ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RCB vs GT ಪಂದ್ಯದಲ್ಲಿ ಫಿಲ್‌ ಸಾಲ್ಟ್‌ ಆಡ್ತಾರಾ? ಓಪನರ್‌ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಜತ್‌ ಪಾಟಿದಾರ್‌!

RCB vs GT: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಮೇ 26 ರಂದು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಆರಂಭಿಕ ಫಿಲ್‌ ಸಾಲ್ಟ್‌ ಆಡುವ ಬಗ್ಗೆ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಫಿಲ್‌ ಸಾಲ್ಟ್‌ ಆಡುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ರಜತ್‌ ಪಾಟಿದಾರ್‌.

ನವದೆಹಲಿ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ (RCB vs GT) ತಂಡಗಳು ಮೇ 26 ರಂದು ಮಂಗಳವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಕಾದಾಟ ನಡೆಯಲಿದೆ. ಆದರೆ, ಗಾಯದಿಂದ ಗುಣಮುಖರಾಗಿರುವ ಆರಂಭಿಕ ಫಿಲ್‌ ಸಾಲ್ಟ್‌ ಅವರು ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಆಡುವ ಬಗ್ಗೆ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಮೊದಲನೇ ಕ್ವಾಲಿಫೈಯರ್‌ ಪಂದ್ಯದ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಜತ್‌ ಪಾಟಿದಾರ್‌ಗೆ ಫಿಲ್‌ ಸಾಲ್ಟ್‌ ಅವರು ಆಡುವ ಬಗ್ಗೆ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಪಾಟಿದಾರ್‌, ಸಾಲ್ಟ್‌ ಸಂಪೂರ್ಣವಾಗಿ ಫಿಟ್‌ ಇದ್ದಾರೆ ಹಾಗೂ ಅವರು ವೈದ್ಯರ ಕಣ್ಗಾವಲಿನಲ್ಲಿದ್ದಾರೆ. ಆದರೆ, ಅವರನ್ನು ಆಡಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

"ಫಿಲ್‌ ಸಾಲ್ಟ್‌ ಸಂಪೂರ್ಣವಾಗಿ ಫಿಟ್‌ ಆಗಿದ್ದಾರೆ. ಅವರ ವೈದ್ಯರ ಕಣ್ಗಾವಲಿನಲ್ಲಿದ್ದಾರೆ. ಅವರು ಕೆಲವು ಡ್ರಿಲ್ಸ್‌ನಲ್ಲಿ ಭಾಗವಹಿಸಿದ್ದರು ಆದರೆ ಅವರನ್ನು ಪ್ಲೇಯಿಂಗ್‌ XIನಲ್ಲಿ ಆಡಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಪಂದ್ಯದ ದಿನ ಪಿಚ್‌ ಅನ್ನು ನೋಡಿದ ಬಳಿಕ ನಾನು ಇದನ್ನು ನಿರ್ಧರಿಸಿದ್ದಾರೆ,"ಎಂದು ರಜತ್‌ ಪಾಟಿದಾರ್‌ ತಿಳಿಸಿದ್ದಾರೆ.

RCB vs GT ಮೊದಲ ಕ್ವಾಲಿಫೈಯರ್‌ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ಸಾಧ್ಯತೆ!

ಫಿಲ್‌ ಸಾಲ್ಟ್‌ ಅವರು ಏಪ್ರಿಲ್ 18ರಂದು ಆರ್‌ಸಿಬಿ ಮತ್ತು ಡೆಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಬೆರಳಿನ ಗಾಯಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಅವರು ತಮ್ಮ ತವರಿಗೆ ಮರಳಿದ್ದರು. ಇಂಗ್ಲೆಂಡ್ ತಂಡದ ಈ ಆರಂಭಿಕ ಬ್ಯಾಟರ್ ಪ್ಲೇಆಫ್ಸ್‌ಗೂ ಮುನ್ನ ಮತ್ತೆ ತಂಡವನ್ನು ಸೇರುವ ನಿರೀಕ್ಷೆ ಇತ್ತು. ಆದರೆ ಗುಜರಾತ್‌ ಟೈಟನ್ಸ್‌ ವಿರುದ್ಧದ ಪಂದ್ಯದ ಮುನ್ನದ ದಿನ ನಡೆದ ಅಭ್ಯಾಸ ಅವಧಿಯಲ್ಲಿ ಅವರು ತಂಡದೊಂದಿಗೆ ಕಾಣಿಸಿಕೊಳ್ಳಲಿಲ್ಲ.

ಗಾಯಕ್ಕೊಳಗಾಗುವ ಮೊದಲು ಸಾಲ್ಟ್ 2026ರ ಐಪಿಎಲ್‌ ಟೂರ್ನಿಯಲ್ಲಿ ಅತ್ಯಂತ ಆಕ್ರಮಣಕಾರಿ ಆರಂಭಿಕ ಬ್ಯಾಟರ್‌ಗಳಲ್ಲೊಬ್ಬರಾಗಿದ್ದರು. ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳಲ್ಲಿ ಮುಕ್ತಾಯಗೊಳ್ಳಲು ಅವರು ಪ್ರಮುಖ ಪಾತ್ರವಹಿಸಿದ್ದರು. ಪವರ್‌ಪ್ಲೇ ಓವರ್‌ಗಳಲ್ಲೇ ಬೌಲರ್‌ಗಳ ಮೇಲೆ ಒತ್ತಡ ಹೇರುವ ಅವರ ಸಾಮರ್ಥ್ಯ ಆರ್‌ಸಿಬಿಗೆ ಭರ್ಜರಿ ಆರಂಭ ಒದಗಿಸಿತ್ತು.

IPL 2026: RCB or GT ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳು! ಇದಕ್ಕೆ 15 ವರ್ಷಗಳ ಲೆಕ್ಕಾಚಾರವೇ ಸಾಕ್ಷಿ!

ಸಾಲ್ಟ್ ಅನುಪಸ್ಥಿತಿಯಲ್ಲಿ ಆರ್‌ಸಿಬಿಗೆ ಮತ್ತೊಂದು ಹಿನ್ನಡೆಯೂ ಎದುರಾಯಿತು. ಜೇಕಬ್‌ ಬೆಥೆಲ್‌ ಅವರು ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಎಡಗೈ ಬೆರಳಿಗೆ ಗಾಯ ಮಾಡಿಕೊಂಡರು. ಇದರ ಪರಿಣಾಮವಾಗಿ ಅವರು ಎಸ್‌ಆರ್‌ಎಚ್‌ ವಿರುದ್ಧದ ಕೊನೆಯ ಲೀಗ್ ಹಂತದ ಪಂದ್ಯದಿಂದ ಹೊರಗುಳಿಯಬೇಕಾಯಿತು. ಇದರಿಂದ ತಂಡ ಮತ್ತೆ ಬ್ಯಾಟಿಂಗ್ ಕ್ರಮದಲ್ಲಿ ಬದಲಾವಣೆ ಮಾಡಬೇಕಾದ ಪರಿಸ್ಥಿತಿ ಎದುರಾಯಿತು.

ಈ ಹಿನ್ನೆಲೆಯಲ್ಲಿ ವೆಂಕಟೇಶ ಅಯ್ಯರ್‌ ಅವರನ್ನು ವಿರಾಟ್‌ ಕೊಹ್ಲಿ ಜೊತೆ ಇನಿಂಗ್ಸ್‌ ಆರಂಭಿಸಲು ಕಳುಹಿಸಲಾಯಿತು. ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 256 ರನ್‌ಗಳ ಚೇಸಿಂಗ್‌ನಲ್ಲಿ ವೆಂಕಟೇಶ್ ಅಯ್ಯರ್‌ ಕೇವಲ 19 ಎಸೆತಗಳಲ್ಲಿ 44 ರನ್ ಸಿಡಿಸಿ ಆರ್‌ಸಿಬಿಗೆ ಸ್ಫೋಟಕ ಆರಂಭ ನೀಡಿದ ಬಳಿಕ ವಿಕೆಟ್‌ ಒಪ್ಪಿಸಿದ್ದರು. ಆದರೆ ಅಂತಿಮವಾಗಿ ಆರ್‌ಸಿಬಿ ಸೋಲು ಅನುಭವಿಸಿತ್ತು.

ಮೊದಲನೇ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನ ಸಾಲ್ಟ್ ಸಂಪೂರ್ಣ ಫಿಟ್ ಎಂದು ಘೋಷಿಸಲ್ಪಟ್ಟರೆ, ಅವರು ನೇರವಾಗಿ ಆಡುವ ಹನ್ನೊಂದರ ಬಳಗಕ್ಕೆ ಮರಳುವ ಸಾಧ್ಯತೆ ಇದೆ. ಇದರಿಂದ ವೆಂಕಟೇಶ್ ಅಯ್ಯರ್ ಮತ್ತೆ ಈ ಸೀಸನ್ ಆರಂಭದಲ್ಲಿ ನಿರ್ವಹಿಸಿದ್ದ ಮಧ್ಯಮ ಕ್ರಮಾಂಕದ ಪಾತ್ರಕ್ಕೆ ಮರಳುವ ನಿರೀಕ್ಷೆಯಿದೆ.