ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಪಡೆಯುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿನ ತನ್ನ ಜಯದ ಫಾರ್ಮ್ ಅನ್ನು ಮುಂದುವರಿಸಿದೆ. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್‌ಸಿಬಿ 18 ರನ್‌ಗಳ ಗೆಲುವು ಪಡೆದಿತ್ತು. ಆದರೆ, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಅರ್ಧಶತಕವನ್ನು ಬಾರಿಸಿದರೂ ಅವರು ಸಂಪೂರ್ಣವಾಗಿ ಫಿಟ್ ಆಗಿ ಕಾಣಿಸಿರಲಿಲ್ಲ ಹಾಗೂ ಅವರ ಸ್ಟ್ರೈಕ್ ರೇಟ್ ಕುಸಿದಿತು. ಮತ್ತೊಂದೆಡೆ ಅವರು ದ್ವಿತೀಯ ಇನಿಂಗ್ಸ್‌ನಲ್ಲಿ ಫೀಲ್ಡಿಂಗ್‌ನಲ್ಲಿ ಇಳಿದಿರಲಿಲ್ಲ. ಅಂದ ಹಾಗೆ ವಿರಾಟ್ ಕೊಹ್ಲಿಯ ಫಿಟ್‌ನೆಸ್ ಬಗ್ಗೆ ಸ್ಪಿನ್ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಬ್ಯಾಟಿಂಗ್ ವೇಳೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೇಳೆ ಪಾದದ ಕೀಲು ಗಾಯಕ್ಕೆ ತುತ್ತಾಗಿದ್ದರು ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ ಫೀಲ್ಡಿಂಗ್‌ಗೆ ಇಳಿದಿರಲಿಲ್ಲ. ಹಾಗಾಗಿ ಅವರು ಏಪ್ರಿಲ್ 15 ರಂದು ಲಖನೌ ಸೂಪರ್ ಜಯಂಟ್ಸ್ ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಾಗುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಿಲ್ಲ. ಈ ಬಾರಿ ಸಹ ಆಟಗಾರ ಕೃಣಾಲ್ ಪಾಂಡ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
RCB vs MI: ಮುಂಬೈ ಇಂಡಿಯನ್ಸ್‌ಗೆ ಮಣ್ಣು ಮುಕ್ಕಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು!
ವಿರಾಟ್ ಕೊಹ್ಲಿ ಚೆನ್ನಾಗಿದ್ದಾರೆ: ಕೃಣಾಲ್ ಪಾಂಡ್ಯ
ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೃಣಾಲ್ ಪಾಂಡ್ಯ, ತಂಡದ ಫಿಸಿಯೊ ಜೊತೆ ಇನ್ನೂ ಮಾತನಾಡಿಲ್ಲದಿದ್ದರೂ ವಿರಾಟ್ ಕೊಹ್ಲಿ ಚೆನ್ನಾಗಿದ್ದಾರೆ ಎಂದು ಹೇಳಿದರು.
“ನಾನು ಇನ್ನೂ ಫಿಸಿಯೊ ಜೊತೆ ಮಾತನಾಡಿಲ್ಲ, ಆದರೆ ಅವರು (ಕೊಹ್ಲಿ) ಚೆನ್ನಾಗಿರುತ್ತಾರೆ ಎಂದು ನನಗೆ ಅನಿಸುತ್ತದೆ. ಆದ್ದರಿಂದ ಚಿಂತಿಸುವ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ,” ಎಂದು ಕೃಣಾಲ್ ಪಾಂಡ್ಯ ತಿಳಿಸಿದ್ದಾರೆ.
IPL 2026: ಆರ್‌ಸಿಬಿ ಪಂದ್ಯದ ವೇಳೆ ಮೊಬೈಲ್ ಬಳಸಿದ್ದೇಕೆಂದು ಕಾರಣ ತಿಳಿಸಿದ ಆರ್‌ಆರ್ ಮ್ಯಾನೇಜರ್!
ಇದಕ್ಕೂ ಮೊದಲು, ಪಂದ್ಯದ ನಂತರದ ಸಂಭಾಷಣೆಯಲ್ಲಿ ಆರ್‌ಸಿಬಿ ಕೋಚ್ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಉತ್ತಮವಾಗಿದ್ದಾರೆ ಮತ್ತು ಯಾವುದೇ ಚಂತೆ ನಮಗಿಲ್ಲ ಎಂದು ಹೇಳಿದ್ದಾರೆ. “ನನಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ, ಆದರೆ ಈಗ ಅವರು ಚೆನ್ನಾಗಿದ್ದಾರೆ ಎಂದು ನನಗೆ ಅನಿಸುತ್ತದೆ,” ಎಂದು ಪಾಟಿದಾರ್ ಹೇಳಿದರು.
ಮುಂಬೈ ಎದುರು ಆರ್‌ಸಿಬಿಗೆ 18 ರನ್ ಜಯ
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಫಿಲ್ ಸಾಲ್ಟ್ (78 ರನ್), ರಜತ್ ಪಾಟಿದಾರ್ (53 ರನ್) ಅವರ ಸ್ಪೋಟಕ ಬ್ಯಾಟಿಂಗ್ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 4 ವಿಕೆಟ್ ನಷ್ಟಕ್ಕೆ 240 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿ ಹಿಂಬಾಲಿಸಿದ ಮುಂಬೈ ಇಂಡಿಯನ್ಸ್ ಶೆರ್ಫೆನ್ ಋದರ್‌ಫೋರ್ಡ್ (71 ರನ್) ಅವರ ಸ್ಪೋಟಕ ಬ್ಯಾಟಿಂಗ್ ಹೊರತಾಗಿಯೂ ಕೇವಲ 18 ರನ್‌ಗಳಿಂದ ಸೋಲು ಅನುಭವಿಸಿತು.