RCB vs RR: 100 ಟಿ20 ಅರ್ಧಶತಕಗಳನ್ನು ಸಿಡಿಸಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ!
Virat Kohli hits 100 T20 Fifties: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಟಿ20 ಕ್ರಿಕೆಟ್ ವೃತ್ತಿ ಜೀವನದಲ್ಲಿ 100 ಅರ್ಧಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಹಾಗೂ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.

100 20 ಅರ್ಧಶತಕಗಳನ್ನು ಪೂರ್ಣಗೊಳಿಸಿದ ವಿರಾಟ್ ಕೊಹ್ಲಿ.

ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ(Virat Kohli) ತಮ್ಮ ಟಿ20 ವೃತ್ತಿ ಜೀವನದಲ್ಲಿ 100 ಅರ್ಧಶತಕಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಭಾನುವಾರ ಇಲ್ಲಿನ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರಿನ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 28ನೇ ಪಂದ್ಯದಲ್ಲಿ(RCB vs RR) ವಿರಾಟ್ ಕೊಹ್ಲಿ ಈ ಸಾಧನೆಗೆ ಭಾಜನರಾಗಿದ್ದಾರೆ. ಆರ್‌ಸಿಬಿ ಪರ ಸ್ಪೋಟಕ ಬ್ಯಾಟ್ ಮಾಡಿದ ಕಿಂಗ್ ಕೊಹ್ಲಿ 39 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಅಂದ ಹಾಗೆ ಈ ಪಂದ್ಯದಲ್ಲಿ ಬೆಂಗಳೂರು ತಂಡ 9 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು.
ಆಸ್ಟ್ರೇಲಿಯಾ ಮಾಜಿ ಆರಂಭಿಕ ಡೇವವಿಡ್ ವಾರ್ನರ್ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗನ್ನು ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ. ಇವರು ಸದ್ಯ ಪಾಕಿಸ್ತಾನ್ ಸೂಪರ್ ಲೀಗ್ ಟೂರ್ನಿಯಲ್ಲಿ ಕರಾಚಿ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ವರ್ಷ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕವನ್ನು ಸಿಡಿಸುವ ಮೂಲಕ ಡೇವಿಡ್ ವಾರ್ನರ್ ಈ ಮೈಲುಗಲ್ಲು ತಲುಪಿದ್ದರು.
RCB vs RR: ಪಿಂಕ್ ಸಿಟಿಯಲ್ಲಿ ರಾಜಸ್ಥಾನ್‌ಗೆ ಸೋಲಿನ ಬರೆ ಎಳೆದ ಆರ್‌ಸಿಬಿ!
ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ವಾನಿಂದು ಹಸರಂಗ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಮ್ಮ 100ನೇ ಟಿ20 ಅರ್ಧಶತಕವನ್ನು ಪೂರ್ಣಗೊಳಿಸಿದ್ದರು. ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಯಿಂಗ್ XIನಲ್ಲಿ ಫಝಲಕ್ ಫಾರೂಕಿ ಅವರ ಸ್ಥಾನದಲ್ಲಿ ವಾನಿಂದು ಹಸರಂಗ ಆಡಿದ್ದರು. ಆದರೆ, ಅವರು ಬೌಲಿಂಗ್‌ನಲ್ಲಿ ಪರಿಣಾಮಕಾರಿಯಾಗುವಲ್ಲಿ ವಿಫಲರಾಗಿದ್ದರು.
ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದವರು
ಡೇವಿಡ್ ವಾರ್ನರ್-100
ವಿರಾಟ್ ಕೊಹ್ಲಿ-100
ಬಾಬರ್ ಆಝಮ್- 90
ಕ್ರಿಸ್ ಗೇಲ್-88
ಜೋಸ್ ಬಟ್ಲರ್-86
Scored a fifty but crossed a century today! 😎
— Royal Challengers Bengaluru (@RCBTweets) April 13, 2025
Virat Kohli now has the joint-most 50+ scores in the IPL. 🤯 pic.twitter.com/NaII5Sz2c5
ಭರ್ಜರಿ ಫಾರ್ಮ್‌ನಲ್ಲಿ ವಿರಾಟ್ ಕೊಹ್ಲಿ
ಪ್ರಸ್ತುತ ನಡೆಯುತ್ತಿರುವ 2025ರ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಅವರು ಇಲ್ಲಿಯ ತನಕ ಆಡಿದ ಆರು ಪಂದ್ಯಗಳಿಂದ 62ರ ಸರಾಸರಿ ಹಾಗೂ 143.35ರ ಸ್ಟ್ರೈಕ್ ರೇಟ್‌ನಲ್ಲಿ 248 ರನ್‌ಗಳನ್ನು ಸಿಡಿಸಿದ್ದಾರೆ. ಇದರಲ್ಲಿ ಅವರು ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಗಳಿಸಿದ್ದ 67 ರನ್ ಇವರ ಪ್ರಸಕ್ತ ಆವೃತ್ತಿಯಲ್ಲಿ ಇಲ್ಲಿಯವರೆಗಿನ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.
13000 ರನ್ ಕಲೆ ಹಾಕಿದ್ದ ಕೊಹ್ಲಿ
ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕವನ್ನು ಸಿಡಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 3000 ರನ್‌ಗಳನ್ನು ಪೂರ್ಣಗೊಳಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಅವರು ತಮ್ಮ 386ನೇ ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದರು. ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್ 381ನೇ ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದರು.