GT vs DC: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಜಯ ತಂದುಕೊಟ್ಟ ಜೋಸ್ ಬಟ್ಲರ್!
GT vs DC Match Highlights: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗುಜರಾತ್ ಟೈಟನ್ಸ್ ಶಾಕ್ ನೀಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ 2025ರ ಐಪಿಎಲ್‌ನ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ 7 ವಿಕೆಟ್ ಜಯ.

ಅಹಮದಾಬಾದ್: ಕನ್ನಡಿಗ ಪ್ರಸಿಧ್ ಕೃಷ್ಣ (41 ಕ್ಕೆ 4) ಅವರ ಮಾರಕ ಬೌಲಿಂಗ್ ಹಾಗೂ ಜೋಸ್ ಬಟ್ಲರ್ (97* ರನ್) ಅವರ ಬ್ಯಾಟಿಂಗ್ ಬಲದಿಂದ ಗುಜರಾತ್ ಟೈಟನ್ಸ್ (Gujarat Titans) ತಂಡ, 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 35ನೇ ಪಂದ್ಯದಲ್ಲಿ (GT vs DC Match Highlights) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಹದಿನೆಂಟನೇ ಋತುವಿನಲ್ಲಿ ಐದನೇ ಗೆಲುವು ಪಡೆಯುವ ಮೂಲಕ ಶುಭಮನ್ ಗಿಲ್ ಸಾರಥ್ಯದ ಜಿಟಿ, ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಆದರೆ ಸೋಲು ಅನುಭವಿಸಿದ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಇಳಿದಿದೆ.
ಶನಿವಾರ ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 204 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ಗುಜರಾತ್ ಟೈಟನ್ಸ್, ಜೋಸ್ ಬಟ್ಲರ್ (97* ರನ್) ಅವರ ಅದ್ಭುತ ಬ್ಯಾಟಿಂಗ್ ಬಲದಿಂದ 19.2 ಓವರ್‌ಗಳಿಗೆ ಮೂರು ವಿಕೆಟ್ ನಷ್ಟಕ್ಕೆ ಗೆಲುವಿನ ದಡ ಮುಟ್ಟಿತು. ಗುಜರಾತ್ ಟೈಟನ್ಸ್ ತಂಡದ ಚೇಸಿಂಗ್‌ನಲ್ಲಿ ಎಲ್ಲರ ಗಮನ ಸೆಳೆದಿದ್ದು ಜೋಸ್ ಬಟ್ಲರ್! ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಬಟ್ಲರ್, 54 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 11 ಬೌಂಡರಿಗಳೊಂದಿಗೆ ಅಜೇಯ 97 ರನ್ ಸಿಡಿಸಿ ಗುಜರಾತ್ ಗೆಲುವಿಗೆ ನೆರವು ನೀಡಿದರು ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
RCB vs PBKS: ಪಂಜಾಬ್ ಕಿಂಗ್ಸ್‌ಗೆ ತಿರುಗೇಟು ನೀಡಬೇಕೆಂದರೆ ಆರ್‌ಸಿಬಿಗೆ ಈ 2 ಬದಲಾವಣೆ ಅಗತ್ಯ!
ಬೃಹತ್ ಮೊತ್ತದ ಗುರಿಯನ್ನು ಹಿಂಬಾಲಿಸಿದ್ದ ಗುಜರಾತ್ ಟೈಟನ್ಸ್ ಪರ ನಾಯಕ ಶುಭಮನ್ ಗಿಲ್ (7) ರನ್‌ಔಟ್ ಆದರು. ಆದರೆ, ಎರಡನೇ ವಿಕೆಟ್‌ಗೆ ಸಾಯಿ ಸುದರ್ಶನ್ (36 ರನ್) ಹಾಗೂ ಜೋಸ್ ಬಟ್ಲರ್ 60 ರನ್‌ಗಳ ಜೊತೆಯಾಟವಾಡಿ ಗುಜರಾತ್‌ಗೆ ಉತ್ತಮ ಆರಂಭವನ್ನು ತಂದುಕೊಟ್ಟಿದ್ದರು. 21 ಎಸೆತಗಳಲ್ಲಿ 36 ರನ್ ಗಳಿಸಿದ ಬಳಿಕ ಸಾಯಿ ಸುದರ್ಶನ್, ಕುಲ್ದೀಪ ಯಾದವ್‌ಗೆ ವಿಕೆಟ್ ಒಪ್ಪಿಸಿದರು.
🔝 of the table feeling! 💙
— Gujarat Titans (@gujarat_titans) April 19, 2025
pic.twitter.com/PSJAWeWUrd
ಜೋಸ್ ಬಟ್ಲರ್-ಋದರ್ಫೋರ್ಟ್ ಜುಗಲ್‌ಬಂದಿ
ಮೂರನೇ ವಿಕೆಟ್‌ಗೆ ಜೊತೆಯಾದ ಶೆರ್ಫೆನ್ ಋದರ್ಫೋಡ್ ಹಾಗೂ ಜೋಸ್ ಬಟ್ಲರ್ ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. ಮಿಚೆಲ್ ಸ್ಟಾರ್ಕ್, ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ಅವರನ್ನು ಸಮರ್ಥವಾಗಿ ಎದುರಿಸಿದ್ದ ಈ ಜೋಡಿ, 119 ರನ್‌ಗಳ ಜೊತೆಯಾಟವನ್ನು ಆಡುವ ಮೂಲಕ ಪಂದ್ಯದ ದಿಕ್ಕನ್ನು ಬದಲಿಸಿದರು. ಅದ್ಭುತವಾಗಿ ಬ್ಯಾಟ್ ಮಾಡಿದ ಶೆರ್ಫೆನ್ ಋದರ್ಫೋರ್ಡ್ 34 ಎಸೆತಗಳಲ್ಲಿ 43 ರನ್ ಗಳಿಸಿದರು. ಆದರೆ, ಇನ್ನೇನು ತಂಡವನ್ನು ಗೆಲ್ಲಿಸುವ ಸನಿಹದಲ್ಲಿ ಮುಖೇಶ್ ಕುಮಾರ್‌ಗೆ ಶರಣಾದರು. ಕೊನೆಯಲ್ಲಿ ಕ್ರೀಸ್‌ಗೆ ಬಂದಿದ್ದ ರಾಹುಲ್ ತೆವಾಟಿಯಾ ಕೇವಲ ಮೂರು ಎಸೆತಗಳಲ್ಲಿ 11 ರನ್ ಗಳಿಸಿ ಜೋಸ್ ಬಟ್ಲರ್‌ಗೆ ಶತಕ ಪೂರ್ಣಗೊಳಿಸಲು ಅವಕಾಶ ಮಾಡಿಕೊಡಲಿಲ್ಲ.
This 97* will always be special to us, Jos Bhai! 💎 pic.twitter.com/PVz0XXi1t2
— Gujarat Titans (@gujarat_titans) April 19, 2025
203 ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಯಾವೊಬ್ಬ ಬ್ಯಾಟ್ಸ್‌ಮನ್ ದೊಡ್ಡ ಇನಿಂಗ್ಸ್ ಆಡಲಿಲ್ಲ. ಇನಿಂಗ್ಸ್ ಆರಂಭಿಸಿದ ಅಭಿಷೇಕ್ ಪೊರೆಲ್ ಕೇವಲ 9 ಎಸೆತಗಳಲ್ಲಿ 18 ರನ್ ಸಿಡಿಸಿ ಅರ್ಷದ್ ಖಾನ್‌ಗೆ ವಿಕೆಟ್ ಒಪ್ಪಿಸಿದರು. 18 ಎಸೆತಗಳಲ್ಲಿ 31 ರನ್ ಸಿಡಿಸಿ ತೀವ್ರ ಕುತೂಹಲ ಕೆರಳಿಸಿದ್ದ ಕರುಣ್ ನಾಯರ್, 28 ರನ್ ಸಿಡಿಸಿದ್ದ ಕೆಎಲ್ ರಾಹುಲ್ ಹಾಗೂ 39 ರನ್ ಗಳಿಸಿದ್ದ ಅಕ್ಷರ್ ಪಟೇಲ್ ಈ ಮೂರೂ ವಿಕೆಟ್‌ಗಳನ್ನು ಕನ್ನಡಿಗ ಪ್ರಸಿಧ್ ಕೃಷ್ಣ ಕಬಳಿಸಿದರು. ಉತ್ತಮ ಆರಂಭ ಪಡೆದರೂ ಈ ಮೂವರು ದೊಡ್ಡ ಇನಿಂಗ್ಸ್ ಆಡುವಲ್ಲಿ ವಿಫಲರಾದರು.
Handy cameos and target set 👊 pic.twitter.com/JxNwoXg0Bq
— Delhi Capitals (@DelhiCapitals) April 19, 2025
ಕೊನೆಯಲ್ಲಿ ಟ್ರಿಸ್ಟನ್ ಸ್ಟಬ್ಸ್ 21 ಎಸೆತಗಳಲ್ಲಿ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ, ಕೊನೆಯ ಓವರ್‌ವರೆಗೂ ಸ್ಪೋಟಕ ಬ್ಯಾಟ್ ಮಾಡಿದ್ದ ಆಶುತೋಷ್ ಶರ್ಮಾ 194ರ ಸ್ಟ್ರೈಕ್ ರೇಟ್‌ನಲ್ಲಿ 19 ಎಸೆತಗಳಲ್ಲಿ 37 ರನ್ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಅಂತಿಮವಾಗಿ ಡೆಲ್ಲಿ ತನ್ನ ಪಾಲಿನ 20 ಓವರ್‌ಗಳಿಗೆ 8 ವಿಕೆಟ್ ನಷ್ಟಕ್ಕೆ 203 ರನ್ ಕಲೆ ಹಾಕಿತ್ತು. ಗುಜರಾತ್ ಟೈಟನ್ಸ್ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ್ದ ಪ್ರಸಿಧ್ ಕೃಷ್ಣ 41 ರನ್ ಕೊಟ್ಟರೂ 4 ವಿಕೆಟ್‌ಗಳನ್ನು ಕಬಳಿಸಿದರು.