ರೋಹಿತ್, ಕೊಹ್ಲಿ ಔಟ್! 2027ರ ಏಕದಿನ ವಿಶ್ವಕಪ್‌ಗೆ ಭಾರತದ ಪ್ಲೇಯಿಂಗ್ XI ಆರಿಸಿದ ChatGPT!
ChatGPT's India's Playing XI: ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಭಾರತ ತಂಡದ ಪ್ಲೇಯಿಂಗ್ XI ಅನ್ನು ಚಾಟ್‌ಜಿಪಿಟಿ ಆಯ್ಕೆ ಮಾಡಿದೆ. ಆದರೆ, ಭಾರತ ತಂಡದ ಹಿರಿಯ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಕೈ ಬಿಟ್ಟಿದೆ.
2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ಭಾರತದ ಪ್ಲೇಯಿಂಗ್ XI ಆರಿಸಿದ ChatGPT. -
ನವದೆಹಲಿ: ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್ (ICC ODI World Cup 2025) ಟೂರ್ನಿಗೆ ಇನ್ನು ಒಂದೂವರೆ ವರ್ಷ ಬಾಕಿ ಇದೆ. ಭಾರತೀಯ ಕ್ರಿಕೆಟ್‌ನ ಆಧುನಿಕ ದಿಗ್ಗಜರಾದ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಅವರು ಈಗಾಗಲೇ ಟೆಸ್ಟ್ ಹಾಗೂ ಟಿ20ಐ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಸಲುವಾಗಿ 50 ಓವರ್‌ಗಳ ಸ್ವರೂಪದಲ್ಲಿ ಮುಂದುವರಿಯುತ್ತಿದ್ದಾರೆ. ಅಂದ ಹಾಗೆ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಈ ಇಬ್ಬರೂ ಆಡುವ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ. ಇದರ ನಡುವೆ ಚಾಟ್‌ಜಿಪಿಟಿ (ChatGPT) ಏಕದಿನ ವಿಶ್ವಕಪ್ ಟೂರ್ನಿಯ ಭಾರತ ತಂಡದ ಪ್ಲೇಯಿಂಗ್ XI ಅನ್ನು ಆರಿಸಿದ್ದು, ಕೊಹ್ಲಿ ಮತ್ತು ರೋಹಿತ್ ಅವರನ್ನು ಕೈ ಬಿಟ್ಟಿದ್ದು, ಅಚ್ಚರಿ ಮೂಡಿಸಿದೆ.
ಪ್ರಸ್ತುತ ಭಾರತ ಏಕದಿನ ತಂಡದಲ್ಲಿ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಅವರು ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಆದರೆ, ಚಾಟ್‌ಜಿಪಿಟಿ ಗಿಲ್ ಜೊತೆಗೆ ಇನಿಂಗ್ಸ್ ಆರಂಭಿಸಲು ಎಡಗೈ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ. ಇದರ ಜೊತೆಗೆ ಮತ್ತೊಂದು ಮಹತ್ವದ ಬದಲಾವಣೆಯನ್ನು ಚಾಟ್‌ಜಿಪಿಟಿ ಮಾಡಿದೆ. ಅದೇನೆಂದರೆ ಏಕದಿನ ಕ್ರಿಕೆಟ್‌ನಲ್ಲಿ ಅದ್ಭುತ ದಾಖಲೆಯನ್ನು ಹೊಂದಿರುವ ವಿರಾಟ್ ಕೊಹ್ಲಿಯನ್ನು ಕಡೆಗಣಿಸಿದ ಚಾಟ್‌ಜಿಪಿಟಿ, ಎಡಗೈ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಅವರನ್ನು ಆರಿಸು ಮೂಲಕ ಅಚ್ಚರಿ ಮೂಡಿಸಿದೆ.
ಎಲ್ಲರೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯ ಕಾಲು ಎಳೆಯುತ್ತಿದ್ದಾರೆ: ಎಬಿ ಡಿ ವಿಲಿಯರ್ಸ್!
ನಾಲ್ಕನೇ ಕ್ರಮಾಂಕದಲ್ಲಿ ಉಪ ನಾಯಕ ಶ್ರೇಯಸ್ ಅಯ್ಯರ್, ಐದನೇ ಕ್ರಮಾಂಕದಲ್ಲಿ ಸ್ಪಿನ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಿದೆ. ಇನ್ನು ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಭ್ ಪಂತ್ ಅವರನ್ನು ಕೈ ಬಿಟ್ಟು, ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಚಾಟ್‌ಜಿಪಿಟಿ ಸ್ಥಾನವನ್ನು ನೀಡಿದೆ. ನಂತರ ಮತ್ತೊಂದು ಆಲ್‌ರೌಂಡರ್ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯಗೆ ಸ್ಥಾನವನ್ನು ನೀಡಿದೆ.
ಇನ್ನೂ ಪೂರ್ಣ ಪ್ರಮಾಣದ ಸ್ಪಿನ್ನರ್ ಕುಲ್ದೀಪ್ ಯಾದವ್‌ಗೆ ಚಾಟ್‌ಜಿಪಿಟಿ ಅವಕಾಶ ನೀಡಿದೆ. ಆ ಮೂಲಕ ಕುಲ್ದೀಪ್ ಯಾದವ್‌ಗೆ ಸ್ಪಿನ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಸಾಥ್ ನೀಡಲಿದ್ದಾರೆ. ಆ ಮೂಲಕ ರವೀಂದ್ರ ಜಡೇಜಾ ಅವರನ್ನು ಚಾಟ್ ಜಿಪಿಟಿ ಕೈ ಬಿಟ್ಟಿದೆ. ಇನ್ನು ವೇಗದ ಬೌಲರ್‌ಗಳಾಗಿ ನಿರೀಕ್ಷೆಯಂತೆ ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್ ಅವರನ್ನು ಚಾಟ್‌ಜಿಪಿಟಿ ಆಯ್ಕೆ ಮಾಡಿದೆ.
Shreyas Iyer: ಶ್ರೇಯಸ್ ಅಯ್ಯರ್ ಆರೋಗ್ಯ ಗಭೀರ! ಐಸಿಯುಗೆ ದಾಖಲಾದ ಉಪ ನಾಯಕ!
2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ChatGPT ಆರಿಸಿದ ಭಾರತದ ಪ್ಲೇಯಿಂಗ್ XI
1.ಶುಭಮನ್ ಗಿಲ್ (ಓಪನರ್)
2.ಯಶಸ್ವಿ ಜೈಸ್ವಾಲ್ (ಓಪನರ್)
3.ತಿಲಕ್ ವರ್ಮಾ (ಬ್ಯಾಟ್ಸ್‌ಮನ್)
4.ಶ್ರೇಯಸ್ ಅಯ್ಯರ್(ಬ್ಯಾಟ್ಸ್‌ಮನ್)
5.ಅಕ್ಷರ್ ಪಟೇಲ್ (ಸ್ಪಿನ್ ಆಲ್‌ರೌಂಡರ್)
6.ಕೆಎಲ್ ರಾಹುಲ್ (ವಿಕೆಟ್ ಕೀಪರ್-ಬ್ಯಾಟ್ಸ್‌ಮನ್)
7.ಹಾರ್ದಿಕ್ ಪಾಂಡ್ಯ (ಆಲ್‌ರೌಂಡರ್)
8.ಕುಲ್ದೀಪ್ ಯಾದವ್ (ಸ್ಪಿನ್ನರ್)
9.ಜಸ್‌ಪ್ರೀತ್ ಬುಮ್ರಾ (ವೇಗದ ಬೌಲರ್)
10.ಅರ್ಷದೀಪ್ ಸಿಂಗ್ (ವೇಗದ ಬೌಲರ್)
11.ಮೊಹಮ್ಮದ್ ಸಿರಾಜ್ (ವೇಗದ ಬೌಲರ್)