RCB vs MI: ಫಿಲ್ ಸಾಲ್ಟ್ ಔಟ್? ಮುಂಬೈ ಇಂಡಿಯನ್ಸ್ ಕದನಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI
RCB Probable Playing XI: ರಾಜಸ್ಥಾನ್ ರಾಯಲ್ಸ್ ವಿರುದ್ಧ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ16ನೇ ಪಂದ್ಯದಲ್ಲಿ ಸೋಲು ಅನುಭವಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಭಾನುವಾರ ಐದು ಬಾರಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಕಾದಾಟ ನಡೆಸಲು ಸಜ್ಜಾಗುತ್ತಿದೆ. ಈ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್ xi ಯಾವ ರೀತಿ ಇರಲಿದೆ ಎಂದು ಇಲ್ಲಿ ವಿವರಿಸಲಾಗಿದೆ.
ಮುಂಬೈ ಕದನಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI -
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು RCB) ತಂಡ, ಏಪ್ರಿಲ್ 12 ರಂದು ಭಾನುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ ಪಂದ್ಯದಲ್ಲಿ (RCB vs RR) ಕಾದಾಟ ನಡೆಸಲು ಸಜ್ಜಾಗುತ್ತಿದೆ. ಕಳೆದ ಪಂದ್ಯದಲ್ಲಿ ಎಸಗಿದ್ದ ಪ್ರಮಾದಗಳನ್ನು ತಿದ್ದಿಕೊಂಡು ಕಣಕ್ಕೆ ಇಳಿಯಲು ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಎದುರು ನೋಡುತ್ತಿದೆ. ಆದರೆ, ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಐದು ಬಾರಿ ಚಾಂಪಿಯನ್ಸ್ ಗೆಲುವಿನ ಲಯಕ್ಕೆ ಮರಳಲು ಆರ್‌ಸಿಬಿ ಎದುರು ಪ್ರಯತ್ನಿಸಲಿದೆ.
ಆರ್‌ಸಿಬಿ ತನ್ನ ಆರಂಭಿಕ ಎರಡು ಪಂದ್ಯಗಳಲ್ಲಿ ಕ್ರಮವಾಗಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಆದರೆ, ಏಪ್ರಿಲ್ 10 ರಂದು ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 6 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಅಗ್ರ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯ ಅನುಭವಿಸಿದರೂ ರಜತ್ ಪಾಟಿದಾರ್ ಅರ್ಧಶತಕದ ಬಲದಿಂದ ಆರ್‌ಸಿಬಿ 201 ರನ್‌ಗಳನ್ನು ಕಲೆ ಹಾಕಿತ್ತು.
MI vs RCB: ಒಂದೇ ದಿನದ ಅಂತರದಲ್ಲಿ ಮತ್ತೊಂದು ಪಂದ್ಯಕ್ಕೆ ಸಿದ್ಧವಾದ ಆರ್‌ಸಿಬಿ; ಮುಂಬೈ ಎದುರಾಳಿ
ಬಳಿಕ ಗುರಿಯನ್ನು ಹಿಂಬಾಲಿಸಿದ ರಾಜಸ್ಥಾನ್ ರಾಯಲ್ಸ್ ತಂಡ, ವೈಭವ್ ಸೂರ್ಯವಂಶಿ ಅವರ ಸ್ಪೋಟಕ ಅರ್ಧಶತಕದ ಬಲದಿಂದ ಇನ್ನೂ ಎರಡು ಓವರ್‌ಗಳು ಬಾಕಿ ಇರುವಾಗಲೇ ಗೆದ್ದು ಬೀಗಿತ್ತು. ಆದರೆ, ಆರ್‌ಸಿಬಿ ಬೌಲರ್‌ಗಳು ಪವರ್‌ಪ್ಲೇನಲ್ಲಿ ವೈಭವ್ ಹಾಗೂ ಧ್ರುವ್ ಜುರೆಲ್ ಅವರನ್ನು ಔಟ್ ಮಾಡಿದ್ದರೆ ಪಂದ್ಯದ ಗತಿ ಬೇರೆ ರೀತಿ ಇರುತ್ತಿತ್ತು. ಆದರೆ, ಇದಕ್ಕೆ ವೈಭವ್ ಅವಕಾಶ ಮಾಡಿಕೊಡಲಿಲ್ಲ. ಅಂತಿಮವಾಗಿ ಆರ್‌ಆರ್ ಆರು ವಿಕೆಟ್‌ಗಳಿಂದ ಗೆದ್ದ ಬೀಗಿತ್ತು.
ಫಿಲ್ ಸಾಲ್ಟ್ ಔಟ್, ಜಾಕೋಬ್ ಬೆಥೆಲ್ ಇನ್?
ಫಿಲ್ ಸಾಲ್ಟ್ ಆರಂಭಿಕ ಮೂರು ಪಂದ್ಯಗಳಲ್ಲಿ ಇನ್ನೂ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನವನ್ನು ತೋರಿಲ್ಲ. ಹಾಗಾಗಿ ಅವರನ್ನು ಮುಂಬೈ ಕದನಕ್ಕೆ ಬೆಂಚ್ ಕಾಯಿಸಿ ಜಾಕೋಬ್ ಬೆಥೆಲ್ ಅವರನ್ನು ಆಡುವ ಬಳಗಕ್ಕೆ ಕರೆ ತಂದರೂ ಅಚ್ಚರಿ ಇಲ್ಲ. ಆದರೆ, ಆರ್‌ಸಿಬಿ ಮ್ಯಾನೇಜ್‌ಮೆಂಟ್, ಇನ್ನಷ್ಟು ಪಂದ್ಯಗಳಿಗೆ ಫಿಲ್ ಸಾಲ್ಟ್ ಅವರನ್ನು ಮಣೆ ಹಾಕಬಹುದು.
RCB vs RR: ʼಡಿಯರ್ ವೈಭವ್ʼ; ಸೂರ್ಯವಂಶಿಯನ್ನು ಕೊಂಡಾಡಿದ ವಿರಾಟ್ ಕೊಹ್ಲಿ
ಮುಂಬೈ ಇಂಡಿಯನ್ಸ್ ಕದನಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI
1.ಫಿಲ್ ಸಾಲ್ಟ್/ಜಾಕೋಬ್ ಬೆಥೆಲ್ (ಓಪನಿಂಗ್ ಬ್ಯಾಟ್ಸ್‌ಮನ)
2.ವಿರಾಟ್ ಕೊಹ್ಲಿ (ಬ್ಯಾಟ್ಸ್‌ಮನ್)
3.ದೇವದತ್ ಪಡಿಕ್ಕಲ್ (ಬ್ಯಾಟ್ಸ್‌ಮನ್)
4.ರಜತ್ ಪಾಟಿದಾರ್ (ನಾಯಕ, ಬ್ಯಾಟ್ಸ್‌ಮನ್)
5.ಜಿತೇಶ್ ಶರ್ಮಾ (ವಿಕೆಟ್ ಕೀಪರ್-ಬ್ಯಾಟ್ಸ್‌ಮನ್)
6.ಟಿಮ್ ಡೇವಿಡ್ (ಆಲ್‌ರೌಂಡರ್)
7.ಕೃಣಾಲ್ ಪಾಂಡ್ಯ (ಆಲ್‌ರೌಂಡರ್)
8.ರೊಮ್ಯಾರಿಯೊ ಶೆಫರ್ಡ್ (ಆಲ್‌ರೌಂಡರ್)
9.ಭುವನೇಶ್ವರ್ ಕುಮಾರ್ (ವೇಗದ ಬೌಲರ್)
10.ಜಾಶ್ ಹೇಝಲ್‌ವುಡ್ (ವೇಗದ ಬೌಲರ್)
11.ಅಭಿನಂದನ್ ಸಿಂಗ್ (ವೇಗದ ಬೌಲರ್)
ಇಂಪ್ಯಾಕ್ಟ್ ಪ್ಲೇಯರ್: ಸುಯಾಶ್ ಶರ್ಮಾ
RCB vs RR:ಆರ್‌ಸಿಬಿ ಸೋಲಿಗೆ ಈ ಆಟಗಾರನೇ ಕಾರಣ ಎಂದ ರಜತ್ ಪಾಟಿದಾರ್!
ಪಂದ್ಯದ ವಿವರ
2026ರ ಇಂಡಿಯನ್ ಪ್ರೀಮಿಯರ್ ಲೀಗ್
20ನೇ ಪಂದ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
ದಿನಾಂಕ: ಏಪ್ರಿಲ್ 12, 2026
ಸಮಯ: ಸಂಜೆ 07: 30ಕ್ಕೆ
ಸ್ಥಳ: ವಾಂಖೆಡೆ ಕ್ರೀಡಾಂಗಣ, ಮುಂಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಜಿಯೊ ಹಾಟ್‌ಸ್ಟಾರ್