ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ತವರು ಅಂಗಣದಲ್ಲಿ ಗೆಲ್ಲಲ್ಲು ಆರ್‌ಸಿಬಿಗೆ ಉಪಯುಕ್ತ ಸಲಹೆ ನೀಡಿದ ಅನಿಲ್‌ ಕುಂಬ್ಳೆ!

Anil Kumble on RCB's Form in Home: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ತವರು ಅಂಗಣ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿದ ಮೂರೂ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಬೆಂಗಳೂರಿನಲ್ಲಿ ಗೆಲ್ಲಲು ಆರ್‌ಸಿಬಿ ಅನಿಲ್‌ ಕುಂಬ್ಳೆ ಉಪಯುಕ್ತ ಸಲಹೆಯನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಗೆಲ್ಲಲು ಆರ್‌ಸಿಬಿಗೆ ಉಪಾಯ ಹೇಳಿಕೊಟ್ಟ ಅನಿಲ್‌ ಕುಂಬ್ಳೆ!

ಆರ್‌ಸಿಬಿಗೆ ಉಪಯುಕ್ತ ಸಲಹೆ ನೀಡಿದ ಅನಿಲ್‌ ಕುಂಬ್ಳೆ.

Profile Ramesh Kote Apr 24, 2025 6:50 PM

ಬೆಂಗಳೂರು: ತವರು ಅಂಗಣ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಸಕ್ತ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯಲ್ಲಿ ಇನ್ನೂ ಒಂದೇ ಒಂದು ಪಂದ್ಯವನ್ನು ಗೆಲ್ಲದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡಕ್ಕೆ ಸ್ಪಿನ್‌ ದಿಗ್ಗಜ ಅನಿಲ್‌ ಕುಂಬ್ಳೆ (Anil Kumble) ಉಪಯುಕ್ತ ಸಲಹೆಯನ್ನು ನೀಡಿದ್ದಾರೆ. ಇಲ್ಲಿನ ಕಂಡೀಷನ್ಸ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಆದರೆ, ಮೊದಲು ಬ್ಯಾಟ್‌ ಮಾಡುವಾಗ ಇಲ್ಲಿನ ಪಿಚ್‌ಗೆ ಹೊಂದಿಕೊಂಡು ಆಡಿದರೆ ಯಶಸ್ವಿಯಾಗಬಹುದು ಎಂದು ಹೇಳಿದ್ದಾರೆ. ಏಪ್ರಿಲ್‌ 24 ರಂದು ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಆರ್‌ಸಿಬಿ ತವರು ಅಂಗಣದಲ್ಲಿ ತನ್ನ ನಾಲ್ಕನೇ ಪಂದ್ಯವನ್ನು ಆಡಲಿದೆ.

ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ತಂಡ ಹದಿನೆಂಟನೇ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನವನ್ನು ತೋರುತ್ತಿದೆ. ಇಲ್ಲಿಯ ತನಕ ಆಡಿದ 8 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಪಡೆದಿದ್ದರೆ, ಇನ್ನುಳಿ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಸೋತ ಮೂರೂ ಪಂದ್ಯಗಳನ್ನು ಆರ್‌ಸಿಬಿ ತನ್ನ ತವರು ಅಂಗಣದಲ್ಲಿ. ಗುಜರಾತ್‌ ಟೈಟನ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ವಿರುದ್ಧ ಸೋಲು ಅನುಭವಿಸಿದೆ. ಈ ಸೋತ ಮೂರೂ ಪಂದ್ಯಗಳಲ್ಲಿ ಆರ್‌ಸಿಬಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿತ್ತು.

IPL 2025: ಐಪಿಎಲ್‌ನಲ್ಲಿ ಅನಗತ್ಯ ದಾಖಲೆ ಬರೆದ ಕನ್ನಡಿಗ ಅಭಿನವ್

ಮಾಧ್ಯಮವೊಂದರಲ್ಲಿ ಮಾತನಾಡಿದ ಅನಿಲ್‌ ಕುಂಬ್ಳೆ,"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ತಂಡದ ಆಟ ಅಷ್ಟೊಂದು ಉತ್ತಮವಾಗಿಲ್ಲ. ಆರ್‌ಸಿಬಿ ಉತ್ತಮ ರನ್‌ಗಳನ್ನು ಕಲೆ ಹಾಕಿದ್ದರೆ, ಆಗ ಅವರ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನವನ್ನು ತೋರುತ್ತಾರೆ. ಇಲ್ಲಿನ ಪಿಚ್‌ ಅನ್ನು ನಿರ್ಣಯಿಸುವುದು ನಿಜವಾಗಿಯೂ ಮುಖ್ಯವಾಗುತ್ತದೆ ಆದರೆ, ಇಲ್ಲಿ ಮೊದಲು ಬ್ಯಾಟ್‌ ಮಾಡುವಾಗ ಅವರು ಈ ಕೆಲಸವನ್ನು ಸರಿಯಾಗಿ ಮಾಡಿಲ್ಲ," ಎಂದು ತಿಳಿಸಿದ್ದಾರೆ.

ಇದೀಗ ಏಪ್ರಿಲ್‌ 24 ರಂದು ತಮ್ಮ ತವರು ಅಂಗಣದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಎದುರು ಆರ್‌ಸಿಬಿ ಕಾದಾಟ ನಡೆಸಲಿದೆ. ಈಗಾಗಲೇ ಇದೇ ತಂಡದ ವಿರುದ್ದ ಜೈಪುರದಲ್ಲಿ ಆರ್‌ಸಿಬಿ ಗೆಲುವು ಪಡೆದಿತ್ತು. ಇದೀಗ ಎರಡನೇ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಅನುಪಸ್ಥಿತಿಯಲ್ಲಿ ಮಣಿಸಲು ಆರ್‌ಸಿಬಿ ಎದುರು ನೋಡುತ್ತಿದೆ. ಆರ್‌ಸಿಬಿ ಪರ ಫಿಲ್‌ ಸಾಲ್ಟ್‌, ವಿರಾಟ್‌ ಕೊಹ್ಲಿ ಹಾಗೂ ದೇವದತ್‌ ಪಡಿಕ್ಕಲ್‌ ಉತ್ತಮ ಫಾರ್ಮ್‌ನಲ್ಲಿದ್ದಾರೆ.

RCB vs RR: ಇಂದು ಆರ್‌ಸಿಬಿ-ರಾಜಸ್ಥಾನ್‌ ಕಾದಾಟ; ಹವಾಮಾನ ವರದಿ ಹೇಗಿದೆ?

ಆಡಿರುವ 8 ಪಂದ್ಯಗಳಲ್ಲಿ 10 ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ. ಗುರುವಾರ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮಣಿಸಿದರೆ, ಆರ್‌ಸಿಬಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಲಿದೆ. ಸದ್ಯ ಗುಜರಾತ್‌ ಟೈಟನ್ಸ್‌ ಅಗ್ರ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳಲ್ಲಿವೆ.