ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸಾಲಿನ (IPL 2026) ಅಂಕಪಟ್ಟಿಯ ಅಗ್ರ ಎರಡು ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ (RCB vs GT) ತಂಡಗಳು ಮೇ 26 ರಂದು ಮಂಗಳವಾರ ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುವ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಶುಭಮನ್ ಗಿಲ್ ನಾಯಕತ್ವದ ಜಿಟಿ ಎದುರು ಗೆದ್ದು ಟೂರ್ನಿಯ ಫೈನಲ್‌ಗೆ ನೇರವಾಗಿ ಅರ್ಹತೆ ಪಡೆಯಲು ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಎದುರು ನೋಡುತ್ತಿದೆ.
ಹಾಲಿ ಚಾಂಪಿಯನ್ಸ್ ಆರ್‌ಸಿಬಿ 19ನೇ ಆವೃತ್ತಿಯಲ್ಲಿ ಆಡಿದ 14 ಪಂದ್ಯಗಳಲ್ಲಿ 18 ಅಂಕಗಳನ್ನು ಕಲೆ ಹಾಕಿ ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನದೊಂದಿಗೆ ಲೀಗ್ ಹಂತವನ್ನು ಮುಗಿಸಿತ್ತು. ಅದರಂತೆ ಮೊದಲನೇ ಕ್ವಾಲಿಫೈಯರ್ ಪಂದ್ಯದಲ್ಲಿ ಜಿಟಿ ಎದುರು ಗೆದ್ದು ಸತತ ಎರಡನೇ ಬಾರಿ ಫೈನಲ್‌ಗೆ ಪ್ರವೇಶ ಮಾಡಲು ಯೋಜನೆಯನ್ನು ಹಾಕಿಕೊಂಡಿದೆ. ಈ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಈ ಎರಡೂ ತಂಡಗಳು ಕಾದಾಟ ನಡೆಸಿದ್ದವು. ಆದರೆ, ಆರ್‌ಸಿಬಿ ಹಾಗೂ ಜಿಟಿ ತಂಡಗಳು ತಮ್ಮ-ತಮ್ಮ ತವರು ಅಂಗಣಗಳಲ್ಲಿ ತಲಾ ಒಂದೊಂದು ಪಂದ್ಯವನ್ನು ಗೆದ್ದುಕೊಂಡಿದ್ದವು.
ಐಪಿಎಲ್ ಪ್ಲೇ-ಆಫ್‌ಗೆ ಅಖಾಡ ಸಿದ್ಧ; ನಾಲ್ಕು ತಂಡಗಳ ಪಂದ್ಯದ ವೇಳಾಪಟ್ಟಿ ಹೀಗಿದೆ
ಇನ್ನು ಗುಜರಾತ್ ಟೈಟನ್ಸ್ ತಂಡ ಈ ಸೀಸನ್‌ನ ಮೊದಲ ಅವಧಿಯಲ್ಲಿ ನಿಧಾನಗತಿಯ ಆರಂಭ ಪಡೆದರೂ ಎರಡನೇ ಅವಧಿಯಲ್ಲಿ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿತು. 14 ಪಂದ್ಯಗಳ ಪೈಕಿ 18 ಅಂಕಗಳ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದ ಮೂಲಕ ಮೊದಲನೇ ಕ್ವಾಲಿಫೈಯರ್‌ಗೆ ಜಿಟಿ ಲಗ್ಗೆ ಇಟ್ಟಿದೆ. ಅಂದ ಹಾಗೆ ಕಳೆದ ಪಂದ್ಯದಲ್ಲಿ ಆರ್‌ಸಿಬಿಯನ್ನು ಮಣಿಸಿದ ವಿಶ್ವಾಸದಲ್ಲಿರುವ ಜಿಟಿ, ಇದೀಗ ಅದೇ ಲಯವನ್ನು ಮುಂದುವರಿಸಲು ಎದುರು ನೋಡುತ್ತಿದೆ.
ಪಂದ್ಯದ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್
2026ರ ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯ
ದಿನಾಂಕ: ಮೇ 16, 2026
ಸಮಯ: ಸಂಜೆ 07:30ಕ್ಕೆ ಆರಂಭ
ಸ್ಥಳ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ಧರ್ಮಶಾಲಾ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್‌ಸ್ಟ್ರೀಮಿಂಗ್: ಜಿಯೊ ಸಿನಿಮಾ ಹಾಟ್‌ಸ್ಟಾರ್
RCB vs GT Qualifier 1: ಕ್ವಾಲಿಫೈಯರ್-1 ಪಂದ್ಯದ ಮಳೆ ನಿಯಮ ಹೇಗಿದೆ? ಪಂದ್ಯ ರದ್ದಾದರೆ ಯಾರು ಫೈನಲ್‌ಗೆ?
ಪಿಚ್ ರಿಪೋರ್ಟ್
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ ಹಾಗೂ ಬ್ಯಾಟಿಂಗ್ ಸ್ಟ್ರೋಕ್‌ಗೆ ಚೆಂಡು ಉತ್ತಮವಾಗಿ ಸಿಗಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುವ ತಂಡ 200 ರಿಂದ 220 ರನ್‌ಗಳನ್ನು ಸುಲಭವಾಗಿ ಕಲೆ ಹಾಕಬಹುದು. ಆದರೆ, ಬೌಲರ್‌ಗಳು ಶಿಸ್ತುಬದ್ದವಾಗಿ ಉತ್ತಮ ಲೈನ್ ಅಂಡ್ ಲೆನ್ತ್ ಬೌಲ್ ಮಾಡಿದರೆ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಹೇರಬಹುದು. ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಚೇಸಿಂಗ್ ಆಯ್ಕೆ ಮಾಡಬಹುದು. ಅಂದ ಹಾಗೆ ಆರ್‌ಸಿಬಿ, ಈ ಅಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆಡಿ ಗೆಲುವು ಪಡೆದಿತ್ತು. ಇದೀಗ ಅದೇ ವಿಶ್ವಾಸವನ್ನು ಜಿಟಿ ಎದುರು ಮುಂದುವರಿಸಬಹುದು.
ಮುಖಾಮುಖಿ ದಾಖಲೆ
ಒಟ್ಟು ಆಡಿರುವ ಪಂದ್ಯಗಳು: 08
ಆರ್‌ಸಿಬಿ ಗೆಲುವು: 04
ಜಿಟಿ ಗೆಲುವು: 04
RCB vs GT: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೇಡು ತೀರಿಸಿಕೊಂಡ ಗುಜರಾತ್ ಟೈಟನ್ಸ್!
ಇತ್ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವೆಂಕಟೇಶ್ ಅಯ್ಯರ್/ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ಸುಯಾಶ್ ಶರ್ಮಾ, ರಸಿಖ್ ಸಲಾಮ್ ದಾರ್.
ಇಂಪ್ಯಾಕ್ಟ್ ಪ್ಲೇಯರ್: ಟಿಮ್ ಡೇವಿಡ್
ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಅರ್ಷದ್ ಖಾನ್, ಮೊಹಮ್ಮದ್ ಸಿರಾಜ್
ಇಂಪ್ಯಾಕ್ಟ್ ಪ್ಲೇಯರ್: ಪ್ರಸಿಧ್ ಕೃಷ್ಣ