ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ; ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಂದ್ಯಗಳಿಗೆ ಗ್ರೀನ್‌ ಸಿಗ್ನಲ್‌!

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳು ಸೇರಿದಂತೆ ಕ್ರಿಕೆಟ್‌ ಪಂದ್ಯ ನಡೆಸಲು ಅಂತಿಮವಾಗಿ ಒಪ್ಪಿಗೆ ಸಿಕ್ಕಿದೆ. ರಾಜ್ಯ ಗೃಹ ಇಲಾಖೆ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು 17 ಅಂಶಗಳ ಷರತ್ತಿನ ಮಾರ್ಗಸೂಚಿ ಹೊರಡಿಸಿದ್ದು, ಆ ಎಲ್ಲಾ ಷರತ್ತುಗಳಿಗೆ ಕೆಎಸ್‌ಇಎ ಒಪ್ಪಿಗೆ ನೀಡಿದ ಬಳಿಕ ಪಂದ್ಯಗಳು ಪುನಾರಂಭವಾಗಲಿವೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳಿಗೆ ಅನುಮತಿ.

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣ (M Chinnaswamy Cricket Stadium)ದಲ್ಲಿ ಪಂದ್ಯಗಳನ್ನು ಪುನರಾರಂಭಿಸಲು ಕೊನೆಗೂ ಅನುಮತಿ ಸಿಕ್ಕಿದೆ. ಬೆಂಗಳೂರು ನಗರ ಪೋಲಿಸರು 17 ಅಂಶಗಳುಳ್ಳ ಷರತ್ತುಬದ್ಧ ಮಾರ್ಗಸೂಚಿ ಹೊರಡಿಸಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ (KSCA) ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಒಪ್ಪಿಗೆ ನೀಡಿದ್ದಾರೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 18ನೇ ಆವೃತ್ತಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ್ದ ಬೀಕರ ಕಾಲ್ತುಣಿತದ ಬಳಿಕ ಪಂದ್ಯ ಆಯೋಜಿಸಲು ಅನುಮತಿ ನಿರಾಕರಿಸಲಾಗಿತ್ತು. ಆದರೆ, ಇದೀಗ ಕೆಎಸ್‌ಸಿಎ ನೂತನ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ (Venkatesh Prasad) ಸರ್ಕಾರದಿಂದ ಅನುಮತಿ ಪಡೆಯುವಲ್ಲಿ ಸಫಲರಾಗಿದ್ದಾರೆ.

ಕರ್ನಾಟಕ ರಾಜ್ಯ ಗೃಹ ಇಲಾಖೆ ವಿಧಿಸಿರುವ ಷರತ್ತುಗಳ ಬಗ್ಗೆ ಕೆಎಸ್‌ಸಿಎ ಪದಾದಿಕಾರಿಗಳು, ಗೃಹ ಸಚಿವ ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಪೊಲೀಸ್ ಕಮಿಷನರ್ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಮೈಕಲ್‌ ಡಿ ಕುನ್ಹಾ ಸಮಿತಿಯ ವರದಿಯ ಷರತ್ತುಗಳನ್ನು ಆಧರಿಸಿ ಪುನಃ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನಚ್ಚರಿಕೆ ವಹಿಸಲು 17 ಷರತ್ತುಗಳನ್ನು ಸಿದ್ಧಪಡಿಸಿದ್ದಾರೆ. ಕೆಎಸ್‌ಇಎ ಈ ಎಲ್ಲಾ ಷರತ್ತುಗಳಿಗೆ ಒಪ್ಪಿಗೆ ನೀಡಿದ ಬಳಿಕ ಪಂದ್ಯ ಆಯೋಜಿಸಲು ಅಧಿಕೃತ ಅನುಮತಿ ನೀಡಲಾವುದು ಎನ್ನಲಾಗಿದೆ. ಈ ಬಾರಿ ಐಪಿಎಲ್‌ ಟೂರ್ನಿಯು ಮಾರ್ಚ್‌ 26ರಂದು ಪ್ರಾರಂಭವಾಗಲಿದೆ. ಈ ವೇಳೆಗೆ ಎಲ್ಲವೂ ಅಂದುಕೊಂಡಂತೆ ನಡೆದರೆ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದೆ.

IPL 2026: ಮಿನಿ ಹರಾಜಿನಲ್ಲಿ ಕೋಟಿ-ಕೋಟಿ ಜೇಬಿಗಿಳಿಸಿಕೊಂಡ ಅನ್‌ಕ್ಯಾಪ್ಡ್‌ ಆಟಗಾರರು!

ಸ್ಟೇಡಿಯಂನ ಗೇಟ್‌ಗಳ ಅಗಲವನ್ನು ವಿಸ್ತರಿಸುವ ಮತ್ತು ಟಿಕೆಟ್‌ ವಿತರಣೆಗೆ ಪ್ರತ್ಯೇಕ ಸ್ಥಳಗಳನ್ನು ಗುರುತಿಸುವುದು ಸೇರಿದಂತೆ ರಾಜ್ಯ ಪೊಲೀಸ್‌ ಇಲಾಖೆ ಒಟ್ಟು 17 ಷರತ್ತುಗಳನ್ನು ಮಾರ್ಗಸೂಚಿಯಲ್ಲಿ ಹೊರಡಿಸಿದೆ.

ವರದಿಯಲ್ಲಿರುವ ಷರತ್ತುಗಳೇನು?

ಸ್ಟೇಡಿಯಂ ಒಳಗೆ ಮತ್ತು ಹೊರಗೆ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆಗಳ ಸುಧಾರಣೆ.

ಟಿಕೆಟ್ ವಿತರಣೆ ಮತ್ತು ಪ್ರೇಕ್ಷಕರ ಕ್ಯೂಗಳು ಫುಟ್​ಪಾತ್​​​ಗಳ ಮೇಲೆ ನಡೆಯದಂತೆ ಎಚ್ಚರಿಕೆ ಕ್ರಮ ವಹಿಸಬೇಕು

ಟಿಕೆಟ್‌ ವಿತರಣೆಗಾಗಿ ಪ್ರತ್ಯೇಕ ಸ್ಥಳಗಳನ್ನು ಗುರುತಿಸಬೇಕು.

ಸಾರ್ವಜನಿಕರ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು.

ಸ್ಟೇಡಿಯಂನ ಎಲ್ಲಾ ಗೇಟ್‌ಗಳ ಅಗಲವನ್ನು ಕನಿಷ್ಠ ಆರು ಅಡಿ ವಿಸ್ತರಿಸಬೇಕು.

ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು

ಅಗ್ನಿಶಾಮಕ ಸುರಕ್ಷತೆಗಾಗಿ ಪ್ರತ್ಯೇಕ ನಿರ್ಗಮನ ದ್ವಾರಗಳನ್ನು ಕಡ್ಡಾಯಗೊಳಿಸಲಾಗಿದೆ.

ಮಹಿಳೆಯರು ಮತ್ತು ಮಕ್ಕಳಿಗೆ ಸ್ಟೇಡಿಯಂ ಒಳಗೆ ಪ್ರತ್ಯೇಕ ಸೌಲಭ್ಯಗಳನ್ನು ಒದಗಿಸಬೇಕು.

ಸ್ಟೇಡಿಯಂ ಒಳಗೆ ಪ್ರೇಕ್ಷಕರ ಪ್ರವೇಶಕ್ಕೆ ನಿರ್ದಿಷ್ಟ ಸಮಯ ಫಿಕ್ಸ್‌ ಮಾಡಬೇಕು

ಸ್ಟೇಡಿಯಂ ಸುತ್ತಲಿನ ಪಾರ್ಕಿಂಗ್, ಪಿಕ್‌ಅಪ್ ಮತ್ತು ಡ್ರಾಪ್ ವ್ಯವಸ್ಥೆಗಳನ್ನು ಸುಧಾರಿಸಬೇಕು.

M Chinnaswamy Stadium: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಗ್ರೀನ್‌ ಸಿಗ್ನಲ್‌; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಈ ಎಲ್ಲಾ ಬದಲಾವಣೆಗಳಾದ ಬಳಿಕ ಪಂದ್ಯ ನಡೆಸಲು ಅನುಮತಿ ದೊರಕುತ್ತದೆ. ಈ ಎಲ್ಲಾ ಕೆಲಸಗಳು ಮಾರ್ಚ್‌ ತಿಂಗಳ ಒಳಗೆ ಪೂರ್ಣಗೊಂಡರೆ ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳುರಿನಲ್ಲಿ ನಡೆಯುವ ಸಾಧ್ಯತೆಯಿದೆ.