ಜೈಪುರ: ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (RR vs SRH) ನಡುವಿನ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂದ್ಯದಲ್ಲಿ 15ರ ವಯಸ್ಸಿನ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತೊಮ್ಮೆ ತಮ್ಮ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನವನ್ನು ತೋರಿ ಎಲ್ಲರ ಹೃದಯ ಗೆದ್ದರು. ವೈಭವ್ ಸೂರ್ಯವಂಶಿ ಕೇವಲ 36 ಎಸೆತಗಳಲ್ಲಿ ತಮ್ಮ ಎರಡನೇ ಐಪಿಎಲ್ ಶತಕವನ್ನು ಪೂರೈಸಿದರು. ಕಳೆದ ವರ್ಷ ಇದೇ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕವನ್ನು ಸಿಡಿಸಿದ್ದರು. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ವೇಗದ ಶತಕದ ಸಿಡಿಸಿದ ಎರಡನೇ ಬ್ಯಾಟ್ಸ್‌ಮನ್ ಹಾಗೂ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಇದೀಗ ಅವರು ಮತ್ತೊಂದು ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ವೈಭವ್ ಸೂರ್ಯವಂಶಿ ಮೂರನೇ ಅತಿ ವೇಗದ ಶತಕ ಬಾರಿಸಿದ್ದಾರೆ. ಎರಡನೇ ಅತಿ ವೇಗದ ಶತಕದ ದಾಖಲೆಯೂ ಅವರ ಹೆಸರಿನಲ್ಲಿದೆ; ಗುಜರಾತ್ ಟೈಟನ್ಸ್ ವಿರುದ್ಧ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಏತನ್ಮಧ್ಯೆ, ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕದ ದಾಖಲೆ 'ಯೂನಿವರ್ಸ್ ಬಾಸ್' ಕ್ರಿಸ್ ಗೇಲ್ ಅವರದ್ದಾಗಿದೆ, ಅವರು 2013 ರಲ್ಲಿ ಪುಣೆ ವಾರಿಯರ್ಸ್ ಇಂಡಿಯಾ ವಿರುದ್ಧ ಕೇವಲ 30 ಎಸೆತಗಳಲ್ಲಿ ಈ ಮೈಲುಗಲ್ಲು ತಲುಪಿದರು.
DC vs PBKS: ಕೆಎಲ್ ರಾಹುಲ್ ಶತಕ ವ್ಯರ್ಥ, ಹೈಸ್ಕೋರಿಂಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್ ರೋಚಕ ಜಯ!
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಶತಕ ಗಳಿಸಿದ ಬೆನ್ನಲ್ಲೆ ವೈಭವ್ ಸೂರ್ಯವಂಶಿ ವಿಕೆಟ್ ಒಪ್ಪಿಸಿದರು. ಅವರು ತಮ್ಮ ಈ ಇನಿಂಗ್ಸ್‌ನಲ್ಲಿ ಅವರು ಕೇವಲ 37 ಎಸೆತಗಳಲ್ಲಿ 103 ರನ್ ಗಳಿಸಿದ ಇನಿಂಗ್ಸ್ ಆಡಿದರು. ಸೂರ್ಯವಂಶಿ 278.38ರ ಸ್ಟ್ರೈಕ್ ರೇಟ್ ಕಾಯ್ದುಕೊಂಡರು. ಅವರ ಇನಿಂಗ್ಸ್‌ನಲ್ಲಿ 5 ಬೌಂಡರಿಗಳು ಮತ್ತು 12 ಸಿಕ್ಸರ್‌ಗಳು ಸೇರಿವೆ. ಗಮನಾರ್ಹವಾಗಿ, ಈ ಋತುವಿನ ಆರಂಭದಲ್ಲಿ ಈ ಎರಡೂ ತಂಡಗಳು ಮೊದಲು ಮುಖಾಮುಖಿಯಾದಾಗ, ವೈಭವ್ ಸೂರ್ಯವಂಶಿ "ಗೋಲ್ಡನ್ ಡಕ್" ಆಗಿದ್ದರು. ಆದಾಗ್ಯೂ, ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಅವರು ಅದೇ ತಂಡದ ವಿರುದ್ಧ ಸ್ಪೋಟಕ ಬ್ಯಾಟಿಂಗ್ ನಡೆಸಿ ಸೇಡು ತೀರಿಸಿಕೊಂಡರು.
ಟಿ20 ಕ್ರಿಕೆಟ್‌ನಲ್ಲಿ 1,000 ರನ್ ಗಳಿಸಿದ ಅತ್ಯಂತ ಕಿರಿಯ ಆಟಗಾರ
ಆರ್‌ಆರ್‌ನ ವೈಭವ್ ಸೂರ್ಯವಂಶಿ ಟಿ20 ಕ್ರಿಕೆಟ್‌ನಲ್ಲಿ 1,000 ರನ್ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 15 ವರ್ಷ ಮತ್ತು 29 ದಿನಗಳಲ್ಲಿ ಟಿ20 ಸ್ವರೂಪದಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಇನಿಂಗ್ಸ್‌ನೊಂದಿಗೆ, ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ ಪಡೆದಿದ್ದಾರೆ. ಅವರು ಈಗ 8 ಪಂದ್ಯಗಳಲ್ಲಿ 357 ರನ್ ಗಳಿಸಿದ್ದಾರೆ. ಈ ವರ್ಷ ಆರೆಂಜ್ ಕ್ಯಾಪ್ ಗೆಲ್ಲುವ ಸ್ಪರ್ಧೆಯಲ್ಲಿ ಅವರು ದೃಢವಾಗಿ ಉಳಿದಿದ್ದಾರೆ. ಈ ಋತುವಿನಲ್ಲಿ ಇಲ್ಲಿಯವರೆಗೆ ಅವರು 2 ಅರ್ಧಶತಕಗಳು ಮತ್ತು ಒಂದು ಶತಕವನ್ನು ಗಳಿಸಿದ್ದಾರೆ.