IPL 2026: ಯಾರಿಂದಲೂ ಸಾಧ್ಯವಾಗದ ಮತ್ತೊಂದು ದೊಡ್ಡ ದಾಖಲೆ ಬರೆದ ವೈಭವ್ ಸೂರ್ಯವಂಶಿ!
ಗುಜರಾತ್ ಟೈಟನ್ಸ್ ಎದುರು 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನವನ್ನು ತೋರುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ವೈಭವ್ ಸೂರ್ಯವಂಶಿ ಮತ್ತೊಂದು ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಏಕೈಕ ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ದಾಖಲಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಐಪಿಎಲ್ ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ದಾಖಲಿಸಿದ ವೈಭವ್ ಸೂರ್ಯವಂಶಿ. -
Ramesh Kote
May 29, 2026 9:24 PM
ಚಂಡೀಗಢ: ಇಂಡಿಯನ್ ಪ್ರೀಮಿಯರ್ ಲೀಗ್ 2026ರ (IPL 2026) ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತೊಂದು ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ (GT vs RR) ಅವರು ಈ ಮೈಲುಗಲ್ಲು ತಲುಪಿದ್ದಾರೆ. ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿಯೇ 500 ರನ್‌ಗಳನ್ನು ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಸಾಧನೆಗೆ ವೈಭವ್ ಸೂರ್ಯವಂಶಿ ಭಾಜನರಾಗಿದ್ದಾರೆ.