ಬೆಂಗಳೂರು: ಐಪಿಎಲ್ 2026ರಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡಕ್ಕೆ ಸೇರ್ಪಡೆಯಾದ ಪ್ರತಿಭಾನ್ವಿತ ಆಟಗಾರ ಅರ್ಜುನ್ ತೆಂಡೂಲ್ಕರ್ ತಮ್ಮ ಭವಿಷ್ಯದ ಗುರಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಪರ ಆಡೋದು ತಮ್ಮ ಬಕೆಟ್ ಲಿಸ್ಟ್‌ನಲ್ಲಿ ಇಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಆಗಿರುವ ಅರ್ಜುನ್, ತಮ್ಮ ಆಟದ ಮೇಲೆ ಹೆಚ್ಚು ಗಮನ ಹರಿಸಲು ಬಯಸಿದ್ದಾರೆ. "ನಾನು ನನ್ನ ಶ್ರೇಷ್ಠ ಪ್ರದರ್ಶನ ನೀಡುವುದೇ ಮೊದಲ ಗುರಿ ಆಗಿದೆ. ಇದರ ಫಲಿತಾಂಶದ ಬಗ್ಗೆ ನಾನು ಹೆಚ್ಚು ಯೋಚನೆ ಮಾಡುವುದಿಲ್ಲ," ಎಂದು ಅವರು ಹೇಳಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದ ಎಡಗೈ ವೇಗದ ಬೌಲರ್ ಅರ್ಜುನ್, ಈಗ ಐಪಿಎಲ್ 2026 ಟೂರ್ನಿಯಲ್ಲಿ ಹೊಸ ತಂಡದಲ್ಲಿ ತಮ್ಮ ಅಭಿಯಾನ ಆರಂಭ ಮಾಡಲು ಉತ್ಸುಕರಾಗಿದ್ದಾರೆ. 2021ರಲ್ಲಿ ಮುಂಬೈ ಇಂಡಿಯನ್ಸ್ ಜೊತೆ ಸೇರಿದ್ದರೂ, ಅವರಿಗೆ ಹೆಚ್ಚು ಅವಕಾಶಗಳು ಸಿಗಲಿಲ್ಲ. ಆದ್ದರಿಂದ, ಈಗ ಲಖ್ನೋ ತಂಡದಲ್ಲಿ ಹೆಚ್ಚು ಪಂದ್ಯಗಳಲ್ಲಿ ಆಡುವ ನಿರೀಕ್ಷೆ ಹೊಂದಿದ್ದಾರೆ.
IPL 2026: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೋಲಿಗೆ ರಿಷಭ್ ಪಂತ್ ಪ್ರತಿಕ್ರಿಯೆ
"ಎಲ್ಲರೂ ಹೆಚ್ಚು ಹೆಚ್ಚು ಪಂದ್ಯಗಳಲ್ಲಿ ಆಡಲು ಬಯಸುತ್ತಾರೆ. ಬೆಂಚ್ ಮೇಲೆ ಕುಳಿತುಕೊಳ್ಳೋದು ಯಾರಿಗೂ ಇಷ್ಟವಿಲ್ಲ. ಅವಕಾಶ ಸಿಕ್ಕಾಗ ಉತ್ತಮ ಪ್ರದರ್ಶನ ನೀಡುವುದು ಬಹಳಾ ಮುಖ್ಯ," ಎಂದು ಅರ್ಜುನ್ ತಮ್ಮ ಮನದಾಳ ಹಂಚಿಕೊಂಡಿದ್ದಾರೆ.
ಇದಲ್ಲದೆ, ಐಪಿಎಲ್‌ನಲ್ಲಿ ಜಾರಿಯಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಕೂಡ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. "ಕ್ರಿಕೆಟ್ 11 ಆಟಗಾರರ ಆಟವಾಗಿರಬೇಕು. ಇಂಪ್ಯಾಕ್ಟ್ ಪ್ಲೇಯರ್ ನಿಯಮ ನನಗೆ ಇಷ್ಟವಿಲ್ಲ," ಎಂದು ಸ್ಪಷ್ಟಪಡಿಸಿದರು.
IPL 2026: ಲಖನೌ ಸೂಪರ್ ಜಯಂಟ್ಸ್ ಎದುರು ಡೆಲ್ಲಿ ಕ್ಯಾಪಿಟಲ್ಸ್‌ಗೆ ಅಧಿಕಾರಯುತ ಜಯ!
ಲಖನೋ ತಂಡದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅರ್ಜುನ್ ತೆಂಡೂಲ್ಕರ್‌ಗೆ ಅವಕಾಶ ಸಿಗಲಿಲ್ಲ. ಆದರೆ ಮುಂದಿನ ಪಂದ್ಯಗಳಲ್ಲಿ ಅವರು ಆಡುವ ಸಾಧ್ಯತೆ ಇದೆ. ಹೊಸ ತಂಡದಲ್ಲಿ ಹೊಸ ಅವಕಾಶಕ್ಕಾಗಿ ಕಾಯುತ್ತಿರುವ ಅರ್ಜುನ್, ತಮ್ಮದೇ ಆದ ಛಾಪನ್ನು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಎಡಗೈ ವೇಗದ ಬೌಲಿಂಗ್ ಜೊತೆಗೆ ಕೆಳ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಸಾಮರ್ಥ್ಯ ಹೊಂದಿರುವ ಎಡಗೈ ಬ್ಯಾಟರ್ ಕೂಡ ಆಗಿದ್ದಾರೆ. ಅರ್ಜುನ್ ಅವರ ಸಂಪೂರ್ಣ ಆಟ ಕಾಣಲು ಕ್ರಿಕೆಟ್ ಪ್ರಿಯರು ಕೂಡ ಎದುರು ನೋಡುತ್ತಿದ್ದಾರೆ.
ಲಖನೌ ಸೂಪರ್ ಜಯಂಟ್ಸ್ ತಂಡ ಐಪಿಎಲ್ ಅಭ್ಯಾಸ ಪಂದ್ಯದಲ್ಲಿ ಅರ್ಜುನ್ ಸತತ ವಿಕೆಟ್ ಪಡೆದು ಗಮನ ಸೆಳೆದಿದ್ದರು. ಅದರ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡಿದ್ದವು ಕೂಡ.