RCB vs GT: ಟಿ20 ಕ್ರಿಕೆಟ್‌ನಲ್ಲಿ ನೂತನ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ!
Virat Kohli need 24 Runs: ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗೂ ದೇಶಿ ಕ್ರಿಕೆಟ್‌ನಲ್ಲಿ ಈಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಇದೀಗ ಚುಟುಕು ಕ್ರಿಕೆಟ್‌ನಲ್ಲಿ ನೂತನ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಅವರು 13000 ರನ್‌ಗಳನ್ನು ಪೂರ್ಣಗೊಳಿಸಲು ಇನ್ನೂ ಕೇವಲ 24 ರನ್ ಅಗತ್ಯವಿದೆ.

ವಿರಾಟ್ ಕೊಹ್ಲಿ

ಬೆಂಗಳೂರು: ಭಾರತೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ದಾಖಲೆಯನ್ನು ಹೊಂದಿರುವ ವಿರಾಟ್ ಕೊಹ್ಲಿ(Virat Kohli) ಇದೀಗ ಮತ್ತೊಂದು ಮೈಲುಗಲ್ಲು ಸನಿಹ ಬಂದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 10000 ರನ್‌ಗಳನ್ನು ಪೂರ್ಣಗೊಳಿಸಿರುವ ಅವರು, ಟೆಸ್ಟ್ ಹಾಗೂ ಟಿ20 ಕ್ರಿಕೆಟ್‌ನಲ್ಲಿಯೂ ಉತ್ತಮವಾಗಿದ್ದಾರೆ. ಅದರಂತೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿಯೂ 125 ಪಂದ್ಯಗಳಿಂದ 4188 ರನ್‌ಗಳನ್ನು ಸಿಡಿಸಿದ್ದಾರೆ. ಆ ಮೂಲಕ ಟಿ20ಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಪ್ರಸ್ತುತ 2025ರ ಐಪಿಎಲ್ ಟೂರ್ನಿಯಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ, ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇವರು ಐಪಿಎಲ್ ಟೂರ್ನಿಯಲ್ಲಿ 8000 ಕ್ಕೂ ಅಧಿಕ ರನ್‌ಗಳನ್ನು ಸಿಡಿಸಿದ್ದಾರೆ. ಐಪಿಎಲ್ ವೃತ್ತಿ ಜೀವನದಲ್ಲಿಯೂ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಹೊಂದಿದ್ದಾರೆ. ಇದೀಗ ಅವರು ಮತ್ತೊಂದು ದೊಡ್ಡ ದಾಖಲೆಯ ಸನಿಹ ಬಂದು ನಿಂತಿದ್ದಾರೆ. ಅವರು ಕೇವಲ 24 ರನ್‌ಗಳಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 13000 ರನ್‌ಗಳನ್ನು ಪೂರ್ಣಗೊಳಿಸಲಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ.
IPL 2025: 27 ಕೋಟಿ ರೂ ಕೊಟ್ಟಿದ್ದೇಕೆ? 2 ರನ್‌ಗೆ ವಿಕೆಟ್ ಒಪ್ಪಿಸಿದ ರಿಷಭ್ ಪಂತ್ ವಿರುದ್ದ ಫ್ಯಾನ್ಸ್ ಗರಂ!
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಟಿ20 ಕ್ರಿಕೆಟ್‌ನಲ್ಲಿ 384 ಇನಿಂಗ್ಸ್‌ಗಳಿಂದ 12976 ರನ್‌ಗಳನ್ನು ಕಲೆ ಹಾಕಿದ್ದಾರೆ. 2007ರಲ್ಲಿ ಅವರು ಡೆಲ್ಲಿ ಪರ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದಾದ ಬಳಿಕ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್ ವೃತ್ತಿ ಜೀವನಕ್ಕೆ ಪದಾರ್ಪಣೆ ಮಾಡಿದ್ದರು. 2010ರಲ್ಲಿ ಜಿಂಬಾಬ್ವೆ ವಿರುದ್ದ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
ವಿರಾಟ್ ಕೊಹ್ಲಿ ತಮ್ಮ ಟಿ20 ವೃತಿ ಜೀವನದಲ್ಲಿ 9 ಶತಕಗಳು ಹಾಗೂ 98 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ ಅವರು 420 ಸಿಕ್ಸರ್ ಹಾಗೂ 1150 ಬೌಂಡರಿಗಳನ್ನು ಸಿಡಿಸಿದ್ದಾರೆ.2021ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ, ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು.
IPL 2025: ʻಐಪಿಎಲ್ ಸರಾಸರಿ ದಾಖಲೆʼ-ರೋಹಿತ್ ಶರ್ಮಾ ವಿರುದ್ಧ ಮೈಕಲ್ ವಾನ್ ಟೀಕೆ!
11851 ಟಿ20 ರನ್‌ಗಳನ್ನು ಸಿಡಿಸಿರುವ ರೋಹಿತ್ ಶರ್ಮಾ ಈ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 2007ರಲ್ಲಿ ಭಾರತ ತಂಡದ ಮಾಜಿ ನಾಯಕ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 2007ರ ಐಸಿಸಿ ಟಿ20 ವಿಶ್ವಕಪ್ ಗೆದ್ದಿದ್ದ ಎಂಎಸ್ ಧೋನಿ ನಾಯಕತ್ವದ ಭಾರತ ತಂಡದಲ್ಲಿ ರೋಹಿತ್ ಶರ್ಮಾ ಕೂಡ ಇದ್ದರು. 2024ರ ಐಸಿಸಿ ಟಿ20 ವಿಶ್ವಕಪ್ ವಿಜೇತ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದ್ದರು. ಟಿ20 ವಿಶ್ವಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಈ ಮೂವರು ಆಟಗಾರರು ಐಪಿಎಲ್ ಟೂರ್ನಿಯಲ್ಲಿ ಮುಂದುವರಿಯುತ್ತಿದ್ದಾರೆ.
ಇನ್ನು ಶಿಖರ್ ಧವನ್ ಟಿ20 ಕ್ರಿಕೆಟ್‌ನಲ್ಲಿ 9797 ರನ್‌ಗಳನ್ನು ಬಾರಿಸಿದ್ದಾರೆ. ಆ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 2024ರಲ್ಲಿ ಇವರು ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.14562 ರನ್‌ಗಳ ಮೂಲಕ ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.