IND vs AFG: 1000 ಒಡಿಐ ರನ್‌ಗಳನ್ನು ಪೂರ್ಣಗೊಳಿಸಿದ ಇಶಾನ್ ಕಿಶನ್!
Ishan Kishan Scored 1000 ODI Runs: ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅಫ್ಘಾನಿಸ್ತಾನ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಅರ್ಧಶತಕವನ್ನು ಬಾರಿಸಿದರು. ಆ ಮೂಲಕ ತಮ್ಮ ಏಕದಿನ ಕ್ರಿಕೆಟ್ ವೃತ್ತಿ ಜೀವನಲ್ಲಿ 1000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.
1000 ಒಡಿಐ ರನ್ ಪೂರ್ಣಗೊಳಿಸಿದ ಇಶಾನ್ ಕಿಶನ್. -
ಲಖನೌ: ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ (Ishan Kishan) ತಮ್ಮ ಏಕದಿನ ಕ್ರಿಕೆಟ್ ವೃತ್ತಿ ಜೀವನದಲ್ಲಿ ನೂತನ ದಾಖಲೆಯನ್ನು ಬರೆದಿದ್ದಾರೆ. ಅವರು ಅಫ್ಘಾನಿಸ್ತಾನ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ (IND vs AFG) ಅರ್ಧಶತಕವನ್ನು ಬಾರಿಸಿದ್ದಾರೆ. ಆ ಮೂಲಕ ತಮ್ಮ 1000 ಒಡಿಐ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಸಿಕ್ಕ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾದರು. ಆದರೆ, ಉತ್ತಮ ಆರಂಭ ಪಡೆದರೂ ರೋಹಿತ್ ಶರ್ಮಾ ಅರ್ಧಶತಕದಂಚಿನಲ್ಲಿ ಔಟ್ ಆದರು. ಆದರೆ, ಇಶಾನ್ ಕಿಶನ್ ಹಾಗೂ ಶುಭಮನ್ ಗಿಲ್ ತಮ್ಮ ಭರ್ಜರಿ ಜೊತೆಯಾಟದ ಮೂಲಕ ತಂಡಕ್ಕೆ ಉತ್ತಮ ಅಡಿಪಾಯವನ್ನು ಹಾಕಿದ್ದಾರೆ.
ಬುಧವಾರ ಇಲ್ಲಿನ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಮೂರು ಬದಲಾವಣೆಯನ್ನು ತರಲಾಗಿದೆ. ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೇ ಹಾಗೂ ಪ್ರಸಿಧ್ ಕೃಷ್ಣ ಅವರನ್ನು ಕೂರಿಸಲಾಗಿದೆ. ಇವರ ಜಾಗಕ್ಕೆ ಯಶಸ್ವಿ ಜೈಸ್ವಾಲ್, ಕುಲ್ದೀಪ್ ಯಾದವ್ ಹಾಗೂ ಪ್ರಿನ್ಸ್ ಯಾದವ್ ಆಡುವ ಬಳಗಕ್ಕೆ ಬಂದಿದ್ದಾರೆ. ಅಂದ ಹಾಗೆ ಕಳೆದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದ ಇಶಾನ್ ಕಿಶನ್, ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಿದ್ದರಿಂದ ಇಶಾನ್ ಕಿಶನ್ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕಾಯಿತು.
IND vs AFG: ಎರಡನೇ ಒಡಿಐ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಆಡದೇ ಇರಲು ಕಾರಣವೇನು?
ಕ್ರೀಸ್‌ಗೆ ಬಂದ ಇಶಾನ್ ಕಿಶನ್ ಬಹಳ ಎಚ್ಚರಿಕೆಯಿಂದ ಬ್ಯಾಟ್ ಮಾಡಿದರು. ಅವರು 28 ಓವರ್‌ಗಳ ಹೊತ್ತಿಗೆ 53 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 51 ರನ್ ಗಳಿಸಿ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಇದರೊಂದಿಗೆ ಇಶಾನ್ ಕಿಶನ್ ತಮ್ಮ ಒಡಿಐ ವೃತ್ತಿ ಜೀವನದಲ್ಲಿ 1000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಇನಿಂಗ್ಸ್‌ಗಳ ಲೆಕ್ಕದಲ್ಲಿ ಬಹುಬೇಗ 1000 ಒಡಿಐ ರನ್‌ಗಳನ್ನು ಪೂರ್ಣಗೊಳಿಸಿದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಇಶಾನ್ ಕಿಶನ್ 1000 ಒಡಿಐ ರನ್‌ಗಳನ್ನು ಪೂರ್ಣಗೊಳಿಸಲು 26 ಇನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ. 19 ಇನಿಂಗ್ಸ್‌ಗಳನ್ನು ತೆಗೆದುಕೊಂಡಿರುವ ನಾಯಕ ಶುಭಮನ್ ಗಿಲ್ ಈ ಸಾಧಕರ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. 24 ಇನಿಂಗ್ಸ್‌ಗಳ ಮೂಲಕ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವ್ ಜಂಟಿ ಎರಡನೇ ಸ್ಥಾನದಲ್ಲಿದ್ದಾರೆ. 25 ಇನಿಂಗ್ಸ್‌ಗಳ ಮೂಲಕ ನವಜೋತ್ ಸಿಂಗ್ ಸಿಧು ಮತ್ತು ಶ್ರೇಯಸ್ ಅಯ್ಯರ್ ಜಂಟಿ ಮೂರನೇ ಸ್ಥಾನವನ್ನು ಪಡೆದಿದ್ದಾರೆ.
🚨 Milestone Unlocked 🚨
— BCCI (@BCCI) June 17, 2026
1️⃣0️⃣0️⃣0️⃣ runs and counting in ODIs for Ishan Kishan 👏
Updates ▶️ https://t.co/JYJ5l44iJ6#TeamIndia | #INDvAFG | @IDFCFIRSTBank | @ishankishan51 pic.twitter.com/5H0W2ClfuB
ಕಡಿಮೆ ಇನಿಂಗ್ಸ್‌ಗಳಲ್ಲಿ 1000 ಒಡಿಐ ರನ್ ಗಳಿಸಿದ ಭಾರತೀಯ ಬ್ಯಾಟರ್ಸ್
19- ಶುಭಮನ್ ಗಿಲ್
24- ವಿರಾಟ್ ಕೊಹ್ಲಿ/ಶಿಖರ್ ಧವನ್
25- ನವಜೋತ್ ಸಿಧು/ಶ್ರೇಯಸ್ ಅಯ್ಯರ್
26 -ಇಶಾನ್ ಕಿಶನ್