IND vs ENG: ಭಾರತ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಆಘಾತ!
Gus Atkinson: ಭಾರತ ವಿರುದ್ದದ ಐದು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಫಾಸ್ಟ್ ಬೌಲರ್ ಗಸ್ ಅಟ್ಕಿನ್ಸನ್ ಅವರು ಹ್ಯಾಮ್ಸ್ಟ್ರಿಂಗ್ ಇಂಜುರಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೀಡ್ಸ್ನಲ್ಲಿ ನಡೆಯುವ ಮೊದಲನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದಾರೆಂದು ವರದಿಯಾಗಿದೆ.

ಭಾರತ ವಿರುದ್ಧದ ಮೊದಲನೇ ಟೆಸ್ಟ್ಗೆ ಗಸ್ ಅಟ್ಕಿನ್ಸನ್ ಅನುಮಾನ.

ನವದೆಹಲಿ: ಭಾರತ (India) ವಿರುದ್ಧದ ಮುಂಬರುವ ಐದು ಪಂದ್ಯಗಳ ಟೆಸ್ಟ್ ಸರಣಿಗೂ (IND vs ENG) ಮುನ್ನ ಇಂಗ್ಲೆಂಡ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ವೇಗದ ಬೌಲರ್ ಗಸ್ ಅಟ್ಕಿನ್ಸನ್ (Gus Atkinson) ಅವರು ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 20ರಂದು ಲೀಡ್ಸ್ನಲ್ಲಿ ಆರಂಭವಾಗಲಿರುವ ಮೊದಲನೇ ಟೆಸ್ಟ್ ಪಂದ್ಯಕ್ಕೆ ಅಟ್ಕಿನ್ಸನ್ ಅಲಭ್ಯರಾಗಲಿದ್ದಾರೆಂದು ವರದಿಯಾಗಿದೆ. ಈ ಬಗ್ಗೆ ಉನ್ನತ ಮೂಲಗಳು ಹೇಳಿರುವುದನ್ನು ಬಿಬಿಸಿ ವರದಿ ಮಾಡಿದೆ.
"ಭಾರತದ ವಿರುದ್ಧ ಈ ತಿಂಗಳಾಂತ್ಯದಲ್ಲಿ ನಡೆಯುವ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಗಸ್ ಅಟ್ಕಿನ್ಸನ್ ಆಡುವುದು ಅನುಮಾನ. ಏಕೆಂದರೆ ಅವರು ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಗಾಯಗೊಂಡಿರುವ ವೇಗಿಗಳ ಪಟ್ಟಿಗೆ ಇದೀಗ ಅಟ್ಕಿನ್ಸನ್ ಸೇರ್ಪಡೆಯಾಗಿದ್ದಾರೆ," ಎಂದು ಬಿಬಿಸಿ ವರದಿ ತಿಳಿಸಿದೆ.
27ರ ವಯಸ್ಸಿನ ಗಸ್ ಅಟ್ಕಿನ್ಸನ್ 2024ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಆಡುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಅವರು ಇಲ್ಲಿಯವರೆಗೂ ಆಡಿದ 12 ಟೆಸ್ಟ್ ಪಂದ್ಯಗಳಿಂದ 55 ವಿಕೆಟ್ಗಳನ್ನು ಕಬಳಿಸಿದ್ದಾರೆ. ಕೊನೆಯ ತಿಂಗಳು ಜಿಂಬಾಬ್ವೆ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆಡುವಾಗ ಅವರು ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದರು. ಈ ಕಾರಣದಿಂದಾಗಿ ಅವರು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿರಲಿಲ್ಲ. ಈ ಸರಣಿಯನ್ನು ಇಂಗ್ಲೆಂಡ್ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.
ENG vs IND Tests: ಭಾರತ ವಿರುದ್ಧದ ಮೊದಲ ಟೆಸ್ಟ್ಗೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್
ಗಸ್ ಅಟ್ಕಿನ್ಸನ್ ಅವರು ಆಡಿದ 12 ಟೆಸ್ಟ್ ಪಂದ್ಯಗಳಿಂದ ಮೂರು ಬಾರಿ 5 ವಿಕೆಟ್ ಸಾಧನೆ ಮಾಡಿದ್ದಾರೆ ಹಾಗೂ ಇಂಗ್ಲೆಂಡ್ ತಂಡದ ಬೌಲಿಂಗ್ ವಿಭಾಗಕ್ಕೆ ಪ್ರಮುಖ ವೇಗಿಯಾಗಿದ್ದಾರೆ. ಇದೀಗ ಅವರ ಅಲಭ್ಯತೆಯು ಇಂಗ್ಲೆಂಡ್ ತಂಡಕ್ಕೆ ಭಾರಿ ಹಿನ್ನಡೆಯನ್ನು ತರಲಿದೆ. ಟೆಸ್ಟ್ ಸರಣಿಯ ಆರಂಭಕ್ಕೆ ಇನ್ನೂ ಎರಡು ವಾರಗಳ ಕಾಲ ಸಮಯವಿದೆ. ಹಾಗಾಗಿ ಅವರು ಸಂಪೂರ್ಣವಾಗಿ ಗುಣಮುಖರಾಗಲು ಸಮಯವಿದೆ.
ಮಾರ್ಕ್ ವುಡ್ ಹಾಗೂ ಒಲ್ಲೀ ಸ್ಟೋನ್ ಅವರು ಕೂಡ ಗಾಯಕ್ಕೆ ತುತ್ತಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಇದೀಗ ಅಟ್ಕಿನ್ಸನ್ ಅವರ ಅಲಭ್ಯತೆ ತಂಡಕ್ಕೆ ಕಾಡಲಿದೆ. ಮತ್ತೊಂದೆಡೆ ಜೋಫ್ರಾ ಆರ್ಚರ್ ಕೂಡ ಹೆಬ್ಬೆರಳು ಗಾಯವನ್ನು ಹೊಂದಿದ್ದಾರೆ. ಅವರು ತಂಡಕ್ಕೆ ಬರುವುದು ಕೂಡ ತಡವಾಗಬಹುದು. ಅಟ್ಕಿನ್ಸನ್ ಅವರು ಅಲಭ್ಯರಾದರೆ, ಮ್ಯಾಥ್ಯೂ ಪಾಟ್ಸ್ ಅಥವಾ ಸ್ಯಾಮ್ ಕುಕ್ ಅವರಲ್ಲಿ ಒಬ್ಬರನ್ನು ಕ್ರಿಸ್ ವೋಸ್, ಜಾಶ್ ಟಾಂಗ್ ಹಾಗೂ ಬ್ರೈಡನ್ ಕಾರ್ಸ್ ಅವರನ್ನು ಒಳಗೊಂಡ ವೇಗದ ಬೌಲಿಂಗ್ ವಿಭಾಗಕ್ಕೆ ತೆಗೆದುಕೊಳ್ಳಬಹುದು.
IND vs ENG: ಭಾರತ ಟೆಸ್ಟ್ ತಂಡದಲ್ಲಿ ಶಮಿಗೆ ಸ್ಥಾನ ನೀಡದೇ ಇರಲು ಕಾರಣ ತಿಳಿಸಿದ ಅಜಿತ್ ಅಗರ್ಕರ್!
ಉಭಯ ತಂಡಗಳ ನಡುವಣ ಮೊದಲನೇ ಟೆಸ್ಟ್ ಪಂದ್ಯ ಜೂನ್ 20 ರಂದು ಆರಂಭವಾಗಲಿದೆ. ಎರಡು ಹಾಗೂ ಮೂರನೇ ಟೆಸ್ಟ್ ಪಂದ್ಯಗಳು ಕ್ರಮವಾಗಿ ಜುಲೈ 2 ರಂದು ಎಜ್ಬಾಸ್ಟನ್ ಮತ್ತು ಜುಲೈ 10 ರಂದು ಲಾರ್ಡ್ಸ್ನಲ್ಲಿ ನಡೆಯಲಿವೆ. ನಾಲ್ಕನೇ ಟೆಸ್ಟ್ ಪಂದ್ಯ ಜುಲೈ 23ರಂದು ಓಲ್ಡ್ ಟ್ರಾಫರ್ಡ್ನಲ್ಲಿ ಆರಂಭವಾದರೆ, ಐದನೇ ಹಾಗೂ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಜುಲೈ 31ಕ್ಕೆ ಓವಲ್ನಲ್ಲಿ ಆರಂಭವಾಗಲಿದೆ. ಶುಭಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ಈ ಟೆಸ್ಟ್ ಸರಣಿಯನ್ನು ಆಡಲಿದೆ.