ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IPL 2026: ಕಾಲ್ತುಳಿದಲ್ಲಿ ಮೃತರಾದವರಿಗೆ ಗೌರವಾರ್ಥವಾಗಿ 11 ಆಸನಗಳನ್ನು ಕಾಯ್ದಿರಿಸಿದ ಆರ್‌ಸಿಬಿ!

ಕಳೆದ ವರ್ಷ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಚೊಚ್ಚಲ ಐಪಿಎಲ್‌ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಂಭಿಸಿದ್ದ ಕಾಲ್ತುಳಿದಲ್ಲಿ ಮೃತರಾದ 11 ಮಂದಿ ಆರ್‌ಸಿಬಿ ಅಭಿಮಾನಿಗಳಿಗೆ ಬೆಂಗಳೂರು ಫ್ರಾಂಚೈಸಿ ವಿಶೇಷ ಗೌರವವನ್ನು ಸಲ್ಲಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೌರವಾರ್ಥವಾಗಿ 11 ಆಸನಗಳನ್ನು ಶಾಶ್ವತವಾಗಿ ಮೀಸಲಿಟ್ಟಿದೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣ.

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಕಳೆದ ಬೇಸಿಗೆಯ ಕಾಲ್ತುಳಿತ ದುರಂತದ ನಂತರ ತನ್ನ ಮೊದಲ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪಂದ್ಯವನ್ನು ಆತಿಥ್ಯ ವಹಿಸಲು ಸಜ್ಜಾಗುತ್ತಿರುವ ಸಂದರ್ಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಡಳಿತ ಮಂಡಳಿ ಮೃತಪಟ್ಟ 11 ಅಭಿಮಾನಿಗಳಿಗೆ ವಿಶೇಷವಾಗಿ ಗೌರವ ಸಲ್ಲಿಸಲು ಮುಂದಾಗಿದೆ. ಆರ್‌ಸಿಬಿ ಮುಂದಿನ ಎಲ್ಲಾ ಪಂದ್ಯಗಳಲ್ಲಿ ಕ್ರೀಡಾಂಗಣದಲ್ಲಿ 11 ಆಸನಗಳನ್ನು ಶಾಶ್ವತವಾಗಿ ಕಾಯ್ದಿರಿಸಲು ನಿರ್ಧರಿಸಿದೆ. ಆ ಮೂಲಕ ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿ ಅಭಿಮಾನಿಗಳಿಗೆ ವಿಶೇಷ ಗೌರವವನ್ನು ನೀಡುತ್ತಿದೆ.

ಇದರ ಜತೆಗೆ ಆರ್‌ಸಿಬಿಯ ಎಲ್ಲಾ ಆಟಗಾರರು 11 ಸಂಖ್ಯೆಯ ಜೆರ್ಸಿಯನ್ನು ಧರಿಸಿ ಎಲ್ಲಾ ಅಭ್ಯಾಸದ ಸೇಷನ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೆ ಮೃತರಿಗೆ ಗೌರವಾರ್ಥವಾಗಿ ಸ್ಮಾರಕ ಫಲಕವನ್ನು ಸ್ಟೇಡಿಯಂನ ಒಳ ಪ್ರವೇಶ ದ್ವಾರದಲ್ಲಿ ಅನಾವರಣಗೊಳಿಸಲಾಗುತ್ತಿದೆ. ಆರ್‌ಸಿಬಿ ಸಿಇಒ ರಾಜೇಶ್‌ ಮೆನನ್‌ ಹಾಗೂ ತಂಡದ ಕ್ರಿಕೆಟ್‌ ಡೈರೆಕ್ಟರ್‌ ಮೊ ಬೊಬಾಟ್‌ ಈ ಬಗ್ಗೆ ಮಾರ್ಚ್‌ 24 ರಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಉದ್ಘಾಟನಾ ಪಂದ್ಯ ಮಾರ್ಚ್ 28 ರಂದು ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್‌ ತಂಡಗಳ ನಡುವೆ ನಡೆಯಲಿದೆ.

IPL 2026: ಐಪಿಎಲ್‌ ಆಡುವ ವಿದೇಶಿ ಆಟಗಾರರ ವಿರುದ್ಧ ರೊಚ್ಚಿಗೆದ್ದ ಸುನೀಲ್‌ ಗವಾಸ್ಕರ್‌! ಇದಕ್ಕೆ ಕಾರಣವೇನು?

ಬೆಂಗಳೂರು ನಗರದಲ್ಲಿ ಕ್ರಿಕೆಟ್ ಮರುಪ್ರವೇಶವು ಹಲವು ತಿಂಗಳ ಅನಿಶ್ಚಿತತೆ ಮತ್ತು ರಾಜ್ಯ ಸರ್ಕಾರ ನೇಮಿಸಿದ್ದ ತಜ್ಞ ಸಮಿತಿಯ ಕಟ್ಟುನಿಟ್ಟಿನ ಅನುಮೋದನಾ ಪ್ರಕ್ರಿಯೆಯ ಬಳಿಕ ಸಾಧ್ಯವಾಗಿದೆ. ನ್ಯಾಯಾಂಗ ತನಿಖೆಯಲ್ಲಿ ನಿರ್ಲಕ್ಷ್ಯದ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಫ್ರಾಂಚೈಸಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪಂದ್ಯದ ದಿನದ ಕಾರ್ಯಾಚರಣೆ ವಿಧಾನಗಳನ್ನು ಸಂಪೂರ್ಣವಾಗಿ ಪುನರ್‌ವ್ಯವಸ್ಥೆಗೊಳಿಸಿದೆ.

ಆರ್‌ಸಿಬಿ ಸಿಇಒ ರಾಜೇಶ್‌ ಮೆನನ್‌ ಹೇಳಿಕೆ

ಆರ್‌ಸಿಬಿ ಸಿಇಒ ರಾಜೇಶ್ ಮೆನನ್ ಅವರು ಜಾರಿಗೊಳಿಸಿರುವ ಭದ್ರತಾ ಕ್ರಮಗಳ ಬಗ್ಗೆ ವಿವರಿಸುತ್ತಾ, “ಕರ್ನಾಟಕ ರಾಜ್ಯ ಸರ್ಕಾರ—ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಆಯುಕ್ತರಿಗೆ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಕರ್ನಾಟಕ ಹೈಕೋರ್ಟ್‌ನಿಂದ ನಮಗೆ ಲಭಿಸಿರುವ ಎಸ್‌ಒಪಿ ಅನ್ನು ಕೆಎಸ್‌ಸಿಎ, ಆರ್‌ಸಿಬಿ ಹಾಗೂ ಡಿಎನ್‌ಎ ಸಂಸ್ಥೆಗಳು ಕರ್ನಾಟಕ ರಾಜ್ಯ ಪೊಲೀಸರ ಮಾರ್ಗದರ್ಶನದಲ್ಲಿ ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ,” ಎಂದು ತಿಳಿಸಿದ್ದಾರೆ.

IPL 2026: ಏಕೈಕ ಆವೃತ್ತಿಯಲ್ಲಿ 800ಕ್ಕೂ ಅಧಿಕ ರನ್‌ ಗಳಿಸಿದ ನಾಲ್ವರು ಬ್ಯಾಟರ್ಸ್‌!

ತಾಂತ್ರಿಕ ಮಟ್ಟದಲ್ಲಿ ಪ್ರಮುಖ ಸುಧಾರಣೆಗಳನ್ನು ಕೈಗೊಳ್ಳಲಾಗಿದೆ. 300ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಒಳಗೊಂಡ ಎಐ ಆಧಾರಿತ ಸಿಸಿಟಿವಿ ವ್ಯವಸ್ಥೆಯನ್ನು ಅಳವಡಿಸಲಾಗಿದೆ. “ಸರದಿ ಹೆಚ್ಚಳವಾಗಿದೆಯೇ ಎಂಬುದನ್ನು ತಕ್ಷಣ ಪತ್ತೆಹಚ್ಚಿ ನೈಜ ಸಮಯದಲ್ಲಿ ಎಚ್ಚರಿಕೆ ನೀಡುವ ಸಾಮರ್ಥ್ಯ ಇದಕ್ಕೆ ಇದೆ. ಇದು ಪೊಲೀಸರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡುತ್ತದೆ,” ಎಂದು ಮೆನನ್ ವಿವರಿಸಿದರು.

“ಪೊಲೀಸರ ಸಲಹೆಯಂತೆ, ಎಲ್ಲಾ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮರು ವಿನ್ಯಾಸಗೊಳಿಸಲಾಗಿದೆ,” ಎಂದು ಅವರು ಮಾಹಿತಿ ನೀಡಿದ್ದಾರೆ.