ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 2026ರ ಆವೃತ್ತಿ ಆರಂಭಕ್ಕೂ ಮುನ್ನ ನಡೆದ ಒಂದು ಸಣ್ಣ ಘಟನೆ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಗುಜರಾತ್ ಟೈಟನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿರುವ ಆಸೀಸ್ ದಿಗ್ಗಜ ಮ್ಯಾಥ್ಯೂ ಹೇಡೆನ್ ಅವರು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಸ ಎತ್ತುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಪ್ರಾಕ್ಟಿಸ್ ವೇಳೆ, ಸ್ಟೇಡಿಯಂನಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲ್‌ಗಳು ಮತ್ತು ಕಸದ ತುಂಡುಗಳನ್ನು ಹೇಡನ್ ಸ್ವತಃ ಕಲೆಹಾಕಿ ಡಸ್ಟ್‌ಬಿನ್‌ಗೆ ಹಾಕುತ್ತಿರುವ ದೃಶ್ಯವನ್ನು ಗುಜರಾತ್ ಟೈಟನ್ಸ್ ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿತ್ತು.
ಒಬ್ಬ ಅಂತಾರಾಷ್ಟ್ರೀಯ ಮಟ್ಟದ ಮಾಜಿ ಆಟಗಾರ, ಕೋಚ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಇಂತಹ ಸಣ್ಣ ಕೆಲಸವನ್ನು ಸ್ವತಃ ಮಾಡಿರುವುದು ಹಲವರ ಮೆಚ್ಚುಗೆಗೆ ಪಾತ್ರವಾಯಿತು.
Updated IPL 2026 Points Table: ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಿಂದ ಅಗ್ರಸ್ಥಾನಕೇರಿದ ಆರ್‌ಸಿಬಿ
ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಹೇಡನ್ ಅವರ ವಿನಮ್ರತೆಯನ್ನು ಪ್ರಶಂಸಿಸಿದರೆ, ಇನ್ನೂ ಕೆಲವರು ಭಾರತೀಯರ ಸಿವಿಕ್ ಸೆನ್ಸ್ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
"ನಾವು ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ ಮಟ್ಟದ ಕ್ರೀಡಾಂಗಣಗಳೊಂದಿಗೆ ಹೋಲಿಕೆ ಮಾಡ್ತೇವೆ. ಆದರೆ ನಮ್ಮ ಸ್ವಚ್ಛತೆ ಬಗ್ಗೆ ಯೋಚನೆ ಮಾಡ್ತೇವಾ?," ಎಂಬ ಪ್ರಶ್ನೆಗಳು ಕೇಳಿಬಂದಿವೆ.
ಈ ಘಟನೆ ಭಾರತದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗಿದೆ. ಕೆಲವರು "ವಿದೇಶಿ ಕೋಚ್ ನಮ್ಮಿಗೆ ಸಿವಿಕ್ ಸೆನ್ಸ್ ಕಲಿಸಬೇಕಾದ ಪರಿಸ್ಥಿತಿ ಏಕೆ?," ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
IPL 2026: 28 ರನ್‌ಗೆ ಔಟಾದರೂ ರೋಹಿತ್ ಶರ್ಮಾರ ದೊಡ್ಡ ದಾಖಲೆ ಮುರಿದ ವಿರಾಟ್ ಕೊಹ್ಲಿ!
ಹೇಡನ್ ಅವರ ಈ ನಡೆಗೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. "ಅವರು ಕೇವಲ ಕ್ರಿಕೆಟ್ ಕೋಚ್ ಅಲ್ಲ, ಉತ್ತಮ ನಾಗರಿಕನ ಮಾದರಿ," ಎಂದು ಕೆಲವರು ಹೇಳಿದ್ದಾರೆ. ಇಂತಹ ಸರಳ ನಡೆಗಳು ಸಮಾಜಕ್ಕೆ ದೊಡ್ಡ ಸಂದೇಶ ನೀಡುತ್ತವೆ ಎಂಬುದು ಅನೇಕರ ಅಭಿಪ್ರಾಯ.
ಅಂದಹಾಗೆ ಮ್ಯಾಥ್ಯೂ ಹೇಡನ್ ಮಾಡಿದ ಈ ಸಣ್ಣ ಕಾರ್ಯವು ದೊಡ್ಡ ಸಂದೇಶವನ್ನು ನೀಡುತ್ತದೆ. ಸ್ವಚ್ಛತೆ ಸರ್ಕಾರದ ಕೆಲಸ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ನಾವು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದರಿಂದ ಮಾತ್ರ ಉತ್ತಮ ಸಮಾಜವನ್ನು ನಿರ್ಮಿಸಬಹುದು.
ಗುಜರಾತ್ ಟೈಟನ್ಸ್‌ಗೆ ನಿರಾಶೆ
ಈ ಘಟನೆ ನಡೆದ ನಂತರ ನಡೆದ ಐಪಿಎಲ್ 2026ರ ಆವೃತ್ತಿಯಲ್ಲಿ ಗುಜರಾತ್ ಟೈಟನ್ಸ್ ಆಡಿದ ತನ್ನ ಮೊದಲ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡಿತು. ಪಂಜಾಬ್ ಕಿಂಗ್ಸ್ ತಂಡವು ಉತ್ತಮ ಪ್ರದರ್ಶನ ನೀಡಿದ್ದು, ಪಂದ್ಯವನ್ನು ಮೂರು ವಿಕೆಟ್‌ಗಳಿಂದ ಗೆದ್ದುಕೊಂಡಿತು.