ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RCB vs MI ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ, ಸೂರ್ಯಕುಮಾರ್‌ ಆಡ್ತಾರಾ? ಬಿಗ್‌ ಅಪ್ಡೇಟ್‌ ಇಲ್ಲಿದೆ!

RCB vs MI: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಮೇ 10 ರಂದು ರಾಯ್ಪುರದಲ್ಲಿ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 54ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಹಾರ್ದಿಕ್‌ ಪಾಂಡ್ಯ ಹಾಗೂ ಸೂರ್ಯಕುಮಾರ್‌ ಯಾದವ್‌ ಲಭ್ಯತೆಯ ಬಗ್ಗೆ ಬಿಗ್‌ ಅಪ್ಡೇಟ್‌ ಹೊರಬಿದ್ದಿದೆ.

ಆರ್‌ಸಿಬಿ ಪಂದ್ಯದಲ್ಲಿ ಹಾರ್ದಿಕ್‌-ಸೂರ್ಯ ಆಡ್ತಾರಾ?

ನವದೆಹಲಿ: ಭಾನುವಾರ ರಾಯ್ಪುರದಲ್ಲಿ ನಡೆಯುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಅಲಭ್ಯರಾಗಲಿದ್ದಾರೆ. ಈ ಬಗ್ಗೆ ಮುಂಬೈ ಇಂಡಿಯನ್ಸ್‌ ತನ್ನ ಅಧೀಕೃತ ಹೇಳಿಕೆಯಲ್ಲಿ ತಿಳಿಸಿದೆ. ಅವರು ಗಾಯದಿಂದ ಗುಣಮುಖರಾಗುತ್ತಿದ್ದು, ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದಾರೆ. ಅವರ ಉಸ್ತುವಾರಿಯನ್ನು ತಂಡದ ಮೆಡಿಕಲ್‌ ಟೀಮ್‌ ನೋಡಿಕೊಳ್ಳುತ್ತಿದೆ ಎಂದು ತನ್ನ ಹೇಳಿಕೆಯಲ್ಲಿ ಮಾಹಿತಿ ನೀಡಿದೆ. ಆದರೆ, ಮೊದಲ ಮಗುವಿನ ಖುಷಿಯಲ್ಲಿರುವ ಸೂರ್ಯಕುಮಾರ್‌ ಯಾದವ್‌ ಅವರು ಈ ಪಂದ್ಯದಲ್ಲಿ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಬೆನ್ನು ನೋವಿನ ಗಾಯದಿಂದ ಗುಣಮುಖರಾಗುತ್ತಿರುವ ಕಾರಣ ಹಾರ್ದಿಕ್‌ ಪಾಂಡ್ಯ ಅವರು ಮೇ 4 ರಂದು ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದರು. ಹಾಗಾಗಿ ಈ ಪಂದ್ಯದಲ್ಲಿ ತಂಡವನ್ನು ಸೂರ್ಯಕುಮಾರ್‌ ಯಾದವ್‌ ಮುನ್ನಡೆಸಿದ್ದರು. ಅಂದ ಹಾಗೆ ಬ್ಯಾಟಿಂಗ್‌ನಲ್ಲಿ ಹಾರ್ದಿಕ್‌ ಪಾಂಡ್ಯ ವೈಫಲ್ಯ ಅನುಭವಿಸುತ್ತಿದ್ದಾರೆ. ಆಡಿದ್ದ 8 ಪಂದ್ಯಗಳಿಂದ 136.45ರ ಸ್ಟ್ರೈಕ್‌ ರೇಟ್‌ನಲ್ಲಿ ಕೇವಲ 146 ರನ್‌ಗಳನ್ನು ಗಳಿಸಿದ್ದಾರೆ. ಇನ್ನು ನಾಯಕತ್ವದಲ್ಲಿಯೂ ಅವರು ಪರಿಣಾಮಕಾರಿಯಾಗಿಲ್ಲ.

IPL 2026: ʻಟ್ರಿಸ್ಟನ್‌ ಸ್ಟಬ್ಸ್‌ ಓವರ್‌ ರೇಟ್‌ ಆಟಗಾರʼ-ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಟೀಕಿಸಿದ ಕೆ ಶ್ರೀಕಾಂತ್‌!

ಆರ್‌ಸಿಬಿ ಪಂದ್ಯದ ಆಯ್ಕೆಗೆ ಸೂರ್ಯ ಲಭ್ಯ

ಸೂರ್ಯಕುಮಾರ್‌ ಯಾದವ್‌ ಅವರು ಭಾನುವಾರ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆಂದು ಎಂಐ ಮೀಡಿಯಾ ತಂಡ ಮಾಹಿತಿ ಒದಗಿಸಿದೆ.

ವೈಯಕ್ತಿಕ ಕಾರಣಗಳಿಂದಾಗಿ ಸೂರ್ಯಕುಮಾರ್‌ ಯಾದವ್‌ ಅವರು ಭಾನುವಾರ ರಾಯಪುರದಲ್ಲಿ ನಡೆಯುವ ಪಂದ್ಯದಲ್ಲಿ ಆರಂಭಿಕ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಇದೀಗ ಅವರು ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಲಭ್ಯರಾಗಲಿದ್ದು, ತಂಡದ ನಾಯಕರಾಗಿ ಮುನ್ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

IPL 2026: ಮುಂಬೈ ಇಂಡಿಯನ್ಸ್‌ ಎದುರು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಗೆಲ್ಲುವುದು ಪಕ್ಕಾ?

ಮುಂಬೈ ಇಂಡಿಯನ್ಸ್‌ ತಂಡ ಪ್ರಸ್ತುತ 10 ಪಂದ್ಯಗಳಿಂದ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಪ್ಲೇಆಫ್ ಪೈಪೋಟಿಯಲ್ಲಿ ಜೀವಂತವಾಗಿರಲು ಐದು ಬಾರಿ ಚಾಂಪಿಯನ್ ತಂಡ ಇನ್ನುಳಿದ ನಾಲ್ಕು ಪಂದ್ಯಗಳನ್ನೂ ಗೆಲ್ಲಬೇಕಾದ ಅನಿವಾರ್ಯತೆ ಎದುರಿಸಿದೆ. ಆದರೆ ಮುಂದಿನ ಪಂದ್ಯಗಳಲ್ಲಿ ಆರ್‌ಸಿಬಿ, ಪಂಜಾಬ್‌ ಕಿಂಗ್ಸ್‌, ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಕಠಿಣ ಸವಾಲು ಎದುರಾಗಲಿವೆ.

ಎಸ್‌ಆರ್‌ಎಚ್‌, ಆರ್‌ಸಿಬಿ, ಪಿಬಿಕೆಎಸ್‌ ಮತ್ತು ಆರ್‌ಆರ್‌ ತಂಡಗಳು ಪ್ರಸ್ತುತ ಅಂಕಪಟ್ಟಿಯ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದಿದ್ದು, ಪ್ಲೇಆಫ್ ಹಂತದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲು ಉತ್ಸುಕವಾಗಿವೆ. ಇನ್ನೊಂದೆಡೆ, ಕೆಕೆಆರ್‌ ತಂಡವು ಸತತ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿ, ಪ್ಲೇಆಫ್ ಮುಂದಿನ ಹಂತಕ್ಕೇರುವ ವಿಶ್ವಾಸದಲ್ಲಿದೆ.