IPL 2025: ಬೆಂಗಳೂರಿಗೆ ಸುರಕ್ಷಿತವಾಗಿ ಆಗಮಿಸಿದ ಆರ್‌ಸಿಬಿ ಆಟಗಾರರು!
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಒಂದು ವಾರ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಸುರಕ್ಷಿತವಾಗಿ ಬೆಂಗಳೂರಿಗೆ ಶನಿವಾರ ಆಗಮಿಸಿದ್ದಾರೆ. ಈ ಬಗ್ಗೆ ಆರ್‌ಸಿಬಿ ತನ್ನ ಟ್ವಿಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದೆ. ಬೆಂಗಳೂರಿನಿಂದ ಎಲ್ಲಾ ಆಟಗಾರರು, ಅವರವರ ನಗರ ಅಥವಾ ದೇಶಗಳಿಗೆ ತೆರಳಲಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಆರ್‌ಸಿಬಿ ಆಟಗಾರರು.

ಬೆಂಗಳೂರು: ಭಾರತ ಹಾಗೂ ಪಾಕಿಸ್ತಾನ (IND vs PAK war) ನಡುವಣ ಉದ್ವಿಗ್ನ ಪರಿಸ್ಥಿತಿಯ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿನಿಂದ ಎಲ್ಲಾ ಆಟಗಾರರು ತಮ್ಮ-ತಮ್ಮ ನಗರಗಳು ಹಾಗೂ ತಮ್ಮ ದೇಶಗಳಿಗೆ ಮರಳಲಿದ್ದಾರೆಂದು ಬೆಂಗಳೂರು ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ. ಶನಿವಾರ ಸಂಜೆ ಭಾರತ ಹಾಗೂ ಪಾಕಿಸ್ತಾನ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಭಾರತ ಸರ್ಕಾರ ಹಾಗೂ ಎಲ್ಲಾ ಫ್ರಾಂಚೈಸಿಗಳು ಮತ್ತು ಪಾಲುದಾರಿಕೆ ಸಂಸ್ಥೆಗಳ ಜೊತೆ ಚರ್ಚೆ ನಡೆಸಿ ಮುಂದಿನ ನಿರ್ಧಾರವನ್ನು ಇನ್ನೆರಡು ದಿನಗಳನ್ನು ಪ್ರಕಟಿಸಬಹುದು.
"ನಮ್ಮ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ್ದಾರೆ ಹಾಗೂ ಅವರೆಲ್ಲರೂ ತಮ್ಮ-ತಮ್ಮ ನಗರಗಳು ಹಾಗೂ ತಮ್ಮ ತಮ್ಮ ದೇಶಗಳಿಗೆ ಹಿಂತಿರುಗಲಿದ್ದಾರೆ," ಎಂದು ಆರ್‌ಸಿಬಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
"ನಾವು ಸುರಕ್ಷಿತವಾಗಿ ಬೆಂಗಳೂರಿಗೆ ಆಗಮಿಸಲು ನೆರವು ನೀಡಿದ ಬಿಸಿಸಿಐ, ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸರ ತ್ವರಿತ ಸಮನ್ವಯ ಮತ್ತು ಬೆಂಬಲಕ್ಕಾಗಿ ನಾವು ತುಂಬಾ ಕೃತಜ್ಞರಾಗಿರುತ್ತೇವೆ," ಎಂದು ಆರ್‌ಸಿಬಿ ಹೇಳಿದೆ.
IPL 2025: ʻಇನ್ನುಳಿದ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಡಿಸಿʼ-ಬಿಸಿಸಿಐಗೆ ಮೈಕಲ್ ವಾನ್ ಸಲಹೆ!
ಗುರುವಾರ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಅರ್ಧದಲ್ಲಿಯೇ ನಿಲ್ಲಿಸಲಾಗಿತ್ತು. ಭಾರತದ ಗಡಿ ಭಾಗದಲ್ಲಿ ಪಾಕಿಸ್ತಾನ ಡ್ರೋನ್‌ಗಳ ಮೂಲಕ ದಾಳಿ ನಡೆಸಿತ್ತು. ಅಲ್ಲದೆ ಕ್ರೀಡಾಂಗಣದ ಲೈಟ್‌ಗಳಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ನಂತರ ಪ್ರತಿಕ್ರಿಯಿಸಿದ್ದ ಬಿಸಿಸಿಐ, ಆಟಗಾರರು ಹಾಗೂ ಪ್ರೇಕ್ಷಕರ ಸುರಕ್ಷತೆಯ ಅಂಗವಾಗಿ ನಾವು ಪಂದ್ಯವನ್ನು ನಿಲ್ಲಿಸಿದ್ದೆವು ಎಂದು ತಿಳಿಸಿತ್ತು.
Our players and extended staff have safely returned to Bengaluru and are now homebound to their respective cities and countries. 🙌
— Royal Challengers Bengaluru (@RCBTweets) May 10, 2025
We’re deeply grateful for the swift coordination and support from the BCCI, local authorities, and the police who made this possible. 🙏🇮🇳… pic.twitter.com/8IatIo5Wwl
ಐಪಿಎಲ್ ಟೂರ್ನಿಯನ್ನು ಅರ್ಧಕ್ಕೆ ನಿಲ್ಲಿಸಿರುವುದು ಇದೇ ಮೊದಲೇನಲ್ಲ. 2021ರಲ್ಲಿಯೂ ಕೋವಿಡ್-19 ಕಾರಣ ಟೂರ್ನಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ನಂತರ ಟೂರ್ನಿಯ ಎರಡನೇ ಭಾಗವನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು.
ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಜೂನ್ 11 ರಂದು ಆರಂಭವಾಗಲಿದೆ. ಭಾರತ ತಂಡ ಇಂಗ್ಲೆಂಡ್ ಪ್ರವಾಸ ಹಮ್ಮಿಕೊಳ್ಳಲಿದ್ದು, ಜೂನ್ 20ರಿಂದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಹಾಗಾಗಿ ಈ ತಿಂಗಳ ಆರಂಭದ ಹೊತ್ತಿಗೆ ಐಪಿಎಲ್ ಟೂರ್ನಿಯನ್ನು ಮುಗಿಸಬೇಕೆಂಬ ಸವಾಲು ಬಿಸಿಸಿಐ ಮುಂದಿದೆ. ಶನಿವಾರ ಸಂಜೆ ಭಾರತ ಹಾಗೂ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ವಾರದಲ್ಲಿ ಐಪಿಎಲ್ ಟೂರ್ನಿಯ ಮುಂದಿನ ಪಂದ್ಯಗಳ ವೇಳಾಪಟ್ಟಿಯಲ್ಲಿ ಪ್ರಕಟಿಸಬಹುದು.
IPL 2025: ಫಾರ್ಮ್ ಕಂಡುಕೊಳ್ಳಲು ರಿಷಭ್ ಪಂತ್‌ಗೆ ಮಹತ್ವದ ಸಲಹೆ ನೀಡಿದ ನವಜೋತ್ ಸಿಧು!
ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ
ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರ್‌ಸಿಬಿ ಅತ್ಯುತ್ತಮ ಪ್ರದರ್ಶನವನ್ನು ತೋರಿದೆ. ಇಲ್ಲಿಯ ತನಕ ಆಡಿದ 11 ಪಂದ್ಯಗಳಲ್ಲಿ ಎಂಟರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಒಟ್ಟು 16 ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ, ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಇನ್ನುಳಿದ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದರೆ ಆರ್‌ಸಿಬಿಯ ಪ್ಲೇಆಫ್ಸ್ ಸ್ಥಾನ ಭದ್ರವಾಗಲಿದೆ.