ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ಭಾರತ ತಂಡ ಕಳೆದುಕೊಂಡಿರುವ ಎಕ್ಸ್‌ ಫ್ಯಾಕ್ಟರ್‌ ಆಟಗಾರರನ್ನು ಹೆಸರಿಸಿದ ಹರ್ಭಜನ್‌ ಸಿಂಗ್‌!

ಮುಂಬರುವ ಏಷ್ಯಾ ಕಪ್‌ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಆಗಸ್ಟ್‌ 19 ರಂದು ಪ್ರಕಟಿಸಿತ್ತು. ಆದರೆ, ಶ್ರೇಯಸ್‌ ಅಯ್ಯರ್‌, ಮೊಹಮ್ಮದ್‌ ಸಿರಾಜ್‌ ಹಾಗೂ ಯಶಸ್ವಿ ಜೈಸ್ವಾಲ್‌ ಅವರನ್ನು ಕೈ ಬಿಟ್ಟಿದೆ. ಈ ಬಗ್ಗೆ ಸ್ಪಿನ್‌ ದಂತಕತೆ ಹರ್ಭಜನ್‌ ಸಿಂಗ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮೊಹಮ್ಮದ್‌ ಸಿರಾಜ್‌ಗೆ ಏಷ್ಯಾ ಕಪ್‌ ತಂಡದಲ್ಲಿ ಅವಕಾಶ ನೀಡಬೇಕಿತ್ತೆಂದ ಭಜ್ಜಿ.

ನವದೆಹಲಿ: ಬಹುನಿರೀಕ್ಷಿತ 2025ರ ಏಷ್ಯಾ ಕಪ್‌ (Asia Cup 2025) ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಅಜಿತ್‌ ಅಗರ್ಕರ್‌ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಆಗಸ್ಟ್‌ 19 ರಂದು ಮಂಗಳವಾರ ಪ್ರಕಟಿಸಿದೆ. ಆದರೆ, ಶ್ರೇಯಸ್‌ ಅಯ್ಯರ್‌, ಯಶಸ್ವಿ ಜೈಸ್ವಾಲ್‌ ಹಾಗೂ ಮೊಹಮ್ಮದ್‌ ಸಿರಾಜ್‌ (Mohammed Siraj) ಅವರನ್ನು ಕಡೆಗಣಿಸಲಾಗಿದೆ. ಈ ಬಗ್ಗೆ ಸ್ಪಿನ್‌ ದಿಗ್ಗಜ ಹರ್ಭಜನ್‌ ಸಿಂಗ್‌ (Harbhajan Singh) ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ತಂಡ ಏಷ್ಯಾ ಕಪ್‌ ಟೂರ್ನಿಯಲ್ಲಿ ಎಕ್ಸ್‌ ಫ್ಯಾಕ್ಟರ್‌ ಆಟಗಾರ ಮೊಹಮ್ಮದ್‌ ಸಿರಾಜ್‌ ಅವರನ್ನು ಕಳೆದುಕೊಂಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಗಿದಿದ್ದ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಮೊಹಮ್ಮದ್‌ ಸಿರಾಜ್‌ 23 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆದರೂ ಸಿರಾಜ್‌ಗೆ ಏಷ್ಯಾ ಕಪ್‌ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.

ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಿದ ವಿಡಿಯೊದಲ್ಲಿ ಮಾತನಾಡಿದ ಹರ್ಭಜನ್‌ ಸಿಂಗ್‌, "ಏಷ್ಯಾ ಕಪ್‌ ಭಾರತ ತಂಡದಲ್ಲಿ ಮೊಹಮ್ಮದ್‌ ಸಿರಾಜ್‌ ಆಯ್ಕೆಯಾಗಬೇಕಿತ್ತು. ಹೌದು, ಅವರು ಇಂಗ್ಲೆಂಡ್‌ನಲ್ಲಿ ಅತ್ಯುತ್ತಮ ಬೌಲಿಂಗ್‌ ಪ್ರರ್ಶನವನ್ನು ತೋರಿದ್ದರು ಹಾಗೂ ಟೆಸ್ಟ್‌ ಸರಣಿ ಮುಗಿದ ಬಳಿಕ ಅಗತ್ಯ ವಿಶ್ರಾಂತಿಯನ್ನೂ ಪಡೆದಿದ್ದಾರೆ. ಹಾಗಾಗಿ ಅವರನ್ನು ಕೂಡ ತಂಡಕ್ಕೆ ಆಯ್ಕೆ ಮಾಡಬೇಕಾಗಿತ್ತು. ಅವರು ಇದ್ದಿದ್ದರೆ ಭಾರತ ತಂಡ ಇನ್ನಷ್ಟು ಬಲಿಷ್ಠವಾಗಿರುತ್ತಿತ್ತು. ಬೌಲಿಂಗ್‌ ವಿಭಾಗ ಇನ್ನಷ್ಟು ಶಕ್ತಿಯುತವಾಗಿ ಕಾಣುತ್ತಿತ್ತು. ಅವರು ಎಕ್ಸ್‌ ಫ್ಯಾಕ್ಟರ್‌ ಆಟಗಾರನಾಗಿದ್ದು, ಇದು ತಂಡ ಕಳೆದುಕೊಂಡಿದೆ,"ಎಂದು ತಿಳಿಸಿದ್ದಾರೆ.

Asia Cup 2025: ಭಾರತ-ಪಾಕ್‌ ಏಷ್ಯಾ ಕಪ್‌ ಪಂದ್ಯದ ಅಗರ್ಕರ್‌ ಪ್ರತಿಕ್ರಿಯೆ ತಡೆದ ಬಿಸಿಸಿಐ ಅಧಿಕಾರಿ!

ಶ್ರೇಯಸ್‌ ಅಯ್ಯರ್‌ ಕೈ ಬಿಟ್ಟಿರುವುದು ಅಚ್ಚರಿ ತಂದಿದೆ: ಭಜ್ಜಿ

ಟಿ20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದರ ಹೊರತಾಗಿಯೂ ಶ್ರೇಯಸ್‌ ಅಯ್ಯರ್‌ಗೆ ಏಷ್ಯಾ ಕಪ್‌ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. 2025ರ ಐಪಿಎಲ್‌ ಟೂರ್ನಿಯಲ್ಲಿ ಪಂಜಾಬ್‌ ಕಿಂಗ್ಸ್‌ ನಾಯಕ 600ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದರು. ಅಲ್ಲದೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಆಗಿದ್ದರು. ಆದರೂ ಶ್ರೇಯಸ್‌ ಅಯ್ಯರ್‌ಗೆ ಏಷ್ಯಾ ಕಪ್‌ ತಂಡದಲ್ಲಿ ಸ್ಥಾನ ನೀಡದ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.



"ಏಷ್ಯಾ ಕಪ್‌ ಟೂರ್ನಿಯ ಭಾರತ ತಂಡದಲ್ಲಿ ಶ್ರೇಯಸ್‌ ಅಯ್ಯರ್‌ಗೆ ಸ್ಥಾನವಿದೆ ಎಂದು ನಾನು ಭಾವಿಸಿದ್ದೆ. ಏಕೆಂದರೆ ಅವರು ಸಾಕಷ್ಟು ರನ್‌ಗಳನ್ನು ಗಳಿಸಿದ್ದಾರೆ ಹಾಗೂ ಐಪಿಎಲ್‌ ಟೂರ್ನಿಯ ಫೈನಲ್‌ನಲ್ಲಿಯೂ ಆಡಿದ್ದಾರೆ. ಅದರಂತೆ ಅವರು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಈ ಕಾರಣದಿಂದಲೇ ಶ್ರೇಯಸ್‌ ಅಯ್ಯರ್‌ ಏಷ್ಯಾ ಕಪ್‌ ಭಾರತ ತಂಡಕ್ಕೆ ಶ್ರೇಯಸ್‌ ಅಯ್ಯರ್‌ ಆಯ್ಕೆಯಾಗಬೇಕಿತ್ತು. ಅವರು ಯಾರ ಸ್ಥಾನವನ್ನು ಆಕ್ರಮಿಸಿಕೊಳ್ಳುತ್ತಿದ್ದರು ಎಂಬುದನ್ನು ನೀವು ನೋಡಬೇಕು. ಯಾರನ್ನಾದರೂ ಸೇರಿಸಬೇಕಾದಾಗ ಅಥವಾ ಬಿಡಬೇಕಾದಾಗ, ಒಂದು ಸ್ಥಾನವನ್ನು ನೀಡಲಾಗುತ್ತದೆ. ಆದರೆ ನಾನು ಶ್ರೇಯಸ್ ಅಯ್ಯರ್ ಅವರ ಹೆಸರನ್ನು ಅಲ್ಲಿ ನೋಡಲಿಲ್ಲ, ಅದು ನನಗೆ ಸ್ವಲ್ಪ ಆಶ್ಚರ್ಯವನ್ನುಂಟು ಮಾಡಿದೆ," ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

Asia Cup 2025: ಏಷ್ಯಾಕಪ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್‌ಗಳು

2025ರ ಏಷ್ಯಾ ಕಪ್‌ ಟೂರ್ನಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್, ಕುಲ್‌ದೀಪ್ ಯಾದವ್, ಹರ್ಷಿತ್‌ ರಾಣಾ ಹಾಗೂ ರಿಂಕು ಸಿಂಗ್‌

ಮೀಸಲು ಆಟಗಾರರು: ಪ್ರಸಿಧ್‌ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್ ಮತ್ತು ಯಶಸ್ವಿ ಜೈಸ್ವಾಲ್