ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಗುಡ್‌ನ್ಯೂಸ್‌; ಚಿನ್ನಸ್ವಾಮಿಯಲ್ಲಿ ಐಪಿಎಲ್​ ಪಂದ್ಯಕ್ಕೆ ಗ್ರೀನ್ ಸಿಗ್ನಲ್

ILP 2026: ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದ ಬಳಿಕ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ. ಚಿನ್ನಸ್ವಾಮಿಯಲ್ಲಿ IPL ಆಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ (Chinnaswamy Stadium) ದುರಂತದ ಬಳಿಕ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ (RCB) ಕೊನೆಗೂ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ. ಚಿನ್ನಸ್ವಾಮಿಯಲ್ಲಿ IPL ಆಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಬಳಿಕ ಪಂದ್ಯಾವಳಿಗಳನ್ನು ನಡೆಸಲು ಸರ್ಕಾರ ಷರತ್ತು ಬದ್ಧ ಅನುಮತಿಯನ್ನು ನೀಡಿದೆ.

ಸ್ಟೇಡಿಯಂ ಭದ್ರತೆ ಸೇರಿದಂತೆ ಕೆಲ ವಿಚಾರ ಸಂಬಂಧ ಉನ್ನತ ಮಟ್ಟದ ಕಮಿಟಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಅನುಮತಿ ದೊರಕಿದೆ. ಚಿನ್ನಸ್ವಾಮಿಯಲ್ಲಿ ನಿಯಮಾನುಸಾರ ಪಂದ್ಯ ಆಯೋಜನೆಗೆ ಅವಕಾಶ ನೀಡಲಾಗಿದೆ. ಇಂದಿನ ಸಭೆಯಲ್ಲಿ ಪಂದ್ಯ ಆಯೋಜನೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ ಒಟ್ಟು 7 ಪಂದ್ಯ ಆಯೋಜನೆಗೂ ಒಪ್ಪಿಗೆ ಸೂಚಿಸಿದೆ. ಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ,ಐಜಿಪಿ ಡಾ ಎಂ ಎ ಸಲೀಂ, ನಗರ ಪೊಲೀಸ್‌ ಆಯುಕ್ತ ಸೀಮಂತ್ ಕುಮಾರ್ ಸಿಂಗ್,ಎಸಿಎಸ್ ತುಷಾರ್ ಗಿರಿನಾಥ್, ಜಿಬಿಎ‌ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಇಂದಿನ ಸಭೆಯಲ್ಲಿ ಉಪಸ್ಥಿತರಿದ್ದರು.

ಸರ್ಕಾರದ ಈ ನಿರ್ಧಾರದಿಂದಾಗಿ ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ. ಆರ್ ಸಿಬಿ ತಂಡದ ಐದು ಪಂದ್ಯಗಳು, ಒಂದು ಪ್ಲೇ-ಆಫ್ ಹಾಗೂ ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ವೇಳಾಪಟ್ಟಿಗೆ ಅನುಗುಣವಾಗಿ ಮುಂದಿನ ಸಿದ್ಧತೆಗಳನ್ನು ನಡೆಸಲಾಗುತ್ತದೆ. ಕ್ರೀಡಾಂಗಣದ ಸುತ್ತಮುತ್ತ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಿ ಬಿಗಿ ಭದ್ರತೆಯನ್ನು ಒದಗಿಸಲು ಸೂಚಿಸಲಾಗಿದೆ. ಅಷ್ಟೇ ಅಲ್ಲದೇ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಪ್ರೇಕ್ಷಕರಿಗೆ ಅಗತ್ಯ ಮೂಲಸೌಕರ್ಯಗಳಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

CSK Over IPL Jersey: ಸಿಎಸ್​​ಕೆ ವಿರುದ್ಧ ಮದ್ರಾಸ್ ಹೈಕೋರ್ಟ್​​ನಲ್ಲಿ ದಾವೆ ಹೂಡಿದ ಸನ್ ಪಿಕ್ಚರ್ಸ್

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 28ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

Vishakha Bhat Heggar

View all posts by this author