ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ವಿರಾಟ್‌ ಕೊಹ್ಲಿ ದಾಖಲೆ ಮುರಿದ ರೋಹಿತ್‌ ಶರ್ಮಾ!

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 73 ರನ್‌ಗಳ ಅದ್ಭುತ ಇನಿಂಗ್ಸ್‌ನೊಂದಿಗೆ ಆರ್‌ಸಿಬಿ ಗೆಲುವಿಗೆ ನೆರವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಪ್ರಶಸ್ತಿಯೊಂದಿಗೆ ಅವರು ರೋಹಿತ್ ಶರ್ಮಾ ಅವರ 19 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಸರಿಗಟ್ಟಿದ್ದರು. ಇದಾದ ಕೆಲವೇ ಗಂಟೆಗಳನ್ನು ಕೊಹ್ಲಿಯನ್ನು ರೋಹಿತ್ ಶರ್ಮಾ ಹಿಂದಿಕ್ಕಿದ್ದಾರೆ.

ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ರೋಹಿತ್‌ ಶರ್ಮಾ.

ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ 37ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಅದ್ಭುತ ಇನಿಂಗ್ಸ್‌ ಆಡಿದರು. ರನ್ ಚೇಸ್‌ಲ್ಲಿ ಅವರು 54 ಎಸೆತಗಳಲ್ಲಿ ಅಜೇಯ 73 ರನ್ ಗಳಿಸಿದರು ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ 7 ವಿಕೆಟ್‌ಗಳ ಗೆಲುವಿಗೆ ನೆರವು ನೀಡಿದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಇದರೊಂದಿಗೆ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವ ಪಟ್ಟಿಯಲ್ಲಿ ರೋಹಿತ್‌ ಶರ್ಮಾ(19) ಅವರ ದಾಖಲೆಯನ್ನು ಸರಿಗಟ್ಟಿದರು. ಆದರೆ, ಇದಾದ ಕೆಲವೇ ಗಂಟೆಗಳನ್ನು ರೋಹಿತ್‌ ಶರ್ಮಾ, ಆರ್‌ಸಿಬಿ ಮಾಜಿ ನಾಯಕನನ್ನು ಹಿಂದಿಕ್ಕಿದ್ದಾರೆ.

ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಕೂಡಲೇ ರೋಹಿತ್ ಶರ್ಮಾ ಅವರನ್ನು ಸರಿಗಟ್ಟಿದರು. ಐಪಿಎಲ್ ಇತಿಹಾಸದಲ್ಲಿ ವಿರಾಟ್ 19ನೇ ಬಾರಿ ಮ್ಯಾನ್‌ ಆಫ್‌ ದಿ ಮ್ಯಾಚ್‌ ಪ್ರಶಸ್ತಿಯನ್ನು ಗೆದ್ದರು. ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ 19 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದರು. ಭಾರತೀಯ ಆಟಗಾರರ ಪೈಕಿ ಅತ್ಯಧಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ರೋಹಿತ್‌ ಶರ್ಮಾ ಎನಿಸಿಕೊಂಡಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ 18 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

MI vs CSK: ರೋಹಿತ್‌-ಸೂರ್ಯ ಅಬ್ಬರ, ಮುಂಬೈ ಇಂಡಿಯನ್ಸ್‌ಗೆ ಹ್ಯಾಟ್ರಿಕ್‌ ಜಯ!

ಮತ್ತೆ ಅಗ್ರ ಸ್ಥಾನಕ್ಕೆ ಮರಳಿದ ರೋಹಿತ್‌ ಶರ್ಮಾ

ಏಪ್ರಿಲ್‌ 20 ರಂದು ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ವಿರಾಟ್ ಕೊಹ್ಲಿ, ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರನ್ನು ಸರಿಗಟ್ಟಿದ್ದರು. ಆದರೆ, ಇದೇ ದಿನ ರಾತ್ರಿ 11 ಗಂಟೆಗೆ ರೋಹಿತ್ ಶರ್ಮಾ ಮತ್ತೊಮ್ಮೆ ವಿರಾಟ್‌ ಕೊಹ್ಲಿಯನ್ನು ಈ ಪಟ್ಟಿಯಲ್ಲಿ ಹಿಂದಿಕ್ಕಿದರು. ಮುಂಬೈ ಇಂಡಿಯನ್ಸ್‌ನ ಮಾಜಿ ನಾಯಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 76 ರನ್‌ಗಳ ಇನಿಂಗ್ಸ್‌ ಆಡಿದರು. ಅವರು 45 ಎಸೆತಗಳಲ್ಲಿ 4 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಾಯದಿಂದ ಈ ಮೊತ್ತವನ್ನು ಕಲೆ ಹಾಕಿದರು. ಆ ಮೂಲಕ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಐಪಿಎಲ್‌ನಲ್ಲಿ ರೋಹಿತ್ ಶರ್ಮಾ 20ನೇ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.



ಅಗ್ರ ಸ್ಥಾನದಲ್ಲಿ ಎಬಿ ಡಿ ವಿಲಿಯರ್ಸ್‌

ಐಪಿಎಲ್‌ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಆಟಗಾರ ಎಂಬ ದಾಖಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್‌ ಹೆಸರಿನಲ್ಲಿದೆ. ಡೆಲ್ಲಿ ಡೇರ್‌ ಡೆವಿಲ್ಸ್‌(ಈಗಿನ ಡೆಲ್ಲಿ ಕ್ಯಾಪಿಟಲ್ಸ್‌) ಮತ್ತು ಆರ್‌ಸಿಬಿ ಪರ ಆಡುವಾಗ ಎಬಿಡಿ 25 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಕ್ರಿಸ್ ಗೇಲ್ 22 ಬಾರಿ ಗೆದ್ದು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 2008ರಲ್ಲಿ ಕೆಕೆಆರ್ ಪರ ಪದಾರ್ಪಣೆ ಮಾಡಿದ ಗೇಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲೂ ಆಡಿದ್ದಾರೆ. ಒಟ್ಟಾರೆ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವರು

ಎಬಿ ಡಿ ವಿಲಿಯರ್ಸ್‌: 25 (184)

ಕ್ರಿಸ್‌ ಗೇಲ್‌: 22 (142 ಪಂದ್ಯಗಳು)

ರೋಹಿತ್‌ ಶರ್ಮಾ: 20 (264 ಪಂದ್ಯಗಳು)

ವಿರಾಟ್‌ ಕೊಹ್ಲಿ: 19 (260 ಪಂದ್ಯಗಳು)

ಎಂಎಸ್‌ ಧೋನಿ: 18 (272 ಪಂದ್ಯಗಳು)

ಡೇವಿಡ್‌ ವಾರ್ನರ್‌: 18 (184 ಪಂದ್ಯಗಳು)