರ್‌ಗಳ ಅಂತ್ಯಕ್ಕೆ ಉಭಯ ತಂಡಗಳ ಮೊತ್ತ ಸಮನಾಗಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಸೂಪರ್ ಓವರ್ ಮೋರೆ ಹೋಗಲಾಗಿತ್ತು. ಸೂಪರ್ ಓವರ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಪಡೆದಿತ್ತು.
"ಭಾರತ ತಂಡದ ಮಾಜಿ ವೇಗಿ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಅಡಿಯಲ್ಲಿ ಆಟದ ಉತ್ಸಾಹಕ್ಕೆ ವಿರುದ್ಧವಾದ ನಡವಳಿಕೆಗೆ ಸಂಬಂಧಿಸಿದ ಮೊದಲ ಹಂತದ ಪ್ರಮಾದವನ್ನು ಒಪ್ಪಿಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿ ಕ್ಯಾಪಿಟಲ್ಸ್ ಬೌಲಿಂಗ್ ಕೋಚ್ ಮುನಾಫ್ ಪಟೇಲ್ ಅವರ ಪಂದ್ಯಸ ಸಂಭಾವನೆಯಲ್ಲಿ ಶೇ 25 ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ಅನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ," ಎಂದು ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
IPL 2025: ಓವರ್ ಪೂರ್ತಿಗೊಳಿಸಲು 11 ಎಸೆತ ಎಸೆದು ಅನಗತ್ಯ ದಾಖಲೆ ಬರೆದ ಸಂದೀಪ್ ಶರ್ಮ
ಮುನಾಫ್ ಪಟೇಲ್ ಯಾವ ತಪ್ಪು ಮಾಡಿದ್ದಾರೆಂದು ಹೇಳಿಕೆಯಲ್ಲಿ ತಿಳಿದಿಲ್ಲ. ಆದರೆ, ಪಂದ್ಯದ ವೇಳೆ ನಾಲ್ಕನೇ ಅಂಪೈರ್‌ನೊಂದಿಗೆ ವಾದ ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಕಾರಣದಿಂದಲೇ ಮುನಾಫ್ ಪಟೇಲ್‌ಗೆ ಈ ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮೈದಾನದಲ್ಲಿ ಆಡುತ್ತಿದ್ದ ಆಟಗಾರರಿಗೆ ಸಂದೇಶವನ್ನು ತಲುಪಿಸಲು ಮುನಾಫ್ ಪಟೇಲ್ ಬಯಸಿದ್ದರು. ಆದರೆ, ಪಂದ್ಯದ ಅಧಿಕಾರಿಗಳು ಇದಕ್ಕೆ ಅವಕಾಶ ನೀಡಿರಲಿಲ್ಲ.
RR vs DC: ರಾಜಸ್ಥಾನ್‌ಗೆ ಭಾರಿ ನಿರಾಶೆ, ಸೂಪರ್ ಓವರ್ ಥ್ರಿಲ್ಲರ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್!
ಸೂಪರ್ ಓವರ್ ಥ್ರಿಲ್ಲರ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್
ಇನ್ನೂ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 188 ರನ್‌ಗಳನ್ನು ದಾಖಲಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ಪರ ಅಭಿಷೇಕ್ ಪೊರೆಲ್ 49 ರನ್ ಗಳಿಸಿ ವೈಯಕ್ತಿಕ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು. ಆ ಮೂಲಕ ಎದುರಾಳಿ ರಾಜಸ್ಥಾನ್ ರಾಯಲ್ಸ್‌ಗೆ 189 ರನ್‌ಗಳ ಗುರಿಯನ್ನು ನೀಡಿತ್ತು.
🚨Delhi Capitals bowling coach Munaf Patel has been fined 25% of his match fees and handed 1 demerit point for his heated exchange with the fourth umpire yesterday 🚨#IPL #IPL2025
— Cricketism (@MidnightMusinng) April 17, 2025
pic.twitter.com/X85YSYRzbV
ಇದಕ್ಕೆ ಪ್ರತಿಯಾಗಿ ರಾಜಸ್ಥಾನ್ ರಾಯಲ್ಸ್, ಯಶಸ್ವಿ ಜೈಸ್ವಾಲ್ ಹಾಗೂ ನಿತೀಶ್ ರಾಣಾ ಅವರ ಅರ್ಧಶತಕಗಳ ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 188 ರನ್‌ಗಳಿಗೆ ಸೀಮಿತವಾಗಿತ್ತು. ನಿಗದಿತ 20 ಓವರ್‌ಗಳಲ್ಲಿ ಪಂದ್ಯ ಟೈ ಆದ ನಂತರ ಸೂಪರ್ ಓವರ್ ಆಡಿಸಲಾಗಿತ್ತು. ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 11 ರನ್ ಗಳಿಸಿತು. ಡೆಲ್ಲಿ ತಂಡ 12 ರನ್‌ಗಳ ಗುರಿಯನ್ನು 4 ಎಸೆತಗಳಲ್ಲಿ ತಲುಪಿತು. ಟ್ರಿಸ್ಟನ್ ಸ್ಟಬ್ಸ್ ಸಿಕ್ಸರ್ ಬಾರಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಗೆಲ್ಲಿಸಿದರು. ಈ ಪಂದ್ಯದಲ್ಲಿ ಸೂಪರ್ ಓವರ್‌ಗೆ ಕಾರಣರಾಗಿದ್ದ ಮಿಚೆಲ್ ಸ್ಟಾರ್ಕ್‌ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.