GT vs PBKS: ಹೈಸ್ಕೋರಿಂಗ್ ಕದನದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಕಟ್ಟಿ ಹಾಕಿದ ಪಂಜಾಬ್ ಕಿಂಗ್ಸ್!
GT vs PBKS Match Highlights: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹೈಸ್ಕೋರಿಂಗ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರು ಪಂಜಾಬ್ ಕಿಂಗ್ಸ್ ತಂಡ 11 ರನ್‌ಗಳಿಂದ ಗೆಲುವು ಸಾಧಿಸಿತು. ಆ ಮೂಲಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್ ಮೊದಲ ಜಯವನ್ನು ಪಡೆದಿದೆ.

ಗುಜರಾತ್ ಟೈಟನ್ಸ್ ಎದುರು ಪಂಜಾಬ್ ಕಿಂಗ್ಸ್‌ಗೆ 11 ರನ್ ಜಯ.

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಹೈಸ್ಕೋರಿಂಗ್ ಪಂದ್ಯದಲ್ಲಿ (GT vs PBKS) ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ 11 ರನ್‌ಗಳಿಂದ ಗೆಲುವು ಪಡೆಯಿತು. ಆ ಮೂಲಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್ ಮೊದಲ ಗೆಲುವು ಪಡೆಯುವ ಮೂಲಕ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಖಾತೆಯನ್ನು ತೆರೆದಿದೆ. ಕೊನೆಯ ಓವರ್‌ವರೆಗೂ ಕಠಿಣ ಹೋರಾಟ ನಡೆಸಿದ ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತವರು ಅಭಮಾನಿಗಳ ಎದುರು ಸೋಲು ಅನುಭವಿಸಿತು.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಪಂಜಾಬ್ ಕಿಂಗ್ಸ್ ತಂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶನವನ್ನು ತೋರಿತ್ತು. ಶ್ರೇಯಸ್ ಅಯ್ಯರ್ (97* ರನ್) ಅಬ್ಬರದ ಬ್ಯಾಟಿಂಗ್ ಬಲದಿಂದ ಪಂಜಾಬ್ ಕಿಂಗ್ಸ್ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 243 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ 244 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಬಳಿಕ ಗುರಿ ಹಿಂಬಾಲಿಸಿದ ಗುಜರಾತ್ ಟೈಟನ್ಸ್ ತಂಡ, ಸಾಯ್ ಸುಂದರ್ಶನ್ (74 ರನ್) ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಉತ್ತಮ ಪ್ರದರ್ಶನದ ಹೊರತಾಗಿಯೂ ಡೆತ್ ಓವರ್‌ಗಳಲ್ಲಿನ ವೈಫಲ್ಯದಿಂದ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 5 ವಿಕೆಟ್‌ಗಳ ನಷ್ಟಕ್ಕೆ 231 ರನ್‌ಗಳಿಗೆ ಸೀಮಿತವಾಯಿತು.
IPL 2025: ಅಜೇಯ 97 ರನ್ ಗಳಿಸಿ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದ ಶ್ರೇಯಸ್ ಅಯ್ಯರ್!
ಸ್ಪೋಟಕ ಆರಂಭ ಪಡೆದಿದ್ದ ಗುಜರಾತ್
ಬೃಹತ್ ಮೊತ್ತದ ಗುರಿ ಹಿಂಬಾಲಿಸಿದ ಗುಜರಾತ್ ಟೈಟನ್ಸ್ ತಂಡದ ಪರ ಅಗ್ರ ಕ್ರಮಾಂಕದ ನಾಲ್ವರು ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಇನಿಂಗ್ಸ್ ಆರಂಭಸಿದ್ದ ನಾಯಕ ಶುಭಮನ್ ಗಿಲ್ ಹಾಗೂ ಸಾಯ್ ಸುದರ್ಶನ್ ಅವರು ಮೊದಲನೇ ವಿಕೆಟ್‌ಗೆ 61 ರನ್‌ಗಳನ್ನು ಕಲೆ ಹಾಕಿದ್ದರು. ಆರಂಭದಲ್ಲಿ ಶುಭಮನ್ ಗಿಲ್ 235.71ರ ಸ್ಟ್ರೈಕ್ ರೇಟ್‌ನಲ್ಲಿ 14 ಎಸೆತಗಳಲ್ಲಿ 34 ರನ್ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ತಂದುಕೊಟ್ಟು ಔಟ್ ಆದರು. ನಂತರ ಸಾಯ್ ಸುದರ್ಶನ್ ಅವರು 41 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 74 ರನ್ ಗಳಿಸಿ ತಂಡದ ಮೊತ್ತವನ್ನು 13ನೇ ಓವರ್‌ನಲ್ಲಿ 145ಕ್ಕೆ ತಂದಿದ್ದರು. ಆದರೆ, ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಂತಿದ್ದ ಅವರನ್ನು ಅರ್ಷದೀಪ್ ಸಿಂಗ್ ಔಟ್ ಮಾಡಿದರು.
Punjab Kings hold their nerves in the end to clinch a splendid win against Gujarat Titans ❤️
— IndianPremierLeague (@IPL) March 25, 2025
Scorecard ▶ https://t.co/PYWUriwSzY#TATAIPL | #GTvPBKS | @PunjabKingsIPL pic.twitter.com/0wy29ODStQ
ಜೋಸ್ ಬಟ್ಲರ್ ಅರ್ಧಶತಕ
ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು 18ನೇ ಓವರ್‌ವರೆಗೂ ಕ್ರೀಸ್‌ನಲ್ಲಿದ್ದ ಜೋಸ್ ಬಟ್ಲರ್, 33 ಎಸೆತಗಳಲ್ಲಿ 54 ರನ್ ಗಳಿಸಿ ಗುಜರಾತ್ ತಂಡವನ್ನು ಗೆಲ್ಲಿಸುವ ಪ್ರಯತ್ನದಲ್ಲಿದ್ದರು. ಆದರೆ, ಮಾರ್ಕೊ ಯೆನ್ಸನ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಬೌಲ್ಡ್ ಆದರು. ಇನ್ನು ಕೊನೆಯವರೆಗೂ ಸ್ಪೋಟಕ ಬ್ಯಾಟ್ ಮಾಡಿ ಜಿಟಿಗೆ ಗೆಲುವಿನ ಭರವಸೆ ಮೂಡಿಸಿದ್ದ 28 ಎಸೆತಗಳಲ್ಲಿ 46 ರನ್ ಗಳಿಸಿದ ಶೆರ್ಫೆನ್ ಋದರ್‌ಫೋರ್ಡ್ ಅವರನ್ನು ಅರ್ಷದೀಪ್ ಔಟ್ ಮಾಡಿದರು. ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದಿದ್ದ ಕನ್ನಡಿಗ ವೈಶಾಖ್ ವಿಜಯ್‌ಕುಮಾರ್ ಡೆತ್ ಓವರ್‌ಗಳಲ್ಲಿ ಪರಿಣಾಮಕಾರಿಯಾಗಿ ಬೌಲ್ ಮಾಡಿದ್ದರು. ತಮ್ಮ ಮೂರನೇ ಓವರ್‌ನಲ್ಲಿ 18 ರನ್ ನೀಡಿದರೂ ಆರಂಭಿಕ ಎರಡು ಓವರ್‌ಗಳಲ್ಲಿ ತಲಾ 5 ರನ್ ನೀಡಿ ಪಂಜಾಬ್‌ಗೆ ಮೇಲುಗೈ ತಂದುಕೊಟ್ಟಿದ್ದರು.
𝙏𝙝𝙖𝙩'𝙨 𝙝𝙤𝙬 𝙮𝙤𝙪 𝙡𝙚𝙖𝙙 𝙛𝙧𝙤𝙢 𝙩𝙝𝙚 𝙛𝙧𝙤𝙣𝙩 🫡
— IndianPremierLeague (@IPL) March 25, 2025
A perfect start as #PBKS skipper for Shreyas Iyer to guide his team to a splendid win! ❤️
Scorecard ▶ https://t.co/PYWUriwSzY#TATAIPL | #GTvPBKS | @PunjabKingsIPL | @ShreyasIyer15 pic.twitter.com/LdjeEOOAfb
ಮಿಂಚಿನ ಬ್ಯಾಟಿಂಗ್ ತೋರಿದ್ದ ಶ್ರೇಯಸ್ ಅಯ್ಯರ್
ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ್ದ ಪಂಜಾಬ್ ಕಿಂಗ್ಸ್ ಪರ ನಾಯಕ ಶ್ರೇಯಸ್ ಅಯ್ಯರ್ 230.95ರ ಸ್ಟ್ರೈಕ್ ರೇಟ್‌ನಲ್ಲಿ ಆಡುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದರು. ಅವರು ಕೇವಲ 42 ಎಸೆತಗಳಲ್ಲಿ ಬರೋಬ್ಬರಿ 9 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ ಅಜೇಯ 97 ರನ್‌ಗಳನ್ನು ಸಿಡಿಸಿದ್ದರು. ಆ ಮೂಲಕ ಪಂಜಾಬ್ ದೊಡ್ಡ ಮೊತ್ತವನ್ನು ಕಲೆ ಹಾಕುವಲ್ಲಿ ನೆರವು ನೀಡಿದ್ದರು. ಇವರ ಜೊತೆಗೆ ಡೆತ್ ಓವರ್‌ಗಳಲ್ಲಿ ಸ್ಪೋಟಕ ಬ್ಯಾಟ್ ಮಾಡಿದ್ದ ಶಶಾಂಕ್ ಸಿಂಗ್ ಕೇವಲ 16 ಎಸೆತಗಳಲ್ಲಿ ಅಜೇಯ 44 ರನ್‌ಗಳನ್ನು ಸಿಡಿಸಿದ್ದರು. ಇವರು 275ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದರು. ಇವರಿಬ್ಬರ ಜೊತೆಗೆ ಆರಂಭಿಕ ಬ್ಯಾಟರ್ ಪ್ರಿಯಾಂಶ್ ಆರ್ಯ 23 ಎಸೆತಗಳಲ್ಲಿ 47 ರನ್ ಸಿಡಿಸಿ ಪಂಜಾಬ್‌ಗೆ ಉತ್ತಮ ಆರಂಭ ತಂದುಕೊಟ್ಟಿದ್ದರು.