IPL 2025: ಬುಮ್ರಾ, ಹಾರ್ದಿಕ್ ಔಟ್! ಸಿಎಸ್‌ಕೆ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI
Mumbai Indians Predicted Playing XI: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಾರ್ಚ್ 23 ರಂದು ನಡೆಯುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಪ್ಲೇಯಿಂಗ್ XI ಅನ್ನು ಇಲ್ಲಿ ವಿವರಿಸಲಾಗಿದೆ. ಈ ಪಂದ್ಯಕ್ಕೆ ಜಸ್‌ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅಲಭ್ಯರಾಗಿದ್ದಾರೆ.

ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI

ನವದೆಹಲಿ: ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇವೆ. ಮಾರ್ಚ್ 22 ರಂದು ಕೋಲ್ಕತಾ ನೈಟ್ ರೈಡರ್ಸ್ (KKR) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳ ನಡುವಣ ಮೊದಲನೇ ಪಂದ್ಯದ ಮೂಲಕ ಹದಿನೆಂಟನೇ ಆವೃತ್ತಿಯ ಐಪಿಎಲ್ ಟೂರ್ನಿಯು ಆರಂಭವಾಗಲಿದೆ. ಈ ಪಂದ್ಯದಲ್ಲಿ ಬಳಿಕ ಮಾರ್ಚ್ 23 ರಂದು ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಜಸ್‌ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅಲಭ್ಯರಾಗಲಿದ್ದಾರೆ. ಇವರಿಬ್ಬರ ಅನುಪಸ್ಥಿತಿಯಲ್ಲಿ ಮುಂಬೈ ತಂಡ ತನ್ನ ಮೊದಲನೇ ಪಂದ್ಯವನ್ನು ಆಡಲಿದೆ.
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ರೋಹಿತ್ ಶರ್ಮಾಗೆ ಇದು ಮೊದಲನೇ ಟಿ20 ಪಂದ್ಯವಾಗಿದೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಅಂದ ಹಾಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿಲ್ ಜ್ಯಾಕ್ಸ್ ಜೊತೆ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಬಹುದು.
IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ನಾಯಕನಾದ ಅಕ್ಷರ್ ಪಟೇಲ್‌ಗೆ ಕೆಎಲ್ ರಾಹುಲ್ ವಿಶೇಷ ಸಂದೇಶ!
2024ರ ಐಪಿಎಲ್ ಟೂರ್ನಿಯಲ್ಲಿ ನಿಧಾನಗತಿಯ ಬೌಲಿಂಗ್ ಕಾರಣ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಿಎಸ್‌ಕೆ ವಿರುದ್ದದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಅಲಭ್ಯರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುವ ಸಾಧ್ಯತೆ ಇದೆ. ನಮನ್ ದಿರ್ ಐದನೇ ಕ್ರಮಾಂಕದಲ್ಲಿ ಆಡಿದರೆ, ರಾಬಿನ್ ಮಿಂಝ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಆಗಿ ಆರನೇ ಕ್ರಮಾಂಕದಲ್ಲಿ ಆಡಬಹುದು. ಹಾರ್ದಿಕ್ ಪಾಂಡ್ಯ ಅನುಪಸ್ಥಿಯಲ್ಲಿ ಕಾರ್ಬಿನ್ ಬಾಷ್ ಆಲ್‌ರೌಂಡರ್ ಸ್ಥಾನದಲ್ಲಿ ಕಾಣಿಸಿಕೊಳ್ಳಬಹುದು.
ಅರ್ಜುನ್ ತೆಂಡೂಲ್ಕರ್‌ಗೆ ಸ್ಥಾನ
ಜಸ್‌ಪ್ರೀತ್ ಬುಮ್ರಾ ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ವೇಗದ ಬೌಲಿಂಗ್ ವಿಭಾಗವನ್ನು ಟ್ರೆಂಟ್ ಬೌಲ್ಟ್ ಹಾಗೂ ದೀಪಕ್ ಚಹರ್ ಮುನ್ನಡೆಸಲಿದ್ದಾರೆ. ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್‌ಗೂ ಅವಕಾಶ ಸಿಗುವ ಸಾಧ್ಯತೆ ಇದೆ. ಸ್ಪಿನ್ ಬೌಲಿಂಗ್ ವಿಭಾಗವನ್ನು ಮಿಚೆಲ್ ಸ್ಯಾಂಟ್ನರ್ ಮುನ್ನಡೆಸಲಿದ್ದಾರ. ಇಂಪ್ಯಾಕ್ಟ್ ಆಟಗಾರನಾಗಿ ಕರನ್ ಶರ್ಮಾ ಆಡಬಹುದು.
IPL 2025: ಎಲ್ಲ 10 ಐಪಿಎಲ್ ತಂಡಗಳ ನಾಯಕರ ಪಟ್ಟಿ ಇಲ್ಲಿದೆ
ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ XI
ರೋಹಿತ್ ಶರ್ಮಾ, ವಿಲ್ ಜ್ಯಾಕ್ಟ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ನಮನ್ ದಿಕ್, ರಾಬಿನ್ ಮಿಂಝ್ (ವಿ.ಕೀ), ಕಾರ್ಬಿನ್ ಬಾಷ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಅರ್ಜುನ್ ತೆಂಡೂಲ್ಕರ್, ಟ್ರೆಂಟ್ ಬೌಲ್ಟ್.