ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: 43 ರನ್‌ ಗಳಿಸಿ ವಿರಾಟ್‌ ಕೊಹ್ಲಿ ಒಳಗೊಂಡ ಎಲೈಟ್‌‌ ಲಿಸ್ಟ್ ಸೇರಿದ ಶುಭಮನ್‌ ಗಿಲ್‌!

Shubman Gill joins Elite list: ಮುಂಬೈ ಇಂಡಿಯನ್ಸ್‌ ವಿರುದ್ದದ ಮಂಗಳವಾರದ ಪಂದ್ಯದಲ್ಲಿ 43 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರೂ ಶುಭಮನ್‌ ಗಿಲ್‌ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ 500ರ ಗಡಿ ದಾಟಿದರು. ಆ ಮೂಲಕ ವಿರಾಟ್‌ ಕೊಹ್ಲಿ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.

ವಿರಾಟ್‌ ಕೊಹ್ಲಿ ಒಳಗೊಂಡ ಎಲೈಟ್‌ ಲಿಸ್ಟ್‌ ಸೇರಿದ ಶುಭಮನ್‌ ಗಿಲ್‌!

ಶುಭಮನ್‌ ಗಿಲ್‌

Profile Ramesh Kote May 7, 2025 6:04 PM

ಮುಂಬೈ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅವರು ಇಲ್ಲಿಯ ತನಕ ಆಡಿದ 11 ಪಂದ್ಯಗಳಿಂದ 508 ರನ್‌ಗಳನ್ನು ಸಿಡಿಸಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಪ್ರವೇಶ ಮಾಡಿದ್ದಾರೆ. ಶುಭಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟನ್ಸ್‌ ತಂಡ ಮಂಗಳವಾರ ಮುಂಬೈ ಇಂಡಿಯನ್ಸ್‌ ವಿರುದ್ದ ಗೆಲ್ಲುವ ಮೂಲಕ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಮುಂಬೈ ಇಂಡಿಯನ್ಸ್‌ ತಂಡ, ವಿಲ್‌ ಜ್ಯಾಕ್ಸ್‌ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಬ್ಯಾಟಿಂಗ್‌ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 155 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಗುಜರಾತ್‌ ಟೈಟನ್ಸ್‌ಗೆ 156 ರನ್‌ಗಳ ಗುರಿಯನ್ನಿ ನೀಡಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಗುಜರಾತ್‌ ಟೈಟನ್ಸ್‌ ಪರ ಶುಭಮನ್‌ ಗಿಲ್‌, 46 ಎಸೆತಗಳಲ್ಲಿ 43 ರನ್‌ಗಳನ್ನು ಕಲೆ ಹಾಕಿದ್ದರು. ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಈ ಟೂರ್ನಿಯಲ್ಲಿ 500ಕ್ಕೂ ಅಧಿಕ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.

IPL 2025: ವಿರಾಟ್‌ ಕೊಹ್ಲಿಯ ಸ್ಟ್ರೈಕ್‌ ರೇಟ್‌ ಕಡಿಮೆ ಎಂದವರಿಗೆ ಎಬಿಡಿ ತಿರುಗೇಟು!

ವಿಶೇಷ ದಾಖಲೆ ಬರೆದ ಶುಭಮನ್‌ ಗಿಲ್‌

ಪ್ರಸಕ್ತ 2025ರ ಐಪಿಎಲ್‌ ಟೂರ್ನಿಯಲ್ಲಿ 508 ರನ್‌ಗಳನ್ನು ಬಾರಿಸಿದ್ದಾರೆ. ಆ ಮೂಲಕ ಐಪಿಎಲ್‌ ಟೂರ್ನಿಯಲ್ಲಿ 500 ರನ್‌ಗಳನ್ನು ಕಲೆ ಹಾಕಿದ ಅತ್ಯಂತ ಎರಡನೇ ಕಿರಿಯ ನಾಯಕ ಎಂಬ ದಾಖಲೆಯನ್ನು ಶುಭಮನ್‌ ಗಿಲ್‌ ಬರೆದಿದ್ದಾರೆ. ಈ ಸಾಧನೆ ಮಾಡಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರಾಟ್‌ ಕೊಹ್ಲಿ ಹೆಸರಿನಲ್ಲಿದೆ.

ಶುಭಮನ್‌ ಗಿಲ್‌ 25 ವರ್ಷ 280 ದಿನಗಳಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ. ಆದರೆ, ವಿರಾಟ್‌ ಕೊಹ್ಲಿ 25 ವರ್ಷ 186 ದಿನಗಳಲ್ಲಿ ಈ ಸಾಧನೆಗೆ ಭಾಜನರಾಗಿದ್ದರು. 2013ರ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ 634 ರನ್‌ಗಳನ್ನು ದಾಖಲಿಸಿದ್ದಾರೆ.

MI vs GT: ಲೋಸ್ಕೋರಿಂಗ್‌ ಪಂದ್ಯದಲ್ಲಿ ಮುಂಬೈ ಸದ್ದಡಗಿಸಿದ ಗುಜರಾತ್‌ ಟೈಟನ್ಸ್‌!

24 ವರ್ಷ, 186 ದಿನಗಳು – ವಿರಾಟ್‌ ಕೊಹ್ಲಿ (2013)

25 ವರ್ಷ, 240 ದಿನಗಳು– ಶುಭಮನ್‌ ಗಿಲ್‌ (2025)*

25 ವರ್ಷ, 340 ದಿನಗಳು– ಶ್ರೇಯಸ್ ಅಯ್ಯರ್‌ (2020)

26 ವರ್ಷ, 198 ದಿನಗಳು– ವಿರಾಟ್‌ ಕೊಹ್ಲಿ (2015)

27 ವರ್ಷ, 91 ದಿನಗಳು – ಋತುರಾಜ್‌ ಗಾಯಕ್ವಾಡ್‌ (2024)

27 ವರ್ಷ, 184 ದಿನಗಳು – ವಿರಾಟ್‌ ಕೊಹ್ಲಿ (2016)

27 ವರ್ಷ, 218 ದಿನಗಳು – ಕೇನ್‌ ವಿಲಿಯಮ್ಸನ್‌ (2018)

MI vs GT: ಐಪಿಎಲ್‌ ನಿಯಮ ಉಲ್ಲಂಘಿಸಿದ ಹಾರ್ದಿಕ್‌ ಪಾಂಡ್ಯ, ಆಶಿಶ್‌ ನೆಹ್ರಾಗೆ ದಂಡ!

ಈ ಪಂದ್ಯಕ್ಕೆ ಎರಡು ಬಾರಿ ಮಳೆ ಅಡ್ಡಿ ಉಂಟು ಮಾಡಿತ್ತು. ಎರಡನೇ ಬಾರಿ ಮಳೆ ಬಂದಾಗ ಗುಜರಾತ್‌ ಟೈಟನ್ಸ್‌ ತಂಡ 18 ಓವರ್‌ಗಳಿಗೆ 132 ರನ್‌ಗಳನ್ನು ಗಳಿಸಿತ್ತು. ಆ ಮೂಲಕ ಕೊನೆಯ ಎರಡು ಓವರ್‌ಗಳಲ್ಲಿ ಗುಜರಾತ್‌ಗೆ 24 ರನ್‌ಗಳ ಅಗತ್ಯವಿತ್ತು. ಈ ವೇಳೆ ಜೋರಾಗಿ ಮಳೆ ಬಿದ್ದಿದ್ದರಿಂದ ಈ ಪಂದ್ಯವನ್ನು 19 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಆ ಮೂಲಕ ಡಿಎಲ್‌ಎಸ್‌ ನಿಯಮದ ಪ್ರಕಾರ, ಜಿಟಿಗೆ ಕೊನೆಯ ಓವರ್‌ನಲ್ಲಿ 15 ರನ್‌ಗಳ ಗುರಿಯನ್ನು ನೀಡಲಾಗಿತ್ತು. ಆ ಮೂಲಕ ರಾಹುಲ್‌ ತೆವಾಟಿಯಾ ಹಾಗೂ ಜೆರಾಲ್ಡ್‌ ಕೊಯೆಡ್ಜಿ ಕ್ರಮವಾಗಿ ಬೌಂಡರಿ ಹಾಗೂ ಸಿಕ್ಸರ್‌ ಮೂಲಕ ಗುಜರಾತ್‌ ಟೈಟನ್ಸ್‌ ತಂಡವನ್ನು ಗೆಲ್ಲಿಸಿದ್ದರು.