ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MI vs LSG: 'ಐಪಿಎಲ್‌ ಇತಿಹಾಸದಲ್ಲಿಯೇ ರಿಷಭ್‌ ಪಂತ್‌ ದೊಡ್ಡ ಮೋಸಗಾರ' ಎಂದ ಫ್ಯಾನ್ಸ್‌!

Rishabh Pant flops again: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಿಷಭ್‌ ಪಂತ್‌ ಅವರ ಬ್ಯಾಟಿಂಗ್‌ ವೈಫಲ್ಯ ಮುಂದುವರಿದಿದೆ. ಶುಕ್ರವಾರ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಎಲ್‌ಎಸ್‌ಜಿ ನಾಯಕ ಕೇವಲ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಆ ಮೂಲಕ ಐಪಿಎಲ್‌ ಇತಿಹಾಸದ ದುಬಾರಿ ಆಟಗಾರನನ್ನು ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್‌ ಮಾಡಿದ್ದಾರೆ.

ಐಪಿಎಲ್‌ ಇತಿಹಾಸದಲ್ಲಿಯೇ ರಿಷಭ್‌ ಪಂತ್‌ ದೊಡ್ಡ ಮೋಸಗಾರ ಎಂದ ಫ್ಯಾನ್ಸ್‌!

2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ ಹಾರ್ದಿಕ್‌ ಪಾಂಡ್ಯ.

Profile Ramesh Kote Apr 4, 2025 11:31 PM

ಲಖನೌ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಇತಿಹಾಸದಲ್ಲಿಯೇ ಅತ್ಯಂತ ದುಬಾರಿ ಆಟಗಾರನಾಗಿ ಲಖನೌ ಸೂಪರ್‌ ಜಯಂಟ್ಸ್‌ (LSG) ತಂಡವನ್ನು ಮುನ್ನಡೆಸುತ್ತಿರುವ ರಿಷಭ್‌ ಪಂತ್‌ (Rishabh Pant), ತನ್ನ ಬ್ಯಾಟಿಂಗ್‌ ವೈಫಲ್ಯವನ್ನು ಮುಂದುವರಿಸಿದ್ದಾರೆ. ಅವರು ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಕೇವಲ ಎರಡು ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಆ ಮೂಲಕ ಅಭಿಮಾನಿಗಳು ಸೇರಿದಂತೆ ಲಖನೌ ಫ್ರಾಂಚೈಸಿ ಮಾಲೀಕ ಸಂಜೀವ್‌ ಗೋಯಾಂಕಾ ಅವರಿಗೂ ನಿರಾಶೆ ಮೂಡಿಸಿದ್ದಾರೆ. ಇದರೊಂದಿಗೆ ರಿಷಭ್‌ ಪಂತ್‌ ಅವರನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳ ಐಪಿಎಲ್‌ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಮೋಸಗಾರ ಎಂದು ಟ್ರೋಲ್‌ ಮಾಡಿದ್ದಾರೆ.

ಲಖನೌ ಸೂಪರ್‌ ಜಯಂಟ್ಸ್‌ ತಂಡದ ನಾಯಕರಾಗಿರುವ ರಿಷಭ್ ಪಂತ್ ಸತತ ನಾಲ್ಕನೇ ಪಂದ್ಯದಲ್ಲಿಯೂ ಬ್ಯಾಟಿಂಗ್‌ನಲ್ಲಿ ವಿಫಲರಾದರು. ಲಖನೌ ಪರ ತಮ್ಮ ಚೊಚ್ಚಲ ಪಂದ್ಯದಲ್ಲಿ ಪಂತ್ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ್ದರು. ಇದಾದ ಬಳಿಕ ಅವರು ಖಂಡಿತವಾಗಿಯೂ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಕಮ್‌ಬ್ಯಾಕ್‌ ಮಾಡಲಿದ್ದಾರೆಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಕೇವಲ 15 ರನ್ ಗಳಿಸಿದ ನಂತರ ಶರಣಾಗಿದ್ದರು. ನಂತರ ಪಂಜಾಬ್ ಕಿಂಗ್ಸ್‌ ವಿರುದ್ದದ ಪಂದ್ಯದಲ್ಲಿಯೂ ಲಖನೌ ನಾಯಕ ಕೇವಲ ಎರಡು ರನ್‌ ವಿಕೆಟ್‌ ಒಪ್ಪಿಸಿದ್ದರು. ಇದೀಗ ಅವರು ಮುಂಬೈ ಇಂಡಿಯನ್ಸ್‌ ವಿರುದ್ದವೂ ಎರಡಂಕಿ ವೈಯಕ್ತಿಕ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲರಾದರು.

IPL 2025: 5 ವಿಕೆಟ್‌ ಕಿತ್ತು ಅನಿಲ್‌ ಕುಂಬ್ಳೆಯ 16 ವರ್ಷಗಳ ಹಳೆಯ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ!

2 ರನ್‌ಗೆ ಔಟಾಗಿ ಟ್ರೋಲ್‌ ಆದ ಪಂತ್‌

ಮುಂಬೈ ವಿರುದ್ಧದ ಪಂದ್ಯದಲ್ಲಿಯೂ ಕೇವಲ ಎರಡು ರನ್‌ಗೆ ವಿಕೆಟ್‌ ಒಪ್ಪಿಸುವ ಮೂಲಕ ರಿಷಭ್‌ ಪಂತ್‌ ಅಭಿಮಾನಿಗಳಿಗೆ ಭಾರಿ ನಿರಾಶೆ ಮೂಡಿಸಿದರು. ಅಲ್ಲದೆ, 27 ಕೋಟಿ ರೂ. ಗಳನ್ನು ಪಡೆದು ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ಪಂತ್‌, ತಮ್ಮ ಬೆಲೆಗೆ ನ್ಯಾಯ ದೊರಕಿಸಿಕೊಡುವಲ್ಲಿ ಮತ್ತೊಮ್ಮೆ ವಿಫಲರಾದರು. ಈ ಹಿನ್ನೆಲೆಯಲ್ಲಿ ರಿಷಭ್‌ ಪಂತ್‌ ಅವರನ್ನು ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್‌ ಮಾಡಿದ್ದಾರೆ. ಅಭಿಮಾನಿಗಳು ಪಂತ್‌ ಅವರನ್ನು ಅತ್ಯಂತ ದೊಡ್ಡ ಮೋಸಗಾರ ಎಂದು ದೂರಿದ್ದಾರೆ.



203 ರನ್‌ ಕಲೆ ಹಾಕಿದ ಎಲ್‌ಎಸ್‌ಜಿ

ಲಖನೌ ತಂಡದ ನಾಯಕ ರಿಷಬ್ ಪಂತ್ ಮುಂಬೈ ವಿರುದ್ಧ ತಮ್ಮ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಲು ಸಾಧ್ಯವಾಗದಿದ್ದರೂ ತಂಡದ ಇತರ ಬ್ಯಾಟ್ಸ್‌ಮನ್‌ಗಳು ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರೀ ಸದ್ದು ಮಾಡಿದರು. ಲಖನೌ ಪರ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಮಿಚೆಲ್ ಮಾರ್ಷ್ ಮತ್ತು ಏಡೆನ್ ಮಾರ್ಕ್ರಾಮ್ ಅರ್ಧಶತಕ ಗಳಿಸಿದರು. ಇದಲ್ಲದೆ, ಮಧ್ಯಮ ಓವರ್‌ಗಳಲ್ಲಿ ಆಯುಷ್ ಬದೋನಿ ಮತ್ತು ಡೇವಿಡ್ ಮಿಲ್ಲರ್ ಕೂಡ ತಮ್ಮ ಸ್ಪೋಟಕ ಬ್ಯಾಟಿಂಗ್‌ನಿಂದಾಗಿ ಎಲ್‌ಎಸ್‌ಜಿ ತನ್ನ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 203 ರನ್‌ಗಳನ್ನು ಕಲೆ ಹಾಕಿತ್ತು.



5 ವಿಕೆಟ್‌ ಕಿತ್ತ ಹಾರ್ದಿಕ್‌ ಪಾಂಡ್ಯ

ಮುಂಬೈ ಇಂಡಿಯನ್ಸ್‌ ತಂಡದ ಬೌಲಿಂಗ್‌ ಪ್ರದರ್ಶನದ ಬಗ್ಗೆ ಹೇಳುವುದಾದರೆ, ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ಐಪಿಎಲ್‌ ವೃತ್ತಿ ಜೀವನದ ಶ್ರೇಷ್ಠ ಬೌಲಿಂಗ್‌ ಪ್ರದರ್ಶನವನ್ನು ತೋರಿದರು. ತಾವು ಬೌಲ್‌ ಮಾಡಿದ ನಾಲ್ಕು ಓವರ್‌ಗಳಲ್ಲಿ 36 ರನ್‌ಗಳನ್ನು ನೀಡಿ 5 ವಿಕೆಟ್‌ಗಳನ್ನು ಕಬಳಿಸಿದರು. ಆ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ 5 ವಿಕೆಟ್‌ ಸಾಧನೆ ಮಾಡಿದ ಮೊದಲ ನಾಯಕ ಎಂಬ ದಾಖಲೆಯನ್ನು ಬರೆದರು. ಹಾರ್ದಿಕ್‌ ಪಾಂಡ್ಯ ಜತೆಗೆ ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್ ಮತ್ತು ವಿಘ್ನೇಶ್ ಪುತ್ತೂರು ತಲಾ ಒಂದೊಂದು ವಿಕೆಟ್ ಪಡೆದರು.



ಲಖನೌಗೆ 12 ರನ್‌ ಜಯ

ಇನ್ನು ಎಲ್‌ಎಸ್‌ಜಿ ನೀಡಿದ್ದ 204 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಮುಂಬೈ ಇಂಡಿಯನ್ಸ್‌ ಕೊನೆಯ ಓವರ್‌ವರೆಗೂ ಕಠಿಣ ಹೋರಾಟವನ್ನು ನಡೆಸಿತ್ತು. ಆದರೆ, ಅಂತಿಮವಾಗಿ ಲಖನೌ ಬೌಲರ್‌ಗಳ ಶಿಸ್ತುಬದ್ದ ಬೌಲಿಂಗ್‌ ದಾಳಿಯ ಎದುರು ಮುಂಬೈ, 20 ಓವರ್‌ಗಳನ್ನು ಮುಗಿಸಿದರೂ 5 ವಿಕೆಟ್‌ಗಳ ನಷ್ಟಕ್ಕೆ 191 ರನ್‌ಗಳಿಗೆ ಸೀಮಿತವಾಯಿತು. ಆ ಮೂಲಕ ರಿಷಭ್‌ ಪಂತ್‌ ನಾಯಕತ್ವದ ಲಖನೌ ಸೂಪರ್‌ ಜಯಂಟ್ಸ್‌ 12 ರನ್‌ಗಳಿಂದ ಗೆದ್ದು ಬೀಗಿತು.