ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RCB vs RR: ರಾಜಸ್ಥಾನ್‌ ರಾಯಲ್ಸ್‌ ಪ್ಲೇಯಿಂಗ್‌ XIನಲ್ಲಿ ವೈಭವ್‌ ಸೂರ್ಯವಂಶಿ ಏಕಿಲ್ಲ? ಕಾರಣ ಇಲ್ಲಿದೆ!

Why Vaibhav Sooryavanshi not in RR's Playing XI: ಪ್ರಸ್ತುತ ಗುವಾಹಟಿಯಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 16ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ಆರ್‌ಆರ್‌ ಪ್ಲೇಯಿಂಗ್‌ XIನಲ್ಲಿ ವೈಭವ್‌ ಸೂರ್ಯವಂಶಿ ಹೆಸರು ಇಲ್ಲ. ಆದರೂ ಅವರು ದ್ವಿತೀಯ ಇನಿಂಗ್ಸ್‌ನಲ್ಲಿ ಬ್ಯಾಟ್‌ ಮಾಡಲಿದ್ದಾರೆ.

ರಾಜಸ್ಥಾನ್‌ ರಾಯಲ್ಸ್‌ ಪ್ಲೇಯಿಂಗ್‌ XIನಲ್ಲಿ ವೈಭವ್‌ ಸೂರ್ಯವಂಶಿ.

ಗುವಾಹಟಿ: ಇಲ್ಲಿನ ಬರ್ಸಪರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 16ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ (RCB vs RR) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯಕ್ಕೆ ರಾಜಸ್ಥಾನ್‌ ರಾಯಲ್ಸ್‌ ತಂಡದ ಪ್ಲೇಯಿಂಗ್‌ XIನಲ್ಲಿ ಅಪಾಯಕಾರಿ ಆರಂಭಿಕ ವೈಭವ್‌ ಸೂರ್ಯವಂಶಿ (Vaibhav Sooryavanshi) ಹೆಸರಿಲ್ಲ. ಹಾಗಾಗಿ ಅವರು ಆರ್‌ಸಿಬಿ ತಂಡದ ಇನಿಂಗ್ಸ್‌ನಲ್ಲಿ ಎಡಗೈ ಬ್ಯಾಟ್ಸ್‌ಮನ್‌ ಮೈದಾನದಲ್ಲಿ ಕಾಣಿಸಿಕೊಂಡಿಲ್ಲ. ಆದರೂ, ರಾಜಸ್ಥಾನ್‌ ರಾಯಲ್ಸ್‌ನ ಚೇಸಿಂಗ್‌ನಲ್ಲಿ ವೈಭವ್‌ ಸೂರ್ಯವಂಶಿ ಯಶಸ್ವಿ ಜೈಸ್ವಾಲ್‌ ಜೊತೆ ಇನಿಂಗ್ಸ್‌ ಆರಂಭಿಸುವುದು ಖಚಿತ. ಇದು ಹೇಗೆ ಸಾಧ್ಯ ಎಂದು ಇಲ್ಲಿ ವಿವರಿಸಲಾಗಿದೆ.

2023ರ ಬಳಿಕ ಐಪಿಎಲ್‌ ಟೂರ್ನಿಯಲ್ಲಿ ಬಿಸಿಸಿಐ ಇಂಪ್ಯಾಕ್ಟ್‌ ನಿಯಮವನ್ನು ಪರಿಚಯಿಸಲಾಗಿತ್ತು. ಈ ನಿಯಮದ ಪ್ರಕಾರ ತಂಡಗಳು ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ 12ನೇ ಆಟಗಾರನನ್ನು ಬಳಸಿಕೊಳ್ಳಬಹುದು. ಬ್ಯಾಟಿಂಗ್‌ ಅಥವಾ ಬೌಲಿಂಗ್‌ ವೇಳೆ ತಮ್ಮ ತಂಡದ ಅಗತ್ಯಕ್ಕೆ ತಕ್ಕಂತೆ ಇಂಪ್ಯಾಕ್ಟ್‌ ಪ್ಲೇಯರ್‌ ಅನ್ನು ಬಳಸಿಕೊಳ್ಳಬಹುದು. ಉದಾಹರಣೆಗೆ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಳ್ಳುವ ತಂಡ, ತನ್ನ ಪ್ಲೇಯಿಂಗ್‌ XIನಲ್ಲಿ ಬಲಿಷ್ಠ ಬೌಲಿಂಗ್‌ ಪಡೆಯನ್ನು ಆಡಿಸಲು ಹೆಚ್ಚುವರಿ ಬೌಲರ್‌ಗೆ ಅವಕಾಶ ನೀಡಬಹುದು. ನಂತರ ಚೇಸಿಂಗ್‌ ವೇಳೆ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಬ್ಯಾಟ್ಸ್‌ಮನ್‌ ಅನ್ನು ಆಡಿಸಬಹುದು.

RCB vs RR: ಟಾಸ್‌ ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬ್ಯಾಟಿಂಗ್‌!

ಅದೇ ರೀತಿ ಇದೀಗ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿಯೂ ರಾಜಸ್ಥಾನ್‌ ರಾಯಲ್ಸ್‌ ತಂಡ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ವೈಭವ್‌ ಸೂರ್ಯವಂಶಿಯನ್ನು ಇಟ್ಟುಕೊಂಡಿದೆ ಹಾಗೂ ಚೇಸಿಂಗ್‌ ವೇಳೆ ಅವರನ್ನು ಆರಂಭಿಕ ಬ್ಯಾಟರ್‌ ಆಗಿ ಆಡಿಸಲಿದೆ. ವೈಭವ್‌ ಪ್ಲೇಯಿಂಗ್‌ XI ಬಂದರೆ, ಬೌಲಿಂಗ್‌ ವೇಳೆ ಪ್ಲೇಯಿಂಗ್‌ XIನಲ್ಲಿ ಆಡಿದ್ದ ಬೌಲರ್‌ ಅನ್ನು ಹೊರಗಿಡಲಾಗುತ್ತದೆ.



ಭರ್ಜರಿ ಫಾರ್ಮ್‌ನಲ್ಲಿರುವ ವೈಭವ್‌ ಸೂರ್ಯವಂಶಿ

ಪ್ರಸ್ತುತ ನಡೆಯುತ್ತಿರುವ 19ನೇ ಆವೃತ್ತಿಯಲ್ಲಿ ವೈಭವ್‌ ಸೂರ್ಯವಂಶಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಅವರು ಇಲ್ಲಿಯವರೆಗೂ ಆಡಿದ ಮೂರು ಇನಿಂಗ್ಸ್‌ಗಳಲ್ಲಿ 40.67ರ ಸರಾಸರಿ ಹಾಗೂ 248.98ರ ಸ್ಟ್ರೈಕ್‌ ರೇಟ್‌ನಲ್ಲಿ 122 ರನ್‌ಗಳನ್ನು ಕಲೆ ಹಾಕಿದ್ದಾರೆ. ಆ ಮೂಲಕ ಈ ಸೀಸನ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ.

ʼನನ್ನನ್ನು ಹುಚ್ಚ ಎಂದಿದ್ರು, ನಾನು ತಲೆ ಕೆಡಿಸಿಕೊಳ್ಳಲಿಲ್ಲʼ: ಕಷ್ಟದ ದಿನಗಳನ್ನು ನೆನೆದ ಮುಕುಲ್‌ ಚೌಧರಿ ತಂದೆ!

ಆರ್‌ಆರ್‌ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ

ರಾಜಸ್ಥಾನ್‌ ರಾಯಲ್ಸ್‌ ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯವನ್ನು ಆಡಿದ್ದ ತುಷಾರ್‌ ದೇಶಪಾಂಡೆ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಬ್ರಿಜೇಶ್‌ ಶರ್ಮಾಗೆ ಆಡಲು ಅವಕಾಶವನ್ನು ನೀಡಲಾಗಿದೆ.

ರಾಜಸ್ಥಾನ ರಾಯಲ್ಸ್‌ ಪ್ಲೇಯಿಂಗ್‌ XI: ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿ.ಕೀ), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮಾಯರ್, ಡೊನೊವನ್ ಫೆರೀರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ