ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಬಿಡುಗಡೆ ಮಾಡಿರುವ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಪ್ರಮುಖ ಬದಲಾವಣೆ ಕಂಡುಬಂದಿದೆ. ಇಂಗ್ಲೆಂಡ್‌ನ ಯುವ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ (Harry Brook), ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಕಿರೀಟವನ್ನು ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ತನ್ನ ಪ್ರಾಬಲ್ಯವನ್ನು ಪ್ರತಿಪಾದಿಸಿದ್ದಾರೆ. ಬ್ರೂಕ್ ಅದ್ಭುತ ಏರಿಕೆಯೊಂದಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ, ಅವರ ಒಟ್ಟು ಮೊತ್ತ 869 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಆ ಮೂಲಕ ತಮ್ಮ ಸಹ ಆಟಗಾರ ಜೋ ರೂಟ್ (Joe Root) ಅವರನ್ನು ಹಿಂದಿಕ್ಕಿದ್ದಾರೆ.
ಹ್ಯಾರಿ ಬ್ರೂಕ್ ಅವರ ಈ ಸಾಧನೆಯಿಂದ ತಮ್ಮ ಸಹ ಆಟಗಾರ ಹಾಗೂ ಅನುಭವಿ ಬ್ಯಾಟ್ಸ್‌ಮನ್ ಜೋ ರೂಟ್‌ಗೆ ಶ್ರೇಯಾಂಕದಲ್ಲಿ ಹಿನ್ನಡೆಯನ್ನು ಅನುಭವಿಸಿದ್ದಾರೆ. . ದೀರ್ಘಕಾಲದವರೆಗೆ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದ ರೂಟ್, ಅಗ್ರ ಸ್ಥಾನದ ಕಿರೀಟವನ್ನು ಕಳೆದುಕೊಂಡಿದ್ದಾರೆ. ಅವರು ಎರಡು ಸ್ಥಾನಗಳಲ್ಲಿ ಇಳಿದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ ಮತ್ತು ಪ್ರಸ್ತುತ 851 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಇದರ ನಡುವೆ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ (853 ಅಂಕಗಳು) ಒಂದು ಸ್ಥಾನದ ಏರಿಕೆಯೊಂದಿಗೆ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.
ಭಾರತ ಟಿ20 ತಂಡದಲ್ಲಿ ಭುವನೇಶ್ವರ್ ಕುಮಾರ್‌ಗೆ ಚಾನ್ಸ್ ನೀಡದ ಬಗ್ಗೆ ಆಕಾಶ್ ಚೋಪ್ರಾ ಪ್ರತಿಕ್ರಿಯೆ!
ಅಗ್ರ ಐವರು ಬ್ಯಾಟ್ಸ್‌ಮನ್‌ಗಳಲ್ಲಿ, ಆಸ್ಟ್ರೇಲಿಯಾದ ಅನುಭವಿ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ 831 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರ ನಂತರ ಶ್ರೀಲಂಕಾದ ಕಮಿಂದು ಮೆಂಡಿಸ್ ಇದ್ದಾರೆ, ಅವರು 781 ಅಂಕಗಳೊಂದಿಗೆ ಒಂದು ಸ್ಥಾನ ಏರಿಕೆಯಾಗಿ ಐದನೇ ಸ್ಥಾನವನ್ನು ತಲುಪಿದ್ದಾರೆ. ಇನ್ನು ನ್ಯೂಜಿಲೆಂಡ್‌ನ ದಿಗ್ಗಜ ಕೇನ್ ವಿಲಿಯಮ್ಸನ್ (780 ಅಂಕಗಳು) ಒಂದು ಸ್ಥಾನ ಕುಸಿದು ಆರನೇ ಸ್ಥಾನಕ್ಕೆ ತಲುಪಿದ್ದರೆ, ದಕ್ಷಿಣ ಆಫ್ರಿಕಾದ ತೆಂಬಾ ಬವುಮಾ 775 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ.
ಎಂಟನೇ ಸ್ಥಾನಕ್ಕೆ ಶುಭಮನ್ ಗಿಲ್
ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೂ ಮಿಶ್ರ ಫಲವನ್ನು ಪಡೆದಿದ್ದಾರೆ. ಯುವ ತಾರೆ ಶುಭ್‌ಮನ್ ಗಿಲ್ ಟೆಸ್ಟ್ ಶ್ರೇಯಾಂಕದಲ್ಲಿ ಗಮನಾರ್ಹ ಜಿಗಿತವನ್ನು ಸಾಧಿಸಿದ್ದಾರೆ; ಎರಡು ಸ್ಥಾನಗಳನ್ನು ಏರಿದ ಅವರು ಈಗ 743 ರೇಟಿಂಗ್ ಪಾಯಿಂಟ್‌ಗಳೊಂದಿಗೆ ವಿಶ್ವದ 8ನೇ ಟೆಸ್ಟ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಆದಾಗ್ಯೂ, ಯಶಸ್ವಿ ಜೈಸ್ವಾಲ್ ಒಂದು ಸ್ಥಾನ ಕುಸಿದು 733 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದಾರೆ.
ಯಶಸ್ವಿ ಜೈಸ್ವಾಲ್ ಔಟ್, ಇಶಾನ್ ಕಿಶನ್ ಇನ್; ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
ಅಗ್ರ ಸ್ಥಾನವನ್ನು ಉಳಿಸಿಕೊಂಡ ಜಸ್‌ಪ್ರೀತ್ ಬುಮ್ರಾ
ಜಸ್‌ಪ್ರೀತ್ ಬುಮ್ರಾ ವಿಶ್ವದ ನಂ.1 ಟೆಸ್ಟ್ ಬೌಲರ್ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಆಡದ ಕಾರಣ ರೇಟಿಂಗ್ ಪಾಯಿಂಟ್ಸ್‌ನಲ್ಲಿ ಸ್ವಲ್ಪ ಇಳಿಕೆಯಾಗಿದ್ದರೂ, ಬುಮ್ರಾ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಆಸ್ಟ್ರೇಲಿಯಾದ ವೇಗದ ಬೌಲಿಂಗ್ ದಿಗ್ಗಜರಾದ ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ಅವರಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇದೇ ವೇಳೆ, ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಮ್ಯಾಟ್ ಹೆನ್ರಿ ನಾಲ್ಕನೇ ಸ್ಥಾನದಿಂದ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದರ ಪರಿಣಾಮವಾಗಿ ಸ್ಕಾಟ್ ಬೋಲೆಂಡ್, ಮಾರ್ಕೊ ಯೆನ್ಸನ್ ಮತ್ತು ನೊಮಾನ್ ಅಲಿ ತಲಾ ಒಂದು ಸ್ಥಾನ ಮೇಲಕ್ಕೇರಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯಗಳಲ್ಲಿ ಭಾಗವಹಿಸದಿದ್ದರೂ, ಬುಮ್ರಾ ಅವರ ಸ್ಥಿರ ಪ್ರದರ್ಶನ ಮತ್ತು ನಿರಂತರ ಸಾಧನೆ ಅವರಿಗೆ ಟೆಸ್ಟ್ ಕ್ರಿಕೆಟ್‌ನ ಅಗ್ರ ಬೌಲರ್ ಸ್ಥಾನವನ್ನು ಉಳಿಸಿಕೊಡಲು ನೆರವಾಗಿದೆ.