ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IPL 2026 Points table: ಲಖನೌ ಎದುರು ದೊಡ್ಡ ಗೆಲುವಿನ ಬಳಿಕ ಅಗ್ರ ಸ್ಥಾನಕ್ಕೆ ಮರಳಿದ ಆರ್‌ಸಿಬಿ!

IPL 2026 Points Table: ಲಖನೌ ಸೂಪರ್‌ ಜಯಂಟ್ಸ್‌ ಎದುರು ಗೆಲುವು ಪಡೆದ ಬಳಿಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಮತೊಮ್ಮೆ ಲಗ್ಗೆ ಇಟ್ಟಿತು. ಆರ್‌ಸಿಬಿ ಗೆಲುವಿನ ಬಳಿಕ ಪಾಯಿಂಟ್ಸ್‌ ಟೇಬಲ್‌ ಹೇಗಿದೆ ಎಂದು ಇಲ್ಲಿ ವಿವರಿಸಲಾಗಿದೆ.

2026ರ ಐಪಿಎಲ್‌ ಪಾಯಿಂಟ್ಸ್‌ ಟೇಬಲ್‌.

ಬೆಂಗಳೂರು: ರಜತ್‌ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಏಪ್ರಿಲ್ 15 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 23ನೇ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ (IPL 2026 Points Table) ಮತ್ತೆ ಅಗ್ರಸ್ಥಾನಕ್ಕೇರಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ, ಈ ವರ್ಷ ಟೂರ್ನಿಯಲ್ಲಿ ಅತ್ಯಂತ ಬಲಿಷ್ಠ ತಂಡಗಳಲ್ಲಿ ಒಂದಾಗಿ ಹೊರಹೊಮ್ಮಿದ್ದು, ಸತತ ಎರಡನೇ ಜಯವನ್ನು ದಾಖಲಿಸುವ ಮೂಲಕ ಮತ್ತೆ ಅಗ್ರ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಆರ್‌ಸಿಬಿಯ ಈ ಗೆಲುವಿನೊಂದಿಗೆ ರಾಜಸ್ಥಾನ್‌ ರಾಯಲ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳು ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಕ್ಕೆ ಕುಸಿದಿವೆ. ಇನ್ನು, ಸನ್‌ರೈಸರ್ಸ್‌ ಹೈದರಾಬಾದ್‌ ತಂಡ, ತನ್ನ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ನಂತರ ನಾಲ್ಕನೇ ಸ್ಥಾನದಲ್ಲಿಯೇ ಉಳಿದಿದೆ. ರಾಜಸ್ಥಾನ್ ರಾಯಲ್ಸ್ ತಂಡ, ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ತನ್ನ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬ್ಯಾಟಿಂಗ್ ಕುಸಿತದಿಂದ ಸೋಲು ಅನುಭವಿಸಿತ್ತು.

RCB vs LSG: ರಸಿಖ್‌ ಸಲಾಮ್‌ ಮಾರಕ ದಾಳಿ, ಲಖನೌ ಎದುರು ಗೆದ್ದು ಅಗ್ರ ಸ್ಥಾನಕ್ಕೇರಿದ ಆರ್‌ಸಿಬಿ!

ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳು ಪಾಯಿಂಟ್ಸ್‌ ಟೇಬಲ್‌ನಲ್ಲಿ ಕುಸಿತ

ಮತ್ತೊಂದೆಡೆ ಒಟ್ಟಾಗಿ 13 ಟ್ರೋಫಿಗಳನ್ನು ಗೆದ್ದಿರುವ ಮತ್ತು ಟೂರ್ನಿ ಇತಿಹಾಸದಲ್ಲೇ ಅತ್ಯಂತ ದೊಡ್ಡ ತಂಡಗಳೆಂದು ಪರಿಗಣಿಸಲ್ಪಡುವ ಮೂರು ತಂಡಗಳು ಇದೀಗ ಅಂಕಪಟ್ಟಿಯಲ್ಲಿ ಕುಸಿದಿವೆ. ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ಕ್ರಮವಾಗಿ 8ನೇ ಮತ್ತು 9ನೇ ಸ್ಥಾನಗಳಲ್ಲಿ ಇದ್ದಾರೆ. ಇನ್ನು ಗೆಲುವು ಕಾಣದ‌ ಅಜಿಂಕ್ಯ ರಹಾನೆ ನಾಯಕತ್ವದ ಕೋಲ್ಕತಾ ನೈಟ್‌ ರೈಡರ್‌ಸ್ ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿದೆ.

ಆರ್‌ಸಿಬಿ ಗೆಲುವಿನ ಬಳಿಕ 2026ರ ಐಪಿಎಲ್‌ ಪಾಯಿಂಟ್ಸ್‌ ಟೇಬಲ್‌ ಹೀಗಿದೆ:

IPL 2026 Points table

ಎಲ್‌ಎಸ್‌ಜಿ ಎದುರು ಆರ್‌ಸಿಬಿಗೆ 5 ವಿಕೆಟ್‌ ಭರ್ಜರಿ ಜಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. 16ನೇ ಓವರ್‌ನ ಮೊದಲ ಬಾಲ್‌ನಲ್ಲಿ ರೊಮ್ಯಾರಿಯೋ ಶೆಫರ್ಡ್‌ ಬೌಂಡರಿ ಬಾರಿಸುವ ಮೂಲಕ ಪಂದ್ಯಕ್ಕೆ ತೆರೆ ಎಳೆದರು.147 ರನ್‌ಗಳ ಗುರಿಯನ್ನು ಆರ್‌ಸಿಬಿ ಕೇವಲ 15.1 ಓವರ್‌ಗಳಲ್ಲಿ ಸುಲಭವಾಗಿ ಬೆನ್ನತ್ತಿತು. ಈ ಜಯದೊಂದಿಗೆ ಉತ್ತಮ ರನ್‌ರೇಟ್‌ನ ಕಾರಣದಿಂದ ಆರ್‌ಸಿಬಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದರಿಂದ ರಾಜಸ್ಥಾನ್‌ ರಾಯಕ್‌ಸ್ ಎರಡನೇ ಸ್ಥಾನಕ್ಕೆ ಕುಸಿದಿದೆ.

ಆರ್‌ಸಿಬಿ ಪರ ವಿರಾಟ್‌ ಕೊಹ್ಲಿ 49 ರನ್‌ಗಳೊಂದಿಗೆ ಬ್ಯಾಟಿಂಗ್‌ಗೆ ಮುನ್ನಡೆ ನೀಡಿದರು. ಎಲ್‌ಎಸ್‌ಜಿ ಪರವಾಗಿ ಪ್ರಿನ್ಸ್‌ ಯಾದವ್‌ ಒಂದು ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದರೂ, ಅವರ ತಂಡಕ್ಕೆ ಯಾವುದೇ ನೆರವಾಗಲಿಲ್ಲ. ಐದು ಪಂದ್ಯಗಳಲ್ಲಿ ನಾಲ್ಕನೇ ಜಯ ಸಾಧಿಸಿರುವ ಆರ್‌ಸಿಬಿ, ಈ ಸೀಸನ್‌ನಲ್ಲಿ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಪ್ರಮುಖ ನೆಚ್ಚಿನ ತಂಡವಾಗಿ ಕಾಣಿಸುತ್ತಿದೆ. ಇನ್ನೊಂದೆಡೆ, ಎಲ್‌ಎಸ್‌ಜಿ ಐದು ಪಂದ್ಯಗಳಲ್ಲಿ ಮೂರನೇ ಸೋಲನ್ನು ಅನುಭವಿಸಿದೆ ಹಾಗೂ ಏಳನೇ ಸ್ಥಾನದಲ್ಲಿದೆ.