ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs KKR ಪಂದ್ಯ ಮಳೆಗೆ ರದ್ದಾದರೆ ಯಾವ ತಂಡಕ್ಕೆ ಲಾಭ? ಇಲ್ಲಿದೆ ಮಾಹಿತಿ!

RCB vs KKR Match Weatherforcast: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳು ಮೇ 17 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ, ಯಾವ ತಂಡಕ್ಕೆ ಲಾಭವಾಗಲಿದೆ ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ.

RCB vs KKR ಪಂದ್ಯ ಮಳೆಗೆ ರದ್ದಾದರೆ ಯಾವ ತಂಡಕ್ಕೆ ಲಾಭ?

ಆರ್‌ಸಿಬಿ vs ಕೆಕೆಆರ್‌

Profile Ramesh Kote May 17, 2025 5:11 PM

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 17 ರಂದು ಶನಿವಾರ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ 58ನೇ ಪಂದ್ಯದಲ್ಲಿ(RCB vs KKR) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳು ಕಾದಾಟ ನಡೆಸಲಿವೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಈ ಪಂದ್ಯ ಮಳೆಗೆ ಬಲಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಈ ಪಂದ್ಯ ಮಳೆಯಿಂದ ರದ್ದಾದರೆ ಎರಡೂ ತಂಡಗಳಿಗೆ ಪರಿಣಾಮವಾಗಲಿದೆ. ಆದರೆ, ಅಜಿಂಕ್ಯ ರಹಾನೆ (Ajinkya Rahane) ನಾಯಕತ್ವದ ಕೆಕೆಆರ್‌ ಪ್ಲೇಆಫ್ಸ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ. ಈಗಾಗಲೇ ಚೆನ್ನೈ ಸೂಪರ್‌ ಕಿಂಗ್ಸ್‌, ರಾಜಸ್ಥಾನ್‌ ರಾಯಲ್ಸ್‌ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ನಾಕ್‌ಔಟ್‌ ಹಂತದಿಂದ ಹೊರ ನಡೆದಿವೆ.

ಕೋಲ್ಕತಾ ನೈಟ್‌ ರೈಡರ್ಸ್‌ ತಂಡ ಆಡಿದ 12 ಪಂದ್ಯಗಳಿಂದ 11 ಅಂಕಗಳನ್ನು ಕಲೆ ಹಾಕಿವೆ ಹಾಗೂ +0.193 ರನ್‌ ರೇಟ್‌ ಹೊಂದಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೆಕೆಆರ್‌ ಆರನೇ ಸ್ಥಾನದಲ್ಲಿದೆ. ಪ್ಲೇಆಫ್ಸ್‌ಗೆ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಕೋಲ್ಕತಾ ಫ್ರಾಂಚೈಸಿ ಇನ್ನುಳಿದ ಎರಡೂ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆದ್ದು ತನ್ನ ರನ್‌ರೇಟ್‌ ಅನ್ನು ಉತ್ತಮಪಡಿಸಿಕೊಳ್ಳಬೇಕಾಗುತ್ತದೆ. ಆದರೂ ಕೆಕೆಆರ್‌ ತಂಡದ ಪ್ಲೇಆಫ್ಸ್‌ ಭವಿಷ್ಯ ಇನ್ನುಳಿದ ತಂಡಗಳ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ.

RCB vs KKR: ಕೆಕೆಆರ್‌ ಪಂದ್ಯಕ್ಕೆ ಆರ್‌ಸಿಬಿ ಆಟಗಾರರ ಕಠಿಣ ಅಭ್ಯಾಸದ ಫೋಟೊಗಳು ಇಲ್ಲಿವೆ

ಆದರೆ, ಈ ಪಂದ್ಯ ಮಳೆಯಿಂದ ರದ್ದಾದರೆ ಆರ್‌ಸಿಬಿ ತಂಡಕ್ಕೆ ಒಂದು ಅಂಕ ಸಿಗಲಿದೆ. ಆದರೂ ಬೆಂಗಳೂರು ತಂಡ ಅಧಿಕೃತವಾಗಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಬೇಕೆಂದರೆ ಇನ್ನೂ ಒಂದು ಪಂದ್ಯವನ್ನು ಗೆಲ್ಲಬೇಕಾಗುತ್ತದೆ. ಕೋಲ್ಕತಾ ನೈಟ್‌ ರೈಡರ್ಸ್‌ ತಂಡ ಒಂದು ಅಂಕ ಪಡೆದೆರೂ ಯಾವುದೇ ಪ್ರಯೋಜನವಾಗುವುದಿಲ್ಲ. ಇದರೊಂದಿಗೆ ಕೋಲ್ಕತಾ ತಂಡ ಅಧಿಕೃತವಾಗಿ ನಾಕ್‌ಔಟ್‌ನಿಂದ ಹೊರ ಬೀಳಲಿದೆ.

ಇಲ್ಲಿಯವರೆಗೂ ಆಡಿದ 11 ಪಂದ್ಯಗಳಲ್ಲಿ ಆರ್‌ಸಿಬಿ 16 ಅಂಕಗಳನ್ನು ಕಲೆ ಹಾಕಿದೆ ಹಾಗೂ +0.482ರ ರನ್‌ ರೇಟ್‌ ಹೊಂದಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಅಗ್ರ ಎರಡು ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆರ್‌ಸಿಬಿ, ಇನ್ನುಳಿದ ಮೂರೂ ಪಂದ್ಯಗಳನ್ನು ಗೆಲ್ಲಲು ಎದುರು ನೋಡುತ್ತಿದೆ. ಅಂದ ಹಾಗೆ ಈ ಟೂರ್ನಿಯ ಮೊಟ್ಟ ಮೊದಲ ಪಂದ್ಯದಲ್ಲಿಯೂ ಆರ್‌ಸಿಬಿ ಹಾಗೂ ಕೆಕೆಆರ್‌ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್‌ಗಳಿಂದ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಕಂಡಿತ್ತು.

IPL 2025: ಆರ್‌ಸಿಬಿಗೆ ಇನ್ನು ಗೆಲುವು ಬೇಕು? 7 ತಂಡಗಳ ಪ್ಲೇಆಫ್ಸ್‌ ಲೆಕ್ಕಾಚಾರ!

ಬೆಂಗಳೂರಿನಲ್ಲಿ ಪ್ರಸ್ತುತ ಮಳೆಯ ಸನ್ನಿವೇಶವಿದೆ. ಮೋಡ ಕವಿದ ವಾತಾವರಣವಿದ್ದು, ಪಂದ್ಯದ ವೇಳೆ ರಾತ್ರಿ 8 ರಿಂದ 9ರ ವೇಳೆಯಲ್ಲಿ ಶೇಕಾಡ 60 ರಿಂದ 75ರಷ್ಟು ಮಳೆ ಬೀಳುವ ಸಂಭವವಿದೆ. ಮೂರು ತಂಡಗಳು ಈಗಾಗಲೇ ಪ್ಲೇಆಫ್ಸ್‌ನಿಂದ ಹೊರ ನಡೆದಿವೆ. ಹಾಗಾಗಿ ಇನ್ನುಳಿದ 7 ತಂಡಗಳು ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಪೈಪೋಟಿ ನಡೆಸುತ್ತಿವೆ. 2012, 2014 ಹಾಗೂ 2024ರ ಆವೃತ್ತಿಗಳಲ್ಲಿ ಮೂರು ಬಾರಿ ಕೆಕೆಆರ್‌ ಚಾಂಪಿಯನ್‌ ಆಗಿದೆ.