ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MI vs GT: ಗುಜರಾತ್‌ ಟೈಟನ್ಸ್‌ ಕನಸು ಭಗ್ನ, ಎರಡನೇ ಕ್ವಾಲಿಫೈಯರ್‌ಗೆ ಮುಂಬೈ ಇಂಡಿಯನ್ಸ್‌!

MI vs GT Match Highlights: ರೋಹಿತ್‌ ಶರ್ಮಾ ಸ್ಪೋಟಕ ಬ್ಯಾಟಿಂಗ್‌ ಬಲದಿಂದ ಮುಂಬೈ ಇಂಡಿಯನ್ಸ್‌ ತಂಡ, 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ದ 20 ರನ್‌ಗಳಿಂದ ಗೆಲುವು ಪಡೆಯಿತು. ಆ ಮೂಲಕ ಹಾರ್ದಿಕ್‌ ಪಾಂಡ್ಯ ಪಡೆ ಟೂರ್ನಿಯ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿದೆ.

ಗುಜರಾತ್‌ ಟೈಟನ್ಸ್‌ ವಿರುದ್ಧ ಗೆದ್ದು ಸಂಭ್ರಮಿಸಿದ ಮುಂಬೈ ಇಂಡಿಯನ್ಸ್‌ ಆಟಗಾರರು.

ಚಂಡೀಗಢ: ರೋಹಿತ್‌ ಶರ್ಮಾ (81 ರನ್‌) ಸ್ಪೋಟಕ ಬ್ಯಾಟಿಂಗ್‌ ಬಲದಿಂದ ಮುಂಬೈ ಇಂಡಿಯನ್ಸ್‌ ತಂಡ, 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ (MI vs GT) ಗುಜರಾತ್‌ ಟೈಟನ್ಸ್‌ ವಿರುದ್ಧ 20 ರನ್‌ಗಳಿಂದ ಗೆದ್ದು, ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿದೆ. ಜೂನ್‌ ಒಂದರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಎರಡನೇ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ಕಿಂಗ್ಸ್‌ (PBKS) ವಿರುದ್ಧ ಹಾರ್ದಿಕ್‌ ಪಾಂಡ್ಯ ಪಡೆ ಕಾದಾಟ ನಡೆಸಲಿದೆ. ಮತ್ತೊಂದು ಕಡೆ ಸಾಯಿ ಸುದರ್ಶನ್‌ (80) ಹಾಗೂ ವಾಷಿಂಗ್ಟನ್‌ ಸುಂದರ್‌ (48 ರನ್‌) ಅವರ ಸ್ಪೋಟಕ ಬ್ಯಾಟಿಂಗ್‌ ಹೊರತಾಗಿಯೂ ಇತರೆ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಗುಜರಾತ್‌ ಟೈಟನ್ಸ್‌ ತಂಡ ಸೋಲು ಒಪ್ಪಿಕೊಂಡಿತು. ಆ ಮೂಲಕ ಟೂರ್ನಿಯ ಅಭಿಯಾನವನ್ನು ಮುಗಿಸಿತು.

ಶುಕ್ರವಾರ ಇಲ್ಲಿನ ಮುಲ್ಲನ್‌ಪುರದ ಮಹಾರಾಜ ಯದವೀಂದ್ರ ಸಿಂಗ್‌ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್‌ ನೀಡಿದ್ದ 229 ರನ್‌ಗಳ ಗುರಿಯನ್ನು ಹಿಬಾಲಿಸಿದ ಗುಜರಾತ್‌ ಟೈಟನ್ಸ್‌ ತಂಡ, ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 6 ವಿಕೆಟ್‌ ನಷ್ಟಕ್ಕೆ 206 ರನ್‌ಗಳಿಗೆ ಸೀಮಿತವಾಯಿತು. ಆ ಮೂಲಕ ಸೋತು ಎರಡನೇ ಕ್ವಾಲಿಫೈಯರ್‌ಗೆ ತಲುಪುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು. ಮುಂಬೈ ಇಂಡಿಯನ್ಸ್‌ ಪರ ಟ್ರೆಂಟ್‌ ಬೌಲ್ಟ್‌ ಎರಡು ವಿಕೆಟ್‌ ಕಿತ್ತರೆ, ಜಸ್‌ಪ್ರೀತ್‌ ಬುಮ್ರಾ, ರಿಚರ್ಡ್‌ ಗ್ಲೀಸನ್‌, ಮಿಚೆಲ್‌ ಸ್ಯಾಂಟ್ನರ್‌ ಹಾಗೂ ಅಶ್ವಿನಿ ಕುಮಾರ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

IPL 2025: ʻಈ ಒಂದು ಕಾರಣದಿಂದಲೇ ವಿರಾಟ್‌ ಕೊಹ್ಲಿಯ ಮೇಲೆ ನನಗೆ ಗೌರವ ಜಾಸ್ತಿʼ: ಎಬಿಡಿ!

ಸಾಯಿ ಸುದರ್ಶನ್‌ ಹೋರಾಟ ವ್ಯರ್ಥ

ಬೃಹತ್‌ ಮೊತ್ತದ ಗುರಿಯನ್ನು ಹಿಂಬಾಲಿಸಿದ ಗುಜರಾತ್‌ ಟೈಟನ್ಸ್‌ ತಂಡದ ಪರ ಬ್ಯಾಟಿಂಗ್‌ನಲ್ಲಿ ಗಮನ ಸೆಳೆದಿದ್ದು ಸಾಯಿ ಸುದರ್ಶನ್‌ ಹಾಗೂ ವಾಷಿಂಗ್ಟನ್‌ ಸುಂದರ್‌. ನಾಯಕ ಶುಭಮನ್‌ ಗಿಲ್‌ ಬಹುಬೇಗ ವಿಕೆಟ್‌ ಒಪ್ಪಿಸಿದ್ದರು. ಕುಸಾಲ್‌ ಮೆಂಡಿಸ್‌ (20) ಕೂಡ ಹೆಚ್ಚು ಹೊತ್ತು ಆಡಲಿಲ್ಲ. ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್‌ ಮಾಡಿದ್ದ ಸಾಯಿ ಸುದರ್ಶನ್‌, 49 ಎಸೆತಗಳಲ್ಲಿ ಒಂದು ಸಿಕ್ಸರ್‌ ಹಾಗೂ 10 ಬೌಂಡರಿಗಳೊಂದಿಗೆ 80 ರನ್‌ಗಳನ್ನು ಸಿಡಿಸಿದ್ದರು. ಅಲ್ಲದೆ ವಾಷಿಂಗ್ಟನ್‌ ಸುಂದರ್‌ ಜೊತೆ 84 ರನ್‌ಗಳನ್ನು ಜೊತೆಯಾಟವನ್ನು ಆಡಿದ್ದರು. ಆದರೂ ಇತರೆ ಬ್ಯಾಟ್ಸ್‌ಮನ್‌ಗಳ ಬೆಂಬಲದ ಕೊರತೆಯಿಂದ ತಂಡವನ್ನು ಗೆಲ್ಲಿಸಲು ಸಾಧ್ಯವಾಗಿಲ್ಲ. ವಾಷಿಂಗ್ಟನ್‌ ಸುಂದರ್‌ 48 ರನ್‌ ಹಾಗೂ ಶೆರ್ಫೆನ್‌ ಋದರ್‌ಫೋರ್ಡ್‌ 24 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು.



ರೋಹಿತ್‌ ಶರ್ಮಾ ಸ್ಪೋಟಕ ಅರ್ಧಶತಕ

ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಮುಂಬೈ ಇಂಡಿಯನ್ಸ್‌ ಪರ ಮಾಜಿ ನಾಯಕ ರೋಹಿತ್‌ ಶರ್ಮಾ ಮಿಂಚಿನ ಆಟವನ್ನು ಪ್ರದರ್ಶಿಸಿದ್ದರು. ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ ಹಾಗೂ ಮತ್ತೊಬ್ಬ ಆರಂಭಿಕ ಜಾನಿ ಬೈರ್‌ಸ್ಟೋವ್‌ ಆಕ್ರಮಣಕಾರಿ ಆಟವನ್ನು ಆಡಿದರು. ಈ ಜೋಡಿ ಮುರಿಯದ ಮೊದಲನೇ ವಿಕೆಟ್‌ಗೆ 84 ರನ್‌ಗಳನ್ನು ಸಿಡಿಸಿತ್ತು. ಕೇವಲ 22 ಎಸೆತಗಳಲ್ಲಿ 47 ರನ್‌ ಗಳಿಸಿ ಜಾನಿ ಬೈರ್‌ಸ್ಟೋವ್‌ ವಿಕೆಟ್‌ ಒಪ್ಪಿಸಿದ್ದರು. ಸೂರ್ಯಕುಮಾರ್‌ ಯಾದವ್‌ 20 ಎಸೆತಗಳಲ್ಲಿ 33 ರನ್‌ ಗಳಿಸಿ ಔಟ್‌ ಆದರು.



ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್‌ ಮಾಡಿದ್ದ ರೋಹಿತ್‌ ಶರ್ಮಾ 50 ಎಸೆತಗಳಲ್ಲಿ 4 ಸಿಕ್ಸರ್‌ ಹಾಗೂ 9 ಬೌಂಡರಿಗಳೊಂದಿಗೆ 81 ರನ್‌ಗನ್ನು ಬಾರಿಸಿದ್ದರು. ಆ ಮೂಲಕ ಮುಂಬೈ ತಂಡದ ಮೊತ್ತ 180ರ ಗಡಿ ದಾಟಲು ನೆರವು ನೀಡಿದ್ದರು. ಇವರು ವಿಕೆಟ್‌ ಒಪ್ಪಿಸಿದ ಬಳಿಕ ತಿಲಕ್‌ ವರ್ಮಾ ಮತ್ತು ಹಾರ್ದಿಕ್‌ ಪಾಂಡ್ಯ ಕ್ರಮವಾಗಿ 25 ರನ್‌ ಹಾಗೂ 22 ರನ್‌ಗಳ ನಿರ್ಣಾಯಕ ಕೊಡುಗೆಯನ್ನು ನೀಡಿದ್ದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 228 ರನ್‌ಗಳನ್ನು ಗಳಿಸಿತ್ತು.