ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕುಲ್ದೀಪ್‌ ಯಾದವ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದು ಒಳಿತು: ಮೊಹಮ್ಮದ್‌ ಕೈಫ್‌

ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಕುಲ್ದೀಪ್‌ ಯಾದವ್‌ ಅವರನ್ನು ಪದೇ-ಪದೆ ನಿರ್ಲಕ್ಷಿಸುತ್ತಿರುವುದಕ್ಕೆ ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಕೈಫ್‌ ಬೇಸರ ವ್ಯಕ್ತಪಡಿಸಿದ್ದಾರೆ. ಸ್ಥಾನ ಸಿಗದ ಕಾರಣ ಕುಲ್ದೀಪ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳುವುದು ಒಳಿತು ಎಂದು ಹೇಳಿದ್ದಾರೆ.

ಕುಲ್ದೀಪ್‌ ಯಾದವ್‌ ಬಗ್ಗೆ ಮೊಹಮ್ಮದ್‌ ಕೈಫ್‌ ಅಚ್ಚರಿ ಹೇಳಿಕೆ.

ನವದೆಹಲಿ: ನವದೆಹಲಿ: ಭಾರತ ತಂಡದಲ್ಲಿ ಕುಲ್ದೀಪ್‌ ಯಾದವ್ (Kuldeep Yadav) ಅವರನ್ನು ಪದೇ-ಪದೆ ಆಡುವ ಹನ್ನೊಂದರಿಂದ ಹೊರಗಿಡುತ್ತಿರುವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ (Mohammed Kaif) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲೂ ಕುಲ್ದೀಪ್‌ ಯಾದವ್‌ಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ, ಕೈಫ್ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ನಿರ್ಧಾರವನ್ನು ಕಟುವಾಗಿ ಟೀಕಿಸಿದರು.

ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ ಕೈಫ್, "ತಂಡದ ಆಡಳಿತ ಇದೇ ರೀತಿ ಕುಲ್ದೀಪ್ ಯಾದವ್ ಅವರನ್ನು ನಿರಂತರವಾಗಿ ಕಡೆಗಣಿಸುತ್ತಿದ್ದರೆ, ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪಡೆಯುವ ಬಗ್ಗೆ ಗಂಭೀರವಾಗಿ ಯೋಚಿಸಬೇಕು," ಎಂದು ಅಭಿಪ್ರಾಯಪಟ್ಟರು.

ಕುಲ್ದೀಪ್‌ ಯಾದವ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಅಂಕಿಅಂಶಗಳನ್ನು ನೋಡಿದರೆ, ಯಾವುದೇ ಮಾದರಿಯಲ್ಲೂ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಅಗತ್ಯವೇ ಇಲ್ಲ. ಭಾರತ ಪರ ಇದುವರೆಗೆ 18 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಅವರು, 22.4ರ ಸರಾಸರಿಯಲ್ಲಿ 79 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 40 ರನ್ ನೀಡಿ 5 ವಿಕೆಟ್ ಪಡೆದಿರುವುದು ಅವರ ಶ್ರೇಷ್ಠ ಬೌಲಿಂಗ್ ಪ್ರದರ್ಶನವಾಗಿದೆ.

ʻಸಂಜು ವೃತ್ತಿ ಜೀವನವನ್ನು ಹಾಳು ಮಾಡಿದ್ದೀರಿ, ಇದೀಗ ರಾಹುಲ್‌ʼ: ಟೀಮ್‌ ಮ್ಯಾನೇಜ್‌ಮೆಂಟ್‌ ವಿರುದ್ಧ ಕೆ ಶ್ರೀಕಾಂತ್‌ ಕಿಡಿ!

ಇನ್ನು 121 ಏಕದಿನ ಪಂದ್ಯಗಳಲ್ಲಿ, ಅವರು 194 ವಿಕೆಟ್‌ಗಳನ್ನು ಪಡೆದಿದ್ದು, 25 ರನ್‌ಗೆ 6 ವಿಕೆಟ್ ಅವರ ಅತ್ಯುತ್ತಮ ಏಕದಿನ ಬೌಲಿಂಗ್ ಸಾಧನೆಯಾಗಿದೆ. ಟಿ20ಐ ಕ್ರಿಕೆಟ್‌ನಲ್ಲೂ ಕುಲ್ದೀಪ್‌ ಯಾದಚ್‌ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. 54 ಪಂದ್ಯಗಳಲ್ಲಿ 95 ವಿಕೆಟ್‌ಗಳನ್ನು ಕಬಳಿಸಿರುವ ಅವರು, 13.75ರ ಅಸಾಧಾರಣ ಸರಾಸರಿಯಲ್ಲಿ ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಅಂಕಿಅಂಶಗಳು ವಿಶ್ವ ಕ್ರಿಕೆಟ್‌ನಲ್ಲಿ ಕುಲ್ದೀಪ್‌ ಯಾದವ್‌ ಅವರ ಸ್ಪಿನ್ ಬೌಲಿಂಗ್ ಎಷ್ಟು ಪರಿಣಾಮಕಾರಿಯಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ.

ಭಾರತ ಕ್ರಿಕೆಟ್ ತಂಡದ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿರುವ ವಿಚಾರ ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಟಿ20 ಸರಣಿಗೆ ವಿಶ್ರಾಂತಿ ನೀಡಿದ್ದ ಬಳಿಕ, ಏಕದಿನ ಸರಣಿಯ ಮೂರು ಪಂದ್ಯಗಳಲ್ಲೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಚೈನಾಮನ್ ಸ್ಪಿನ್ ಮೂಲಕ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಕುಲ್ದೀಪ್‌, ಮತ್ತೊಮ್ಮೆ ಡಗೌಟ್‌ನಲ್ಲೇ ಕುಳಿತು ಪಂದ್ಯ ವೀಕ್ಷಿಸುವಂತಾಯಿತು.



ಭಾರತದ ಟೀಮ್‌ ಮ್ಯಾನೇಜ್‌ಮೆಂಟ್‌ ಪೂರ್ಣ ಪ್ರಮಾಣದ ಬೌಲಿಂಗ್ ಸಾಮರ್ಥ್ಯಕ್ಕಿಂತ ಬ್ಯಾಟಿಂಗ್ ಡೆಪ್ತ್‌ಗೆ ಹೆಚ್ಚಿನ ಮಹತ್ವ ನೀಡುತ್ತಿರುವುದು ಸ್ಪಷ್ಟವಾಗಿದೆ. ಇದೇ ಕಾರಣದಿಂದ ಆಡುವ ಹನ್ನೊಂದರಲ್ಲಿ ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಅವರಿಗೆ ಆದ್ಯತೆ ನೀಡಲಾಗುತ್ತಿದೆ.

IND vs ENG: ಲಾರ್ಡ್ಸ್‌ನಲ್ಲಿ ಮೊದಲ ಒಡಿಐ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ!

ಅಕ್ಷರ್ ಹಾಗೂ ವಾಷಿಂಗ್ಟನ್ ತಮ್ಮ ಆಲ್‌ರೌಂಡ್ ಪ್ರದರ್ಶನದ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಸಮರ್ಥಿಸಿಕೊಂಡಿದ್ದರೂ, ಈ ತಂತ್ರದ ಪರಿಣಾಮವಾಗಿ ಕುಲ್ದೀಪ್ ಯಾದವ್ ಅವರ ಅಸಾಧಾರಣ ಸ್ಪಿನ್ ಬೌಲಿಂಗ್ ಸಾಮರ್ಥ್ಯ ಕಡೆಗಣನೆಗೆ ಒಳಗಾಗುತ್ತಿದೆ. ಕೆಳ ಕ್ರಮಾಂಕದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಕಡಿಮೆ ಎಂಬ ಕಾರಣದಿಂದ ಅವರನ್ನು ನಿರಂತರವಾಗಿ ತಂಡದಿಂದ ಹೊರಗಿಡಲಾಗುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.