ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೋಲು ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಏಪ್ರಿಲ್ 24 ರಂದು ಶುಕ್ರವಾರ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ 34ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ಎದುರು ಕಾದಾಟ ನಡೆಸಲು ಸಜ್ಜಾಗುತ್ತಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದು ಈ ಸೀಸನ್‌ನ ಕೊನೆಯ ಪಂದ್ಯವಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಜಿಟಿ ಎದುರು ಗೆಲುವು ಪಡೆದು ತವರು ಅಭಿಮಾನಗಳಿಗೆ ಭರ್ಜರಿ ರಸದೌತಣ ನೀಡಲು ರಜತ್ ಪಾಟಿದಾರ್ ಪಡೆ ಎದುರು ನೋಡುತ್ತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಸೀಸನ್‌ನಲ್ಲಿ ಉತ್ತಮ ಪ್ರದರ್ಶನವನ್ನು ತೋರುತ್ತಿದ್ದು, ಇಲ್ಲಿಯವರೆಗೂ ಆಡಿದ ಆರು ಪಂದ್ಯಗಳಲ್ಲಿ 4 ರಲ್ಲಿ ಗೆಲುವು ಪಡೆದಿದೆ ಹಾಗೂ ಇನ್ನುಳಿದ ಎರಡು ಪಂದ್ಯಗಳಲ್ಲಿ ಕ್ರಮವಾಗಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೋಲು ಅನುಭವಿಸಿದೆ. ಒಟ್ಟು 8 ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ, ಟೂರ್ನಿಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದೆ.
IPL 2026: ರಿಷಭ್ ಪಂತ್ ಎದುರು ಅವಮಾನಕರ ವರ್ತನೆ ತೋರಿದ ನಾಂಡ್ರೆ ಬರ್ಗರ್‌ಗೆ ದಂಡ!
ಆರ್‌ಸಿಬಿಗೆ ಬೆಂಗಳೂರಿನಲ್ಲಿ ಕೊನೆಯ ಪಂದ್ಯ
ಆಸಿಬಿ ತವರು ಅಂಗಣದಲ್ಲಿ ಆಡಿದ್ದ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಪಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ಎದುರು ತನ್ನ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ಗೆಲುವಿನ ಸನಿಹ ಬಂದು ಸೋಲು ಅನುಭವಿಸಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದು ಕೊನೆಯ ತವರು ಪಂದ್ಯವಾಗಿರುವ ಕಾರಣ ಆರ್‌ಸಿಬಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸವನ್ನು ಹೊಂದಿದೆ. ಬೆಂಗಳೂರು ತಂಡ ಬಲಿಷ್ಠ ಬ್ಯಾಟಿಂಗ್ ಹಾಗೂ ಬೌಲಿಂಗ್ ಲೈನ್ ಅಪ್ ಹೊಂದಿದ್ದು, ಗುಜರಾತ್ ತಂಡಕ್ಕೆ ಹೋಲಿಕೆ ಮಾಡಿದರೆ, ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಸಂಯೋಜನೆಯನ್ನು ಹೊಂದಿದೆ.
ಗೆಲುವಿನ ಲಯಕ್ಕೆ ಮರಳಲು ಗುಜರಾತ್ ಸಜ್ಜು
ಇನ್ನು ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಈ ಟೂರ್ನಿಯಲ್ಲಿ ಮಿಶ್ರ ಫಲಿತಾಂಶವನ್ನು ಹೊಂದಿದೆ. ಇಲ್ಲಿಯವರೆಗೂ ಆಡಿದ ಆರು ಪಂದ್ಯಗಳಲ್ಲಿ ಜಿಟಿ ಮೂರರಲ್ಲಿ ಗೆಲುವು ಪಡೆದಿದ್ದು, ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಆರನೇ ಸ್ಥಾನದಲ್ಲಿದೆ. ಗುಜರಾತ್ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಕ್ರಮಾಂಕವನ್ನು ಅವಲಂಬಿಸಿದ್ದು, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್‌ಗಳು ಪುಟಿದೇಳುವ ಅಗತ್ಯವಿದೆ. ಅಂದ ಹಾಗೆ ತನ್ನ ಕೊನೆಯ ಪಂದ್ಯದಲ್ಲಿ ಐದು ಬಾರಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಎದುರು 99 ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಇದೀಗ 2022ರ ಚಾಂಪಿಯನ್ಸ್ ಬೆಂಗಳೂರಿನಲ್ಲಿ ಗೆಲುವಿನ ಲಯಕ್ಕೆ ಮರಳಲು ಯೋಜನೆಯನ್ನು ರೂಪಿಸಿಕೊಂಡಿದೆ.
RCB vs GT: ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI
ಪಂದ್ಯದ ವಿವರ
2026ರ ಐಪಿಎಲ್ ಟೂರ್ನಿ
ಪಂದ್ಯ: 34
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್
ದಿನಾಂಕ: ಏಪ್ರಿಲ್ 24, 2026
ಸಮಯ: ಸಂಜೆ 07: 30ಕ್ಕೆ
ಸ್ಥಳ: ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಜಿಯೊ ಹಾಟ್‌ಸ್ಟಾರ್
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 06
ಆರ್‌ಸಿಬಿ ಗೆಲುವು: 03
ಜಿಟಿ ಗೆಲುವು: 03
ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ರಿಪೋರ್ಟ್
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಬೌಂಡರಿಗಳು ಕಿರಿದಾಗಿರುವ ಕಾರಣ ಇಲ್ಲಿ ಬೌಲರ್‌ಗಳಿಗೆ ಕಠಿಣ ಸವಾಲು ಎದುರಾಗಲಿದೆ. ಈ ಸೀಸನ್‌ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ನಾಲ್ಕು ಐಪಿಎಲ್ ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಇದರಲ್ಲಿ ಮೂರು ಪಂದ್ಯಗಳು ಹೈಸ್ಕೋರಿಂಗ್ ಆಗಿದ್ದವು. ಆದರೆ, ಡೆಲ್ಲಿ ಕ್ಯಾಪಿಟಲ್ಸ್ ಎದುರು ಕೊನೆಯ ಪಂದ್ಯ ನಿಧಾನಗತಿಯಿಂದ ಕೂಡಿತ್ತು. ಅಂದಹಾಗೆ ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ನಾಯಕ ಚೇಸಿಂಗ್ ಆಯ್ಕೆ ಮಾಡಿಕೊಳ್ಳಲಿದ್ದಾರೆ.
RR vs LSG: ಐಪಿಎಲ್‌ನಲ್ಲಿ ಯಾರು ಮಾಡಲಾಗದ ಸಾಧನೆ ಮಾಡಿದ ವೈಭವ್ ಸೂರ್ಯವಂಶಿ
ಇತ್ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ರಸಿಖ್ ಸಲಾಂ, ಸುಯಾಶ್ ಶರ್ಮಾ, ಜಾಶ್ ಹೇಝಲ್‌ವುಡ್
ಇಂಪ್ಯಾಕ್ಟ್ ಪ್ಲೇಯರ್: ದೇವದತ್ ಪಡಿಕ್ಕಲ್
ಗುಜರಾತ್ ಟೈಟನ್ಸ್: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ಶಾರುಖ್ ಖಾನ್, ರಶೀದ್ ಖಾನ್, ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ, ಪ್ರಸಿಧ್ ಕೃಷ್ಣ, ಅಶೋಕ್ ಶರ್ಮಾ
ಇಂಪ್ಯಾಕ್ಟ್ ಪ್ಲೇಯರ್: ರಾಹುಲ್ ತೇವಾಟಿಯಾ