Asia Cup 2025: ಯುಎಇ ವಿರುದ್ದದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಆರಿಸಿದ ಕೆ ಶ್ರೀಕಾಂತ್!
K Srikkanth Picks India's Playing XI: ಯುಎಇ ವಿರುದ್ಧ 2025ರ ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡದ ಪ್ಲೇಯಿಂಗ್ XI ಅನ್ನು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಆಯ್ಕೆ ಮಾಡಿದ್ದಾರೆ. ಆದರೆ, ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಕೈ ಬಿಟ್ಟಿದ್ದಾರೆ.

ಯುಎಇ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ Xi ಆರಿಸಿದ ಕೆ ಶ್ರೀಕಾಂತ್. -

ನವದೆಹಲಿ: ಯುಎಇ ವಿರುದ್ಧ ಸೆಪ್ಟಂಬರ್ 10 ರಂದು ನಡೆಯುವ 2025ರ ಏಷ್ಯಾ ಕಪ್ (Asia Cup 2025) ಟೂರ್ನಿಗೆ ಭಾರತ ತಂಡದ ಪ್ಲೇಯಿಂಗ್ XI (India's Playing Xi) ಅನ್ನು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ (K Srikkanth) ಆಯ್ಕೆ ಮಾಡಿದ್ದಾರೆ. ಆದರೆ, ಅವರು ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಕೈ ಬಿಟ್ಟಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್‌ಗಳನ್ನಾಗಿ ಅಭಿಷೇಕ್ ಶರ್ಮಾ ಹಾಗೂ ಉಪ ನಾಯಕ ಶುಭಮನ್ ಗಿಲ್ ಅವರನ್ನು ಆರಿಸಿದ್ದಾರೆ. ಆದರೆ, ಕಳೆದ ಸರಣಿಗಳಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಮೂರು ಶತಕಗಳನ್ನು ಬಾರಿಸಿದ್ದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡುವ ಮೂಲಕ ಕೆ ಶ್ರೀಕಾಂತ್ ಅಚ್ಚರಿ ಮೂಡಿಸಿದ್ದಾರೆ.
ಅಭಿಷೇಕ್ ಶರ್ಮಾ ಆರಂಭಿಕ ಬ್ಯಾಟ್ಸ್‌ಮನ್ ಆಗಿ 17 ಟಿ20ಐ ಇನಿಂಗ್ಸ್‌ಗಳಿಂದ 33.43ರ ಸರಾಸರಿಯಲ್ಲಿ 535 ರನ್‌ಗಳನ್ನು ಬಾರಿಸಿದ್ದಾರೆ. ಅದರಲ್ಲಿಯೂ ಅವರು 193.84ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿರುವುದು ವಿಶೇಷವಾಗಿದೆ. ದೀರ್ಘಾವಧಿ ಬಳಿಕ ಶುಭಮನ್ ಗಿಲ್ ಟಿ20ಐ ತಂಡಕ್ಕೆ ಮರಳಿದ್ದಾರೆ. ಅವರಿಗೆ ಉಪ ನಾಯಕತ್ವವನ್ನು ನೀಡಲಾಗಿದೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ಶಿವಂ ದುಬೆಗೆ ಸ್ಥಾನವನ್ನು ನೀಡಲಾಗಿದೆ. ಇಂಗ್ಲೆಂಡ್ ಹಾಗೂ 2025ರ ಐಪಿಎಲ್ ಟೂರ್ನಿಯಲ್ಲಿ ತಿಲಕ್ ವರ್ಮಾ ತಮ್ಮ ಬ್ಯಾಟಿಂಗ್‌ನಲ್ಲಿ ಗಮನ ಸೆಳೆದಿದ್ದಾರೆ. ಇನ್ನು ಸೂರ್ಯಕುಮಾರ್ ಯಾದವ್ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಅವರು ಈ ವರ್ಷ ಆಡಿದ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳಿಂದ 65.19ರ ಸರಾಸರಿ ಮತ್ತು 167.91ರ ಸ್ಟ್ರೈಕ್ ರೇಟ್‌ನಲ್ಲಿ 717 ರನ್‌ಗಳನ್ನು ಬಾರಿಸಿದ್ದಾರೆ.
Asia Cup T20: ಟಿ20 ಮಾದರಿಯ ಏಷ್ಯಾಕಪ್ ದಾಖಲೆಗಳ ಪಟ್ಟಿ ಇಲ್ಲಿದೆ
ಆಲ್‌ರೌಂಡರ್‌ಗಳ ಸ್ಥಾನಕ್ಕೆ ಮಾಜಿ ಓಪನರ್, ಹಾರ್ದಿಕ್ ಪಾಂಡ್ಯ ಹಾಗೂ ಅಭಿಷೇಕ್ ಶರ್ಮಾ ಅವರನ್ನು ಆಯ್ಕೆ ಮಾಡಿದ್ದಾರೆ. ವಿಕೆಟ್ ಕೀಪರ್ ಸ್ಥಾನಕ್ಕೆ ಜಿತೇಶ್ ಶರ್ಮಾ ಅವರನ್ನು ಆರಿಸುವ ಮೂಲಕ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದಾರೆ. ಇನ್ನು ಬೌಲಿಂಗ್ ವಿಭಾಗಕ್ಕೆ ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿಗೆ ಸ್ಥಾನವನ್ನು ನೀಡಿದ್ದಾರೆ. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತದ ಪರ ವರುಣ್ ಚಕ್ರವರ್ತಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನವನ್ನು ತೋರಿದ್ದರು.
ಯುಎಇ ವಿರುದ್ಧದ ಏಷ್ಯಾ ಕಪ್ ಪಂದ್ಯಕ್ಕೆ ಕೆ ಶ್ರೀಕಾಂತ್ ಆರಿಸಿದ ಭಾರತದ ಪ್ಲೇಯಿಂಗ್ XI
1.ಅಭಿಷೇಕ್ ಶರ್ಮಾ (ಓಪನರ್)
2. ಶುಭಮನ್ ಗಿಲ್ (ಓಪನರ್)
3. ತಿಲಕ್ ವರ್ಮಾ (ಬ್ಯಾಟ್ಸ್‌ಮನ್)
4. ಸೂರ್ಯಕುಮಾರ್ ಯಾದವ್ (ನಾಯಕ, ಬ್ಯಾಟ್ಸ್‌ಮನ್)
5. ಶಿವಂ ದುಬೆ (ಬ್ಯಾಟಿಂಗ್ ಆಲ್‌ರೌಂಡರ್)
6. ಹಾರ್ದಿಕ್ ಪಾಂಡ್ಯ (ಬ್ಯಾಟಿಂಗ್ ಆಲ್‌ರೌಂಡರ್)
7.ಅಕ್ಷರ್ ಪಟೇಲ್ (ಸ್ಪಿನ್ ಆಲ್‌ರೌಂಡರ್)
8. ಜಿತೇಶ್ ಶರ್ಮಾ (ವಿಕೆಟ್ ಕೀಪರ್, ಬ್ಯಾಟ್ಸ್‌ಮನ್)
9. ಜಸ್‌ಪ್ರೀತ್ ಬುಮ್ರಾ (ವೇಗದ ಬೌಲರ್)
10. ಅರ್ಷದೀಪ್ ಸಿಂಗ್ (ವೇಗದ ಬೌಲರ್)
11. ವರುಣ್ ಚಕ್ರವರ್ತಿ (ಸ್ಪಿನ್ನರ್)
Asia Cup 2025: ಭಾರತ ತಂಡಕ್ಕೆ ಆರಂಭಿಕ ಬ್ಯಾಟ್ಸ್‌ಮನ್‌ಗಳನ್ನು ಆರಿಸಿದ ಮದನ್ ಲಾಲ್!
ಪಂದ್ಯದ ವಿವರ
ಭಾರತ vs ಯುಎಇ
2025ರ ಏಷ್ಯಾ ಕಪ್
ಎ ಗುಂಪಿನ ಪಂದ್ಯ
ದಿನಾಂಕ: ಸೆಪ್ಟಂಬರ್ 10
ಸಮಯ: ರಾತ್ರಿ 08: 00
ಸ್ಥಳ: ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣ, ದುಬೈ