ಆಕ್ಲೆಂಡ್: ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ (Mitchell Santner) ಅವರು ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ಭಾರತದ ವಿರುದ್ಧ ನಡೆದ ನಾಲ್ಕನೇ ಟಿ20ಐ ಪಂದ್ಯದಲ್ಲಿ(IND vs NZ) ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಸೋತು ಸರಣಿಯನ್ನು ಕೈಚೆಲ್ಲಿರುವ ನ್ಯೂಜಿಲೆಂಡ್ ತಂಡದ ಪರ ಸ್ಯಾಂಟ್ನರ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಸರಣಿಯಲ್ಲಿ ಸ್ಯಾಂಟ್ನರ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಕಿವೀಸ್ ನಾಯಕ ಈ ಸರಣಿಯಲ್ಲಿ ಆಡಿದ ನಾಲ್ಕು ಪಂದ್ಯಗಳಿಂದ 10.44ರ ಸರಾಸರಿಯಲ್ಲಿ ಒಟ್ಟು 9 ವಿಕೆಟ್ ಕಬಳಿಸಿದ್ದಾರೆ. ಅವರ ಎಕಾನಮಿ ದರ 7.33 ಆಗಿದೆ. ಈ ಸರಣಿಯಲ್ಲಿ ಬ್ಯಾಟರ್ಗಳು ದೊಡ್ಡ ಮೊತ್ತ ಗಳಿಸುತ್ತಿದ್ದರೂ ಸ್ಯಾಂಟ್ನರ್ ತಮ್ಮ ಬೌಲಿಂನಲ್ಲಿ ನಿಯಮಿತವಾಗಿ ವಿಕೆಟ್ ಕಬಳಿಸುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.
ನಾಲ್ಕನೇ ಟಿ20ಐ ಪಂದ್ಯದಲ್ಲಿ ತಮ್ಮ ಮೊದಲ ಓವರ್ನಲ್ಲೇ ನಿತೀಶ್ ರೆಡ್ಡಿ ಮತ್ತು ಅಕ್ಷರ್ ಪಟೇಲ್ ಅವರ ವಿಕೆಟ್ ಪಡೆಯುವ ಮೂಲಕ ಸ್ಯಾಂಟ್ನರ್ ಇತಿಹಾಸ ನಿರ್ಮಿಸಿದರು. ಆ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.
IND vs NZ 4th T20I: ಭಾರತಕ್ಕೆ ನಿರಾಶೆ, ಗ್ಲೆನ್ ಫಿಲಿಪ್ಸ್ ಶತಕದ ಅಬ್ಬರದಿಂದ ನ್ಯೂಜಿಲೆಂಡ್ಗೆ ಭರ್ಜರಿ ಜಯ!
ಇದಕ್ಕೂ ಮೊದಲು ನ್ಯೂಜಿಲೆಂಡ್ನ ಇಶ್ ಸೋಧಿ 30 ವಿಕೆಟ್ಗಳೊಂದಿಗೆ ಈ ದಾಖಲೆಯನ್ನು ಹೊಂದಿದ್ದರು. ಇದೀಗ ಸ್ಯಾಂಟ್ನರ್, ಸೋಧಿಯನ್ನು ಹಿಂದಿಕ್ಕಿದ್ದಾರೆ. ಕ್ರಿಸ್ ಜೋರ್ಡನ್ 24 ವಿಕೆಟ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಜೋಫ್ರಾ ಆರ್ಚರ್ ಮತ್ತು ಆದಿಲ್ ರಶೀದ್ ತಲಾ 22 ವಿಕೆಟ್ಗಳೊಂದಿಗೆ ನಂತರದ ಸ್ಥಾನಗಳಲ್ಲಿದ್ದಾರೆ.
ನ್ಯೂಜಿಲೆಂಡ್ ತಂಡಕ್ಕೆ ಮೊದಲ ಗೆಲುವು
ಮೊದಲ ಮೂರು ಪಂದ್ಯಗಳಲ್ಲಿ ಭಾರತದ ವಿರುದ್ಧ ಸಂಪೂರ್ಣ ಹಿನ್ನಡೆ ಅನುಭವಿಸಿದ್ದ ನ್ಯೂಜಿಲೆಂಡ್, ನಾಲ್ಕನೇ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 259 ರನ್ಗಳ ಬೃಹತ್ ಮೊತ್ತ ದಾಖಲಿಸಿತು. ಗ್ಲೆನ್ ಫಿಲಿಪ್ಸ್ ಕೇವಲ 49 ಎಸೆತಗಳಲ್ಲಿ 107 ರನ್ ಸಿಡಿಸಿ ಅಬ್ಬರಿಸಿದರು. ಮೈಕೆಲ್ ಬ್ರೇಸ್ವೆಲ್ ಕೂಡ 25 ಎಸೆತಗಳಲ್ಲಿ 65 ರನ್ ಗಳಿಸುವ ಮೂಲಕ ತಂಡದ ಬೃಹತ್ ಮೊತ್ತಕ್ಕೆ ಕೊಡುಗೆ ನೀಡಿದರು.
ಮೊದಲ ಪಂದ್ಯದಲ್ಲಿ ಭಾರತ 226 ರನ್ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತ್ತು. ಹಿಂದಿನ ಪಂದ್ಯದಲ್ಲಿ 199 ರನ್ಗಳ ಗುರಿಯನ್ನು ಕೇವಲ 13.2 ಓವರ್ಗಳಲ್ಲಿ ತಲುಪಿತ್ತು. ಹೀಗಾಗಿ ಈಡನ್ ಪಾರ್ಕ್ನ ಸಣ್ಣ ಮೈದಾನದಲ್ಲಿ ಭಾರತ ಮತ್ತೆ ಗುರಿ ಬೆನ್ನಟ್ಟಬಹುದು ಎಂಬ ನಿರೀಕ್ಷೆಯಿತ್ತು.
ಆದರೆ, ನ್ಯೂಜಿಲೆಂಡ್ ಬೌಲರ್ಗಳು ಪರಿಣಾಮಕಾರಿ ದಾಳಿ ನಡೆಸಿದರು. ಜೇಕಬ್ ಡಫಿ ಮೊದಲ ಓವರ್ನಲ್ಲೇ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರ ವಿಕೆಟ್ ಪಡೆದು ಭಾರತಕ್ಕೆ ಆರಂಭಿಕ ಆಘಾತ ನೀಡಿದರು. ಈ ಆಘಾತದಿಂದ ಚೇತರಿಸಿಕೊಳ್ಳಲು ಭಾರತಕ್ಕೆ ಸಾಧ್ಯವಾಗಲಿಲ್ಲ. ವೇಗವಾಗಿ ರನ್ ಗಳಿಸುವ ಒತ್ತಡದಲ್ಲಿ ನಿರಂತರವಾಗಿ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಭಾರತ ತಂಡ ತನ್ನ 20 ಓವರ್ಗಳಿಗೆ 9 ವಿಕೆಟ್ಗಳ ನಷ್ಟಕ್ಕೆ 172 ರನ್ಗಳಿಗೆ ಸೀಮಿತವಾಯಿತು.