ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IPL 2026: ಡೆಲ್ಲಿ ಕ್ಯಾಪಿಟಲ್ಸ್‌ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ ಏಕೆ ಆಡುತ್ತಿಲ್ಲ? ಕಾರಣ ತಿಳಿಸಿದ ಸೂರ್ಯಕುಮಾರ್‌!

DC vs MI: ಮುಂಬೈ ಇಂಡಿಯನ್ಸ್ ತಂಡದ ಈ ಸೀಸನ್‌ನ ಮೊದಲ ಹೊರಗಿನ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಅನುಪಸ್ಥಿತಿಯಲ್ಲಿ ಐದು ಬಾರಿ ಚಾಂಪಿಯನ್ಸ್‌ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

ಹಾರ್ದಿಕ್‌ ಪಾಂಡ್ಯ ಅಲಭ್ಯಕ್ಕೆ ಕಾರಣ ತಿಳಿಸಿದ ಸೂರ್ಯಕುಮಾರ್‌.

ನವದೆಹಲಿ: ಇಂಡಿಯನ್‌ ಪೀಮಿಯರ್‌ ಲೀಗ್‌ನ 2026ರ (IPL 2026) ಸಾಲಿನ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ (DC vs DC) ನಡುವಣ ಪಂದ್ಯದಲ್ಲಿ ನಾಯಕ ಹಾರ್ದಿಕ್‌ ಪಾಂಡ್ಯ ಆಡುತ್ತಿಲ್ಲ. ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ ವಿಶ್ರಾಂತಿ ನೀಡಲಾಗಿದ್ದು, ಸೂರ್ಯಕುಮಾರ್‌ ಯಾದವ್‌ ತಂಡವನ್ನು ಮುನ್ನಡೆಸಿದ್ದಾರೆ. ಮುಂಬೈ ಇಂಡಿಯನ್ಸ್‌ ತಂಡಕ್ಕೆ ಈ ಸೀಸನ್‌ನ ಮೊದಲ ಹೊರಗಿನ ಪಂದ್ಯವಾಗಿದೆ. ತನ್ನ ಮೊದಲನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧ ಗೆದ್ದು 19ನೇ ಆವೃತ್ತಿಯಲ್ಲಿ ಶುಭಾರಂಭ ಕಂಡಿತ್ತು.

ಈ ಪಂದ್ಯದಲ್ಲಿ ಟಾಸ್ ವೇಳೆ ಸೂರ್ಯಕುಮಾರ್ ಯಾದವ್ ಅವರು ಹಾರ್ದಿಕ್ ಪಾಂಡ್ಯ ಅಸ್ವಸ್ಥರಾಗಿರುವ ಕಾರಣ ಈ ಸೀಸನ್‌ನ ಮೊದಲ ಹೊರಗಿನ ಪಂದ್ಯಕ್ಕೆ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. " ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹಾಗಾಗಿ ಈ ಪಂದ್ಯದಲ್ಲಿ ಅವರ ಪಾತ್ರವನ್ನು ನಿರ್ವಹಿಸಲಿದ್ದೇನೆ," ಎಂದು ಸೂರ್ಯಕುಮಾರ್‌ ಯಾದವ್‌ ಮಾಹಿತಿ ನೀಡಿದ್ದಾರೆ.

IPL 2026: 2 ಬಾರಿ ಬ್ಯಾಟ್‌ ಟೆಸ್ಟ್‌ನಲ್ಲಿ ವಿಫಲರಾದ ಆಯುಷ್‌ ಮ್ಹಾತ್ರೆ! ಮುಂದೇನಾಯ್ತು ಗೊತ್ತೆ?

ಮುಂಬೈ ಇಂಡಿಯನ್ಸ್‌ ಅಧಿಕೃತ ಹೇಳಿಕೆ

"ಹಾರ್ದಿಕ್‌ ಪಾಂಡ್ಯ ಅವರ ಆರೋಗ್ಯ ಉತ್ತಮವಾಗಿಲ್ಲ, ಹಾಗಾಗಿ ಅವರು ಇಂದು (ಶನಿವಾರ) ಮೈದಾನದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಸೂರ್ಯಕುಮಾರ್‌ ಯಾದವ್‌ ಅವರು ತಂಡವನ್ನು ಮುನ್ನಡೆಸಲಿದ್ದಾರೆ," ಎಂದು ಮುಂಬೈ ಇಂಡಿಯನ್ಸ್‌ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ, ಮುಂಬೈ ಇಂಡಿಯನ್ಸ್ ತಂಡದಲ್ಲಿ ದೀಪಕ್ ಚಹರ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಜೊತೆಗೆ, ಟ್ರೆಂಟ್ ಬೌಲ್ಟ್ ಅವರ ಬದಲಿಗೆ ವೇಗದ ಬೌಲಿಂಗ್ ಆಲ್‌ರೌಂಡರ್ ಕಾರ್ಬಿನ್ ಬಾಷ್ ಅವರನ್ನು ತಂಡಕ್ಕೆ ಕರೆತರಲಾಗಿದೆ. ಸ್ಪಿನ್ ವಿಭಾಗದಲ್ಲಿ ಎಎಂ ಘಝನ್‌ಫರ್ ಬದಲಿಗೆ ಮಿಚೆಲ್ ಸ್ಯಾಂಟ್ನರ್ ಅವಕಾಶ ಪಡೆದಿದ್ದಾರೆ. ಸ್ಯಾಂಟ್ನರ್ ಅವರು ಹಿಂದಿನ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದರು. ಆಗ ತಾನೆ ತಂಡಕ್ಕೆ ಬಂದಿದ್ದ ಕಾರಣ ಅವರು ಕೆಕೆಆರ್‌ ಪಂದ್ಯಕ್ಕೆ ತಪ್ಪಿಸಿಕೊಂಡಿದ್ದರು.



ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಗೆಲುವಿನ ಸಂಯೋಜನೆಯನ್ನು ಮುಂದುವರಿಸಿದೆ. ಬುಧವಾರ ಏಕನಾ ಕ್ರೀಡಾಂಗಣದಲ್ಲಿ ಲಖನೌ ಸೂಪರ್ ಜಯಂಟ್ಸ್‌ ವಿರುದ್ಧ ಆರು ವಿಕೆಟ್‌ಗಳ ಜಯ ಸಾಧಿಸಿದ್ದ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ.

ಇದಕ್ಕೂ ಮೊದಲು, ಮುಂಬೈ ಇಂಡಿಯನ್ಸ್ ತಂಡ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಸೀಸನ್‌ನ ತಮ್ಮ ಮೊದಲ ತವರು ಪಂದ್ಯದಲ್ಲಿ ಕೊಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿತ್ತು. ಸೂರ್ಯಕುಮಾರ್ ಯಾದವ್ ಕುರಿತು ಮಾತನಾಡುವುದಾದರೆ, ಅವರು ಇತ್ತೀಚೆಗೆ ಭಾರತ ತಂಡವನ್ನು ಟಿ20 ವಿಶ್ವಕಪ್ ಜಯದತ್ತ ಮುನ್ನಡೆಸಿದ್ದರು. ಜೊತೆಗೆ, ಅವರು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಈಗಾಗಲೇ ಎರಡು ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದಾರೆ.



ಇತ್ತಂಡಗಳ ಪ್ಲೇಯಿಂಗ್‌ XI

ಮುಂಬೈ ಇಂಡಿಯನ್ಸ್‌: ರೋಹಿತ್ ಶರ್ಮಾ, ರಿಯಾನ್ ರಿಕೆಲ್ಟನ್ (ವಿಕೆಟ್‌ ಕೀಪರ್‌), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ನಮನ್ ಧೀರ್, ಶೆರ್ಫೇನ್ ಋದರ್‌ಫೋರ್ಡ್, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಜಸ್‌ಪ್ರೀ ಬುಮ್ರಾ

ಡೆಲ್ಲಿ ಕ್ಯಾಪಿಟಲ್ಸ್‌: ಕೆಎಲ್ ರಾಹುಲ್ (ವಿಕೆಟ್‌ ಕೀಪರ್‌), ಪಥುಮ್ ನಿಸ್ಸಾಂಕ, ನಿತೀಶ್ ರಾಣಾ, ಅಕ್ಷರ್‌ ಪಟೇಲ್ (ನಾಯಕ), ಟ್ರಿಸ್ಟನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ವಿಪ್ರಜ್ ನಿಗಮ್, ಲುಂಗಿ ಎನ್‌ಗಿಡಿ, ಕುಲ್ದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್