ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IPL 2026: ಮುಂಬೈ ಇಂಡಿಯನ್ಸ್‌ ನಾಯಕನಾಗಿ ಹಾರ್ದಿಕ್‌ ಪಾಂಡ್ಯ ಸ್ಥಾನವನ್ನು ತುಂಬಬಲ್ಲ ಮೂವರು!

ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಪ್ರಸ್ತುತ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಸತತ ವೈಫಲ್ಯ ಅನುಭವಿಸಿದೆ. ಆಡಿದ 8 ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದು,ಇನ್ನುಳಿದ ಆರರಲ್ಲಿ ಸೋಲು ಅನುಭವಿಸಿದೆ. ಒಂದು ವೇಳೆ ಹಾರ್ದಿಕ್‌ರನ್ನು ನಾಯಕತ್ವದಿಂದ ತೆಗೆದರೆ, ಅವರ ಸ್ಥಾನಕ್ಕೆ ಮೂವರು ಆಟಗಾರರಲ್ಲಿ ಒಬ್ಬರನ್ನು ಪರಿಗಣಿಸಬಹುದು.

ಮುಂಬೈ ಇಂಡಿಯನ್ಸ್‌ ನಾಯಕತ್ವಕ್ಕೇರಬಲ್ಲ ಮೂವರು ಆಟಗಾರರು.

ನವದೆಹಲಿ: ಪ್ರಸ್ತುತ ನಡಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) ನಾಯಕತ್ವದ ಮುಂಬೈ ಇಂಡಿಯನ್ಸ್‌ (MI) ತಂಡ ಸತತ ವೈಫಲ್ಯ ಅನುಭವಿಸುತ್ತಿದೆ. ಇಲ್ಲಿಯವರೆಗೂ ಆಡಿದ 8 ಪಂದ್ಯಗಳಿಂದ ಮುಂಬೈ ಗೆದ್ದಿರುವುದು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ, ಇನ್ನುಳಿದಂತೆ 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇದರ ಪರಿಣಾಮ ಮುಂಬೈ ಇಂಡಿಯನ್ಸ್‌ ತಂಡದ ಪ್ಲೇಆಫ್ಸ್‌ಗೆ ಹಾದಿ ಕಠಿಣವಾಗಿದೆ. ಇದರಿಂದ ಬೇಸರಗೊಂಡಿರುವ ಮುಂಬೈ ಫ್ರಾಂಚೈಸಿಯು ಹಾರ್ದಿಕ್‌ ಪಾಂಡ್ಯ ಅವರನ್ನು ನಾಯಕತ್ವದಿಂದ ಕೈ ಬಿಡುವ ಬಗ್ಗೆ ಚಿಂತಿಸುತ್ತಿರಬಹುದು.

ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಮುಂಬೈ ಇಂಡಿಯನ್ಸ್‌ ತಂಡ, ತನ್ನ ಪಾಲಿನ 20 ಓವರ್‌ಗಳಿಗೆ 243 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿಯನ್ನು ಹಿಂಬಾಲಿಸಿದ ಸನ್‌ರೈಸರ್ಸ್‌ ಹೈದರಾಬಾದ್‌ ತನ್ನ 19ನೇ ಓವರ್‌ನಲ್ಲಿ ಗೆದ್ದು ಬೀಗಿತ್ತು. ಒಂದು ವೇಳೆ ಹಾರ್ದಿಕ್‌ ಪಾಂಡ್ಯ ಅವರನ್ನು ನಾಯಕತ್ವದಿಂದ ಕಿತ್ತರೆ, ಅವರ ಸ್ಥಾನವನ್ನು ತುಂಬಬಲ್ಲ ಮೂವರು ಆಟಗಾರರನ್ನು ಇಲ್ಲಿ ವಿವರಿಸಲಾಗಿದೆ.

IPL 2026ರಲ್ಲಿ ರನ್‌ ಹೊಳೆ ಹರಿಯಲು ಬಲವಾದ ಕಾರಣ ತಿಳಿಸಿದ ಮುತ್ತಯ್ಯ ಮುರಳಿಧರನ್‌!

1.ರೋಹಿತ್‌ ಶರ್ಮಾ

ಹಾರ್ದಿಕ್ ಪಾಂಡ್ಯ ಅವರ ಬದಲಿಗೆ ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ರೋಹಿತ್ ಶರ್ಮಾ ಕೂಡ ಪ್ರಮುಖರು. ರೋಹಿತ್ ಶರ್ಮಾ ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಎರಡರಲ್ಲೂ ನಾಯಕನಾಗಿ ಸಕ್ಸಸ್‌ ಕಂಡಿದ್ದಾರೆ.

ಇವರ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಐಪಿಎಲ್ ಟ್ರೋಫಿಗಳನ್ನು ಗೆದ್ದಿದೆ. ಎರಡು ವರ್ಷಗಳ ಹಿಂದೆ ಅವರನ್ನು ನಾಯಕತ್ವದಿಂದ ತೆಗೆದುಹಾಕಲಾಗಿತ್ತು. 2013ರ ಐಪಿಎಲ್‌ನಲ್ಲಿ ಅವರು ನಾಯಕತ್ವ ವಹಿಸಿಕೊಂಡು 2023ರವರೆಗೆ ತಂಡವನ್ನು ಮುನ್ನಡೆಸಿದ್ದರು. ರೋಹಿತ್ ನೇತೃತ್ವದ ಮುಂಬೈ ಇಂಡಿಯನ್ಸ್‌ 2013, 2015, 2017, 2019 ಮತ್ತು 2020ರಲ್ಲಿ ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದೆ. ಅವರು 2013ರ ಚಾಂಪಿಯನ್ಸ್ ಟ್ರೋಫಿಯನ್ನೂ ಮುಂಬೈಗೆ ಗೆದ್ದು ಕೊಟ್ಟಿದ್ದಾರೆ.

ಐಪಿಎಲ್‌ ಪಂದ್ಯದ ವೇಳೆ ವ್ಯಾಪಿಂಗ್‌: ನಿಷೇಧದಿಂದ ಪಾರಾದಾರೂ ರಿಯಾನ್‌ ಪರಾಗ್‌ಗೆ ಭಾರಿ ದಂಡ!

2.ಸೂರ್ಯಕುಮಾರ್‌ ಯಾದವ್‌

ಸೂರ್ಯಕುಮಾರ್ ಯಾದವ್ ಕೆಲ ಸಂದರ್ಭಗಳಲ್ಲಿ ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದಾರೆ. ಸೂರ್ಯಕುಮಾರ್ ಯಾದವ್‌ ಪ್ರಸ್ತುತ ಭಾರತ ಟಿ20ಐ ತಂಡದ ನಾಯಕನಾಗಿದ್ದು, ಅವರ ನಾಯಕತ್ವದಲ್ಲಿ ಭಾರತ 2026ರ ಟಿ20 ವಿಶ್ವಕಪ್ ಗೆದ್ದು ಸಾಧನೆ ಮಾಡಿದೆ.

ಟಿ20 ವಿಶ್ವಕಪ್ ಗೆದ್ದ ನಾಯಕನಾಗಿದ್ದರೂ, ಅವರು 2026ರ ಐಪಿಎಲ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದಡಿ ಆಡುತ್ತಿದ್ದಾರೆ. ನಾಯಕತ್ವದಲ್ಲಿ ಬದಲಾವಣೆ ಸಂಭವಿಸಿದರೆ, ಪಾಂಡ್ಯ ಅವರ ಬದಲಿಗೆ ಪ್ರಮುಖ ಸ್ಪರ್ಧಿಗಳಲ್ಲಿ ಸೂರ್ಯಕುಮಾರ್ ಕೂಡ ಒಬ್ಬರಾಗಿದ್ದಾರೆ. ಸೂರ್ಯಕುಮಾರ್‌ಗೆ ಸಾಕಷ್ಟು ನಾಯಕತ್ವ ಅನುಭವವಿದ್ದು, ಪಾಂಡ್ಯಗೆ ಉತ್ತಮ ಪರ್ಯಾಯವಾಗಬಹುದು ಎಂದು ಪರಿಗಣಿಸಲಾಗಿದೆ.

IPL 2026: ಆರು ಸೋಲು ಕಂಡ ಮುಂಬೈ ಇಂಡಿಯನ್ಸ್‌ ತಂಡದ ಪ್ಲೇ-ಆಫ್‌ ಲೆಕ್ಕಾಚಾರ ಹೇಗಿದೆ?

3.ಜಸ್‌ಪ್ರೀತ್‌ ಬುಮ್ರಾ

ಮುಂಬೈ ಇಂಡಿಯನ್ಸ್‌ ನಾಯಕತ್ವದಲ್ಲಿ ಬದಲಾವಣೆ ಸಂಭವಿಸಿದರೆ ಜಸ್‌ಪ್ರೀತ್‌ ಬುಮ್ರಾ ಕೂಡ ನಾಯಕತ್ವಕ್ಕೆ ಅಭ್ಯರ್ಥಿಯಾಗಬಹುದು. ಅವರು ಭಾರತ ತಂಡವನ್ನು ಟೆಸ್ಟ್ ಮತ್ತು ಟಿ20ಐ ಕ್ರಿಕೆಟ್ ಎರಡರಲ್ಲೂ ಮುನ್ನಡೆಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ತಮ್ಮ ಟೆಸ್ಟ್ ನಾಯಕತ್ವದ ಪದಾರ್ಪಣೆ ಮಾಡಿದ್ದರು.

ಅವರು 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ಪರ್ಥ್ ಟೆಸ್ಟ್‌ನಲ್ಲಿ ಮತ್ತೆ ತಂಡವನ್ನು ಮುನ್ನಡೆಸಿದ್ದರು. ಆ ಸರಣಿಯಲ್ಲಿ ಭಾರತ ಗೆದ್ದ ಏಕೈಕ ಪಂದ್ಯ ಅದಾಗಿತ್ತು. 2023ರಲ್ಲಿ ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲೂ ಅವರು ಭಾರತವನ್ನು ನಾಯಕನಾಗಿ ಮುನ್ನಡೆಸಿದ್ದು, ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದಿಂದ ಜಯಗಳಿಸಿತ್ತು.