IPL 2025: ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆಯಲು ವಿರಾಟ್ ಕೊಹ್ಲಿಗೆ ಒಂದು ಶತಕ ಅಗತ್ಯ!
Virat Kohli need one Century: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಇದೀಗ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ಇದೀಗ ಅವರು ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.

ಟಿ20 ಶತಕಗಳ ಸನಿಹದಲಿ ವಿರಾಟ್ ಕೊಹ್ಲಿ.

ನವದೆಹಲಿ: ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅದರಂತೆ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ವಿರಾಟ್ ಕೊಹ್ಲಿ ಕೂಡ ಮಹತ್ತರ ಪಾತ್ರವನ್ನು ವಹಿಸಿದ್ದಾರೆ. ಇದೀಗ ಅವರು 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಲು ಎದುರು ನೋಡುತ್ತಿದ್ದಾರೆ. ಇದೀಗ ಅವರು ಟಿ20 ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಆರ್‌ಸಿಬಿ ನಾಯಕ ಐಪಿಎಲ್ ಟೂರ್ನಿಯಲ್ಲಿ ಒಂದೇ ಒಂದು ಶತಕವನ್ನು ಸಿಡಿಸಿದರೆ, ಅವರು ಭಾರತದ ಪರ ಚುಟುಕು ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆಯಲಿದ್ದಾರೆ.
ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದರು. ಅವರು ಪಾಕಿಸ್ತಾನದ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ ಶತಕವನ್ನು ಸಿಡಿಸಿದ್ದರು ಹಾಗೂ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 84 ರನ್‌ಗಳನ್ನು ಕಲೆ ಹಾಕಿದ್ದರು. ಈ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027ರ ವಿಶ್ವಕಪ್ ಆಡಬೇಕೆಂದ ಯೋಗರಾಜ್ ಸಿಂಗ್!
ಆದರೆ, ಮಾರ್ಚ್ 9 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ ಒಂದು ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಆ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದ್ದರು. ಇದೀಗ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡಲು ಎದುರು ನೋಡುತ್ತಿದ್ದಾರೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ.ಗಳಿಗೆ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಂಡಿತ್ತು.
ವಿಶೇಷ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ
ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆಯಲು ವಿರಾಟ್ ಕೊಹ್ಲಿಗೆ ಕೇವಮ ಒಂದು ಶತಕದ ಅಗತ್ಯವಿತ್ತು. ಅವರು ಇಲ್ಲಿಯವರೆಗೂ 9 ಶತಕಗಳನ್ನು ಸಿಡಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಭಾರತದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಮುಂದಿನ ಐಪಿಎಲ್ ಟೂರ್ನಿಯಲ್ಲಿ ಒಂದೇ ಒಂದು ಶತಕವನ್ನು ಸಿಡಿಸಿದರೆ, 10 ಶತಕಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.
2016ರ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ತನ್ನ ಮೊದಲನೇ ಶತಕವನ್ನು ಸಿಡಿಸಿದ್ದರು. ಟಿ20 ಕ್ರಿಕೆಟ್‌ನಲ್ಲಿ ಎಂಟು ಶತಕಗಳನ್ನು ಹೊಂದಿರುವ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದು ಶತಕವನ್ನು ಬಾರಿಸಿದ್ದಾರೆ. 2022ರ ಏಷ್ಯಾ ಕಪ್ ಟೂರ್ನಿಯ ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕವನ್ನು ಸಿಡಿಸಿದ್ದರು. ಇದು ಇವರ ಏಕೈಕ ಟಿ20ಐ ಶತಕವಾಗಿದೆ. ಇನ್ನೊಂದು ಶತಕವನ್ನು ಸಿಡಿಸಿದರೆ, ವಿರಾಟ್ ಕೊಹ್ಲಿ ಈ ಅಪರೂಪದ ದಾಖಲೆಯನ್ನು ಬರೆಯಲಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್‌ಮನ್‌ಗಳು
ಕ್ರಿಸ್ ಗೇಲ್: 22
ಬಾಬರ್ ಆಝಮ್: 11
ವಿರಾಟ್ ಕೊಹ್ಲಿ: 9
ರೋಹಿತ್ ಶರ್ಮಾ, ಜೋಸ್ ಬಟ್ಲರ್, ಡೇವಿಡ್ ವಾರ್ನರ್, ಮೈಕಲ್ ಕ್ಲಿಂಗರ್, ಆರೋನ್ ಫಿಂಚ್, ರೈಲಿ ರೊಸೊವ್: 8
ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಅವರು 22 ಟಿ20 ಶತಕಗಳನ್ನು ಬಾರಿಸಿದ್ದಾರೆ. 11 ಶತಕಗಳ ಮೂಲಕ ಪಾಕಿಸ್ತಾನ ಮಾಜಿ ನಾಯಕ ಬಾಬರ್ ಅಝಮ್ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ 9 ಶತಕಗಳ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.
ʻಪಾಕ್ ಎದುರು ಅದೇ ಆಟʼ: 84 ರನ್ ಗಳಿಸಿದ ಬ್ಯಾಟಿಂಗ್ ಗೇಮ್ ಪ್ಲ್ಯಾನ್ ತಿಳಿಸಿದ ವಿರಾಟ್ ಕೊಹ್ಲಿ!
ಮಾರ್ಚ್ 23 ರಂದು ಆರ್‌ಸಿಬಿಗೆ ಕೆಕೆಆರ್ ಎದುರಾಳಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ತನ್ನ ಮೊದಲನೇ ಪಂದ್ಯವನ್ನು ಮಾರ್ಚ್ 23 ರಂದು ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಆಡಲಿದೆ. ಏಪ್ರಿಲ್ 2 ರಂದು ತನ್ನ ತವರು ಅಂಗಣ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಕಾದಾಟ ನಡೆಸಲಿದೆ.