ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಸೇರ್ಪಡೆಯಾದ ಮುಸ್ತಾಫಿಝುರ್‌ ರೆಹಮಾನ್‌!

2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಇನ್ನುಳಿದ ಪಂದ್ಯಗಳಿಗೆ ಬಾಂಗ್ಲಾದೇಶದ ವೇಗಿ ಮುಸ್ತಾಫಿಝುರ್ ರೆಹಮಾನ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿಸಿಕೊಂಡಿದೆ. ಐಪಿಎಲ್ ಮೆಗಾ ಹರಾಜಿನಲ್ಲಿ ಬಾಂಗ್ಲಾ ವೇಗಿ ಅನ್‌ಸೋಲ್ಡ್‌ ಆಗಿದ್ದರು. ಇದೀಗ ಜೇಕ್‌ ಮೆಗರ್ಕ್‌ ಅವರ ಸ್ಥಾನಕ್ಕೆ ರೆಹಮಾನ್‌ಗೆ ಅವಕಾಶ ನೀಡಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ ಸೇರ್ಪಡೆಯಾದ ಮುಸ್ತಾಫಿಝುರ್‌ ರೆಹಮಾನ್‌!

ಡೆಲ್ಲಿ ಕ್ಯಾಪಿಟಲ್ಸ್‌ಗೆ ಸೇರ್ಪಡೆಯಾದ ಮುಸ್ತಾಫಿಝುರ್‌ ರೆಹಮಾನ್‌.

Profile Ramesh Kote May 14, 2025 7:14 PM

ನವದೆಹಲಿ: ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಯ ಇನ್ನುಳಿದ ಪಂದ್ಯಗಳ ನಿಮಿತ್ತ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡ ಒಂದು ದೊಡ್ಡ ಬದಲಾವಣೆಯನ್ನು ಮಾಡಿಕೊಂಡಿದೆ. ಬಾಂಗ್ಲಾದೇಶ ತಂಡದ ವೇಗಿ ಮುಸ್ತಾಫಿಝುರ್ ರೆಹಮಾನ್ (Mustafizur Rahman) ಅವರನ್ನು ಟೂರ್ನಿಯ ಇನ್ನುಳಿದ ಭಾಗಕ್ಕೆ ಡೆಲ್ಲಿ ಫ್ರಾಂಚೈಸಿ ಸಹಿ ಮಾಡಿಸಿಕೊಂಡಿದೆ. ಆಸ್ಟ್ರೇಲಿಯಾದ ಜೇಕ್ ಮೆಗರ್ಕ್ ಬದಲಿಗೆ ಮುಸ್ತಾಫಿಝುರ್ ರೆಹಮಾನ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ವೈಯಕ್ತಿಕ ಕಾರಣಗಳಿಂದಾಗಿ ಮೆಗರ್ಕ್ ಇನ್ನುಳಿದ ಪಂದ್ಯಗಳಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಋತುವಿನಲ್ಲಿ ಆಸೀಸ್‌ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಸ್ತಾಫಿಜುರ್ ರೆಹಮಾನ್ ಅವರನ್ನು 6 ಕೋಟಿ ರೂ. ಗಳಿಗೆ ಸೇರಿಸಿಕೊಂಡಿದೆ. ಜೇಕ್ ಮೆಗರ್ಕ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ 6 ಕೋಟಿ ರೂ. ಗಳಿಗೆ ಉಳಿಸಿಕೊಂಡಿತ್ತು. ಕಳೆದ ಆವೃತ್ತಿಯ ಮುಸ್ತಾಫಿಝುರ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಆಡಿದ್ದರು. ಅಂದ ಹಾಗೆ ಅವರು ಡೆಲ್ಲಿ ಕ್ಯಾಪಿಟಲ್ಸ್ ಪರ ಈ ಹಿಂದೆ ಆಡಿದ್ದಾರೆಂಬುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಅವರು ಹಲವು ವರ್ಷಗಳ ಬಳಿಕ ಡೆಲ್ಲಿ ತಂಡಕ್ಕೆ ಮರಳಿದ್ದಾರೆ.

IPL 2025: ಕೆಕೆಆರ್‌ ವಿರುದ್ದದ ಪಂದ್ಯಕ್ಕೆ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಔಟ್‌?

2025ರ ಐಪಿಎಲ್‌ ಟೂರ್ನಿಯಲ್ಲಿ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಆರಂಭವನ್ನು ಪಡೆದಿತ್ತು. ಆರಂಭದಲ್ಲಿ ಸತತ ಗೆಲುವು ಸಾಧಿಸಿದ್ದ ಡೆಲ್ಲಿ ತಂಡ, ನಂತರ ಸೋಲು ಅನುಭವಿಸಿತ್ತು. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಟೂರ್ನಿಯನ್ನು ಸ್ಥಗಿತಗೊಳ್ಳುವ ಹೊತ್ತಿಗೆ, ಎಲ್ಲಾ ತಂಡಗಳು 11 ಪಂದ್ಯಗಳನ್ನು ಮುಗಿಸಿದ್ದವು. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಒಟ್ಟು 13 ಅಂಕಗಳನ್ನು ಕಲೆ ಹಾಕಿದೆ. ಈ ತಂಡ ತನ್ನ 12ನೇ ಪಂದ್ಯವನ್ನು ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆಡುತ್ತಿದ್ದ ವೇಳೆ ತುರ್ತು ಕಾರಣಗಳಿಂದಾಗಿ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈ ಪಂದ್ಯ ಫಲಿತಾಂಶವನ್ನು ಕಂಡಿರಲಿಲ್ಲ.



ಡೆಲ್ಲಿ ಪ್ಲೇಆಫ್ಸ್‌ಗೆ ತಲುಪಲು ಸಾಧ್ಯವಾಗದಿದ್ದರೆ, ರೆಹಮಾನ್ ಪ್ರತಿ ಪಂದ್ಯಕ್ಕೆ ಸುಮಾರು 2 ಕೋಟಿ ರೂ ಸಂಭಾವನೆಯನ್ನು ಜೇಬಿಗೆ ಇಳಿಸಿಕೊಳ್ಳಿದ್ದಾರೆ. ಏಕೆಂದರೆ ಪಂಜಾಬ್ ಜೊತೆ ಡೆಲ್ಲಿ ಮತ್ತೆ ಪಂದ್ಯವನ್ನು ಆಡಲಿದೆ. ಈ ತಂಡಕ್ಕೆ ಲೀಗ್ ಹಂತದಲ್ಲಿ ಕೇವಲ 3 ಪಂದ್ಯಗಳು ಮಾತ್ರ ಉಳಿದಿವೆ. ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಈ ಪಂದ್ಯಗಳು ಡೆಲ್ಲಿಗೆ ಅತ್ಯಂತ ನಿರ್ಣಾಯಕವಾಗಿವೆ.

ಮುಸ್ತಾಫಿಝುರ್ ರೆಹಮಾನ್ ತಮ್ಮ ಐಪಿಎಲ್‌ ವೃತ್ತಿ ಜೀವನದಲ್ಲಿ ಇಲ್ಲಿಯವರೆಗೂ ಒಟ್ಟು 57 ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ ಅವರು 61 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದಲ್ಲದೆ, ಅವರು ತಮ್ಮ ರಾಷ್ಟ್ರೀಯ ತಂಡ ಬಾಂಗ್ಲಾದೇಶ ಪರ 106 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು ಒಟ್ಟು 132 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ.