ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 20ನೇ ಪಂದ್ಯದಲ್ಲಿ (RCB vs MI) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿಯನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನ ನೀಡಿದ್ದಾರೆ. ಈ ಪಂದ್ಯದಲ್ಲಿ ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XIಗೆ ಹಿರಿಯ ವೇಗಿ ಜಸ್‌ಪ್ರೀತ್ ಬುಮ್ರಾ ಮರಳಿದ್ದಾರೆ. ಇನ್ನು ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಇಂಪ್ಯಾಕ್ಸ್ ಪ್ಲೇಯರ್ ಆಗಿ ಬ್ಯಾಟ್ ಮಾಡಬಹುದು. ಇನ್ನು ಆರ್‌ಸಿಬಿ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ಗುಜರಾತ್ ಟೈಟನ್ಸ್ ವಿರುದ್ಧ ಆಡಿದ್ದ ಆದೇ ಪ್ಲೇಯಿಂಗ್ XI ಅನ್ನು ಮುಂಬೈ ಪಂದ್ಯಕ್ಕೆ ಬೆಂಗಳೂರು ತಂಡ ಉಳಿಸಿಕೊಂಡಿದೆ.
IPL 2025: ಐಪಿಎಲ್‌ನಲ್ಲಿ 100 ವಿಕೆಟ್ ಪೂರ್ತಿಗೊಳಿಸಿದ ಸಿರಾಜ್
ಮೂರನೇ ಸ್ಥಾನದಲ್ಲಿ ಆರ್‌ಸಿಬಿ
ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ತಂಡ ಇಲ್ಗಿಯತನಕ ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆಲುವು ಪಡೆದಿದ್ದು, ಇನ್ನೊಂದು ಪಂದ್ಯದಲ್ಲಿ ಸೋಲು ಅನುಭವಿಸಿದೆ. ಒಟ್ಟು ನಾಲ್ಕು ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದೆ. ಆದರೆ, ಮುಂಬೈ ಇಂಡಿಯನ್ಸ್ ಇಲ್ಲಿಯವರೆಗೂ ಆಡಿದ ನಾಲ್ಕು ಪಂದ್ಯದಲ್ಲಿ ಗೆದ್ದಿರುವುದು ಕೇವಲ ಒಂದೇ ಒಂದು ಪಂದ್ಯ ಮಾತ್ರ. ಇನ್ನುಳಿದ ಮೂರೂ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಕೇವಲ ಎರಡು ಅಂಕಗಳೊಂದಿಗೆ ಮುಂಬೈ ಅಂಕಪಟ್ಟಿಯಲ್ಲ ಎಂಟನೇ ಸ್ಥಾನದಲ್ಲಿದೆ.
ಇತ್ತಂಡಗಳ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ಯಶ್ ದಯಾಳ್
ಮುಂಬೈ ಇಂಡಿಯನ್ಸ್ : ವಿಲ್ ಜಾಕ್ಸ್, ರಿಯಾನ್ ರಿಕಲ್ಟನ್(ವಿ.ಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ, ವಿಘ್ನೇಶ್ ಪುತ್ತೂರು
ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ಯಶ್ ದಯಾಳ್, ಸ್ವಸ್ತಿಕ್ ಚಿಕಾರಾ, ಮೋಹಿತ್ ರಾಥಿ, ರೊಮ್ಯಾರಿಯೊ ಶೆಫರ್ಡ್, ನುವಾನ್ ತುಷಾರ, ಲುಂಗಿ ಎನ್ಗಿಡಿ, ಅಭಿನಂದನ್ ಸಿಂಗ್, ಸ್ವಪ್ನಿಲ್ ಸಿಂಗ್,ಜಾಕೋಬ್ ಬೆಥೆಲ್, ಮನೋಜ್ ಭಾಂಡಗೆ, ಸೂಯೇಶ್ ಶರ್ಮಾ, ರಾಸಿಕ್ ದರ್ ಸಲಾಮ್
ಮುಂಬೈ ಇಂಡಿಯನ್ಸ್ : ವಿಲ್ ಜಾಕ್ಸ್, ರಿಯಾನ್ ರಿಕಲ್ಟನ್(ವಿ.ಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ, ವಿಘ್ನೇಶ್ ಪುತ್ತೂರು, ರೋಹಿತ್ ಶರ್ಮಾ, ರಾಜ್ ಭಾವಾ, ಅಶ್ವಿನಿ ಕುಮಾರ್, ಕಾರ್ಬಿನ್ ಬಾಷ್, ರಾಬಿನ್ ಮಿಂಝ್, ಸತ್ಯನಾರಾಯಣ ರಾಜು, ಕರಣ್ ಶರ್ಮಾ, ರೀಸ್ ಟಾಪ್ಲೀ, ಮುಜೀಬ್ ಉರ್ ರೆಹಮಾನ್, ಕೃಷ್ಣನ್ ಶ್ರೀಜಿತ್, ಅರ್ಜುನ್ ತೆಂಡೂಲ್ಕರ್, ಬೆವೊನ್ ಜಾಕೋಬ್ಸ್