ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MI vs RR: 7 ಹೊಲಿಗೆಗಳಿದ್ದರೂ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಆಡಿದ್ದ ಹಾರ್ದಿಕ್‌ ಪಾಂಡ್ಯ!

ರಾಜಸ್ಥಾನ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅದ್ಭುತ ಸ್ಪೂರ್ತಿಯನ್ನು ಪ್ರದರ್ಶಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್‌, 7 ಹೊಲಿಗೆಗಳನ್ನು ಹಾಕಿಸಿಕೊಂಡಿದ್ದರೂ ಆರ್‌ಆರ್‌ ಎದುರು ಕಣಕ್ಕೆ ಇಳಿದಿದ್ದರು. ಅವರು ಕೇವಲ 23 ಎಸೆತಗಳಲ್ಲಿ 48 ರನ್‌ ಸಿಡಿಸಿದ್ದರು.

7 ಹೊಲಿಗೆಗಳಿದ್ದರೂ ರಾಜಸ್ಥಾನ್‌ ವಿರುದ್ಧ ಆಡಿದ್ದ ಹಾರ್ದಿಕ್‌ ಪಾಂಡ್ಯ!

ಹಾರ್ದಿಕ್‌ ಪಾಂಡ್ಯ

Profile Ramesh Kote May 2, 2025 9:41 AM

ಜೈಪುರ: ರಾಜಸ್ಥಾನ ರಾಯಲ್ಸ್ ( Rajasthan Royals) ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) 100 ರನ್‌ಗಳ ಭರ್ಜರಿ ಗೆಲುವು ಪಡೆದಿದೆ. ಈ ಗೆಲುವಿನೊಂದಿಗೆ, ಮುಂಬೈ ಇಂಡಿಯನ್ಸ್ ಈ ಋತುವಿನಲ್ಲಿ ಸತತ 6 ಗೆಲುವುಗಳನ್ನು ದಾಖಲಿಸಿತು. ಮುಂಬೈ ತಂಡದ ಯಶಸ್ಸಿನಲ್ಲಿ ನಾಯಕ ಹಾರ್ದಿಕ್ ಪಾಂಡ್ಯ (Hardik pandya) ಪಾತ್ರ ಕೂಡ ದೊಡ್ಡದು. ರಾಜಸ್ಥಾನ ರಾಯಲ್ಸ್ ವಿರುದ್ಧ ಹಾರ್ದಿಕ್, ಅದ್ಭುತ ಚೈತನ್ಯವನ್ನು ಪ್ರದರ್ಶಿಸಿದರು. ಹಾರ್ದಿಕ್‌ ಅವರ ಕಣ್ಣಿನ ಭಾಗದಲ್ಲಿ ಗಾಯವಾಗಿದ್ದರೂ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಸ್ಪೂರ್ತಿಯನ್ನು ಮೆರೆದಿದ್ದಾರೆ.

ರಾಜಸ್ಥಾನ್‌ ರಾಯಲ್ಸ್‌ ವಿರುದ್ದದ ಪಂದ್ಯಕ್ಕೂ ಮುನ್ನ ಹಾರ್ದಿಕ್‌ ಪಾಂಡ್ಯ ಗಾಯಕ್ಕೆ ತುತ್ತಾಗಿದ್ದರು. ತರಬೇತಿ ವೇಳೆ ಹಾರ್ದಿಕ್ ಗಾಯಗೊಂಡಿದ್ದರು. ಅವರ ಕಣ್ಣಿನ ಭಾಗದಲ್ಲಿ ಗಾಯವಾಗಿದ್ದರಿಂದ 7 ಹೊಲಿಗೆಗಳನ್ನು ಹಾಕಿಸಿಕೊಂಡಿದ್ದಾರೆ. ಆದರೂ ಒಂದು ಸಣ್ಣ ಬ್ಯಾಂಡೇಜ್‌ ಹಾಕಿಕೊಂಡು ಹಾರ್ದಿಕ್‌ ಪಾಂಡ್ಯ ಗುರುವಾರ ಪಂದ್ಯವನ್ನು ಆಡಿದ್ದರು. ಅವರು ಬ್ಯಾಟಿಂಗ್‌ನಲ್ಲಿ ಕೇವಲ 23 ಎಸೆತಗಳಲ್ಲಿ 48 ರನ್‌ಗಳನ್ನು ಸಿಡಿಸಿದ್ದರು.

IPL 2025: ಆರ್‌ಸಿಬಿ, ಮುಂಬೈಗೆ ಒಂದೇ ಹೆಜ್ಜೆ ಬಾಕಿ-8 ತಂಡಗಳ ಐಪಿಎಲ್‌ ಪ್ಲೇಆಫ್ಸ್‌ ಲೆಕ್ಕಾಚಾರ!

ವಿರಾಟ್ ಕೊಹ್ಲಿಯನ್ನು ಸ್ಮರಿಸಿದ ಅಭಿಮಾನಿಗಳು

ಹಾರ್ದಿಕ್ ಪಾಂಡ್ಯ ಅವರ ಈ ಮನೋಭಾವವನ್ನು ನೋಡಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ನೆನಪಾದರು. 2016 ರಲ್ಲಿ ವಿರಾಟ್ ಕೊಹ್ಲಿ ಕೈಯಲ್ಲಿ 8 ಹೊಲಿಗೆಗಳಿದ್ದರೂ ಪಂಜಾಬ್ ಕಿಂಗ್ಸ್ ವಿರುದ್ಧ ಶತಕ ಗಳಿಸಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಜೇಯ 48 ರನ್ ಗಳಿಸಿದ್ದರು. ಹಾರ್ದಿಕ್ ಅವರಂತೆಯೇ ಸೂರ್ಯಕುಮಾರ್ ಯಾದವ್ ಕೂಡ 23 ಎಸೆತಗಳಲ್ಲಿ ಅಜೇಯ 48 ರನ್ ಗಳಿಸಿದರು.

IPL 2025: ಮುಂಬೈ ಇಂಡಿಯನ್ಸ್‌ ಪರ ವಿಶೇಷ ದಾಖಲೆ ಬರೆದ ರೋಹಿತ್‌ ಶರ್ಮಾ!

ಮುಂಬೈ ಇಂಡಿಯನ್ಸ್‌ಗೆ ಭರ್ಜರಿ ಗೆಲುವು

ಪ್ರಸಕ್ತ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಅದ್ಭುತ ಆಟವನ್ನು ಆಡುವ ಮೂಲಕ ಪ್ಲೇಆಫ್ಸ್‌ಗೆ ಬಹುತೇಕ ಅರ್ಹತೆಯನ್ನು ಪಡೆದಿದೆ. ಈ ಋತುವಿನ ತನ್ನ 11ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ರಾಜಸ್ಥಾನ ರಾಯಲ್ಸ್ ತಂಡವನ್ನು 100 ರನ್‌ಗಳಿಂದ ಸೋಲಿಸಿತು. ಮತ್ತೊಂದೆಡೆ, ರಾಜಸ್ಥಾನ ರಾಯಲ್ಸ್‌ ಟೂರ್ನಿಯ ಪ್ಲೇಆಫ್ಸ್‌ನಿಂದ ಹೊರ ಬಿದ್ದಿದೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪಂಜಾಬ್‌ ಕಿಂಗ್ಸ್‌ ಎದುರು ಸೋಲುವ ಮೂಲಕ ಟೂರ್ನಿಯಿಂದ ಹೊರ ನಡೆದಿತ್ತು. ಈ ಋತುವಿನಲ್ಲಿ ರಾಜಸ್ಥಾನ್ ತನ್ನ 8ನೇ ಸೋಲನ್ನು ಅನುಭವಿಸಿದೆ.



ಮುಂಬೈ ಇಂಡಿಯನ್ಸ್‌ಗೆ ಒಂದು ಗೆಲುವು ಬೇಕು

ಈ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ಇಲ್ಲಿಯ ತನಕ ಒಟ್ಟು 11 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 7ರಲ್ಲಿ ಗೆಲುವು ಪಡದಿದೆ. ಹಾರ್ದಿಕ್‌ ಪಾಂಡ್ಯ ನಾಯಕತ್ವದ ಮುಂಬೈಗೆ ಟೂರ್ನಿಯಲ್ಲಿ ಇನ್ನೂ 3 ಪಂದ್ಯಗಳು ಬಾಕಿ ಇದೆ. ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಮುಂಬೈ, ಇನ್ನುಳಿದಿರುವ 3 ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆಲುವು ಪಡೆಯಬೇಕಾಗಿದೆ.