ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RCB vs LSG ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್‌ XI, ಪಿಚ್‌ ರಿಪೋರ್ಟ್‌, ಹೆಡ್‌ ಟು ಹೆಡ್‌ ದಾಖಲೆ!

ಗುಜರಾತ್‌ ಟೈಟನ್ಸ್‌ ವಿರುದ್ಧ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಮೇ 7 ರಂದು ಗುರುವಾರ ಲಖನೌದ ಏಕನಾ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ಎದುರು ಕಾದಾಟ ನಡೆಸಲು ಸಜ್ಜಾಗುತ್ತಿದೆ. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆರ್‌ಸಿಬಿ, ಎಲ್‌ಎಸ್‌ಜಿ ಎದುರು ಗೆಲುವಿನ ಲಯ ಮುಂದುವರಿಸಲು ಎದುರು ನೋಡುತ್ತಿದೆ.

ಆರ್‌ಸಿಬಿ vs ಎಲ್‌ಎಸ್‌ಜಿ ಮುಖಾಮುಖಿಗೆ ಏಕನಾ ಕ್ರೀಡಾಂಗಣ ಸಜ್ಜು.

ಲಖನೌ: ಗುಜರಾತ್‌ ಟೈಟನ್ಸ್‌ ಎದುರು ಕೊನೆಯ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ, ಇದೀಗ ಮೇ 7 ರಂದು ಇಲ್ಲಿನ ಏಕನಾ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 50ನೇ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ (LSG) ವಿರುದ್ಧ ಕಾದಾಟ ನಡೆಸಲಿದೆ. ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನದ ಮೇಲೆ ಕಣ್ಣಿಟ್ಟಿರುವ ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ, ಎಲ್‌ಎಸ್‌ಜಿಯನ್ನು ಸತತ ಎರಡನೇ ಬಾರಿಯೂ ಸೋಲಿಸುವ ವಿಶ್ವಾಸವನ್ನು ಹೊಂದಿದೆ.

ಆರ್‌ಸಿಬಿ ತಂಡ ಇಲ್ಲಿಯವರೆಗೂ ಆಡಿದ 9 ಪಂದ್ಯಗಳಲ್ಲಿ ಆರರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಮೂರರಲ್ಲಿ ಸೋಲು ಅನುಭವಿಸಿದೆ. ಒಟ್ಟು 12 ಅಂಕಗಳನ್ನು ಕಲೆ ಹಾಕಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಅಂದ ಹಾಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಸೀಸನ್‌ನ ಮೊದಲ ಬಾರಿ ಎದುರಿಸಿದಾಗ ಎಲ್‌ಎಸ್‌ಜಿ ತಂಡವನ್ನು ಆರ್‌ಸಿಬಿ ಐದು ವಿಕೆಟ್‌ಗಳಿಂದ ಮಣಿಸಿತ್ತು. ಇದೀಗಅ ಅದೇ ಲಯವನ್ನು ಮುಂದುವರಿಸಲು ಬೆಂಗಳೂರು ತಂಡ ಎದುರು ನೋಡುತ್ತಿದೆ.

ಐಪಿಎಲ್ 2026 ಫೈನಲ್ ಸ್ಥಳಾಂತರ: ಶಾಸಕರ ಟಿಕೆಟ್‌ ಲಾಬಿ, ಬೆಂಗಳೂರು ಕೈ ತಪ್ಪಿದ ಆತಿಥ್ಯ!

ಇನ್ನು ರಿಷಭ್‌ ಪಂತ್‌ ನಾಯಕತ್ವದ ಲಖನೌ ಸೂಪರ್‌ ಜಯಂಟ್ಸ್‌ ತಂಡ ಇಲ್ಲಿಯವರೆಗೂ ಆಡಿದ 9 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 7 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಇತ್ತೀಚೆಗೆ ಎಲ್‌ಎಸ್‌ಜಿ ತಂಡ ಮುಂಬೈ ಇಂಡಿಯನ್ಸ್‌ ಎದುರು ಆರು ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಸದ್ಯ ಲಖನೌ ತಂಡದ ಪ್ಲೇಆಫ್ಸ್‌ ಹಾದಿ ಅತ್ಯಂತ ಕಠಿಣವಾಗಿದೆ. ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆದ್ದರೂ ಎಲ್‌ಎಸ್‌ಜಿ ತಂಡದ ನಾಕೌಟ್‌ ಭವಿಷ್ಯ ಇತರೆ ತಂಡಗಳನ್ನು ಅವಲಂಬಿಸಿದೆ.

ಪಂದ್ಯದ ವಿವರ

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌

50ನೇ ಪಂದ್ಯ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು vs ಲಖನೌ ಸೂಪರ್‌ ಜಯಂಟ್ಸ್‌

ದಿನಾಂಕ: ಮೇ 7, 2026

ಸಮಯ: ಸಂಜೆ 07: 30ಕ್ಕೆ ಆರಂಭ

ಸ್ಥಳ: ಏಕನಾ ಕ್ರಿಕೆಟ್‌ ಕ್ರೀಡಾಂಗಣ, ಲಖನೌ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

ಲೈವ್‌ ಸ್ಟ್ರೀಮಿಂಗ್‌: ಜಿಯೊ ಹಾಟ್‌ಸ್ಟಾರ್‌

ಐಪಿಎಲ್‌ ಪ್ಲೇ-ಆಫ್ಸ್‌ ಆತಿಥ್ಯದಿಂದ ಬೆಂಗಳೂರು ಔಟ್! ಕೆಎಸ್‌ಸಿಎ ನಿರಾಶೆ

ಮುಖಾಮುಖಿ ದಾಖಲೆ

ಒಟ್ಟು ಪಂದ್ಯಗಳು: 07

ಆರ್‌ಸಿಬಿ ಗೆಲುವು: 05

ಎಲ್‌ಎಸ್‌ಜಿ ಗೆಲುವು: 02

ಏಕನಾ ಕ್ರೀಡಾಂಗಣದ ಪಿಚ್‌ ರಿಪೋರ್ಟ್‌

ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ನಡುವಣ ಪಂದ್ಯ ನಡೆಯವ ಲಖನೌದ ಏಕನಾ ಕ್ರೀಡಾಂಗಣದ ಪಿಚ್‌ ಬೌಲರ್‌ಗಳ ಸ್ನೇಹಿಯಾಗಿದೆ. ಏಕೆಂದರೆ ಇಲ್ಲಿನ ಪಿಚ್‌ ನಿಧಾನಗತಿಯಿಂದ ಕೂಡಿದೆ. ಈ ಕ್ರೀಡಾಂಗಣದಲ್ಲಿ 140-160 ರನ್‌ ಈ ಸೀಸನ್‌ನ ಸರಾಸರಿ ಮೊತ್ತವಾಗಿದೆ. ಬೌಲರ್‌ಗಳ ಲೈನ್‌ ಅಂಡ್‌ ಲೆನ್ತ್‌ ಕಾಪಾಡಿಕೊಂಡರೆ, ಬ್ಯಾಟ್ಸ್‌ಮನ್‌ಗಳಿಗೆ ಸ್ಟ್ರೋಕ್‌ ಮೇಕಿಂಗ್‌ ಸವಾಲಾಗಲಿದೆ.

IPL 2026 ಟೂರ್ನಿಯಲ್ಲಿ ಜಸ್‌ಪ್ರೀತ್‌ ಬುಮ್ರಾ ವೈಫಲ್ಯಕ್ಕೆ ಕಾರಣ ತಿಳಿಸಿದ ರವಿ ಶಾಸ್ತ್ರಿ!

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ವಿರಾಟ್‌ ಕೊಹ್ಲಿ, ಜೇಕಬ್‌ ಬೆಥೆಲ್‌, ದೇವದತ್‌ ಪಡಿಕ್ಕಲ್‌, ರಜತ್‌ ಪಾಟಿದಾರ್‌ (ನಾಯಕ), ಜಿತೇಶ್‌ ಶರ್ಮಾ, ಟಿಮ್‌ ಡೇವಿಡ್‌, ರೊಮ್ಯಾರಿಯೊ ಶೆಫರ್ಡ್‌, ಕೃಣಾಲ್‌ ಪಂದ್ಯ, ಭುವನೇಶ್ವರ್‌ ಕುಮಾರ್‌, ಸುಯಶ್‌ ಶರ್ಮಾ, ಜಾಶ್‌ ಹೇಝಲ್‌ವುಡ್‌

ಲಖನೌ ಸೂಪರ್‌ ಜಯಂಟ್ಸ್‌: ಮಿಚೆಲ್ ಮಾರ್ಷ್, ಏಡೆನ್ ಮಾರ್ಕ್ರಮ್, ರಿಷಭ್ ಪಂತ್ (ನಾಯಕ& ವಿಕೆಟ್‌ ಕೀಪರ್‌), ಜಾಶ್ ಇಂಗ್ಲಿಸ್, ನಿಕೋಲಸ್ ಪೂರನ್, ಅಕ್ಷತ್ ರಘುವಂಶಿ, ಹಿಮ್ಮತ್ ಸಿಂಗ್, ಮೊಹಮ್ಮದ್ ಶಮಿ, ಮೊಹ್ಸಿನ್ ಖಾನ್, ಆವೇಶ್ ಖಾನ್, ಪ್ರಿನ್ಸ್ ಯಾದವ್