ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

RCB vs MI: ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್‌, ಚೇಸಿಂಗ್‌ ನಿರ್ಧರಿಸಿದ ಮುಂಬೈ ಇಂಡಿಯನ್ಸ್‌!

RCB vs MI: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 20ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಆರ್‌ಸಿಬಿ ಮೊದಲು ಬ್ಯಾಟ್‌ ಮಾಡಲಿದೆ.

RCB vs MI: ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್‌!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು-ಮುಂಬೈ ಇಂಡಿಯನ್ಸ್‌ ಕಾದಾಟ. -

Profile
Ramesh Kote Apr 12, 2026 7:21 PM

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 20ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು (RCB vs MI) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಮೊದಲು ಬೌಲ್‌ ಮಾಡಲು ನಿರ್ಧರಿಸಿದರು. ಆ ಮೂಲಕ ಆರ್‌ಸಿಬಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವ ಯೋಜನೆಯನ್ನು ಹಾಕಿಕೊಂಡಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯದ ಮೂಲಕ 19ನೇ ಸೀಸನ್‌ನ ಮೊದಲನೇ ಪಂದ್ಯವನ್ನು ಆಡಿದ್ದ ಜಾಶ್‌ ಹೇಝಲ್‌ವುಡ್‌ಗೆ ಈ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನಕ್ಕೆ ಆರಂಭಿಕ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ತೋರಿದ್ದ ಜೇಕಬ್‌ ಡಫಿಗೆ ಅವಕಾಶವನ್ನು ನೀಡಲಾಗಿದೆ.

RCB vs RR: ವೈಭವ್‌ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್‌ಗೆ ಶರಣಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

ಇನ್ನು ಮುಂಬೈ ಇಂಡಿಯನ್ಸ್‌ ತಂಡದ ಪ್ಲೇಯಿಂಗ್‌ xiನಲ್ಲಿಯೂ ಎರಡು ಬದಲಾವಣೆಯನ್ನು ತರಲಾಗಿದೆ. ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಸೋಲಿನ ಪಂದ್ಯದಲ್ಲಿ ಆಡಿದ್ದ ಘಜನ್‌ಫರ್‌ ಹಾಗೂ ದೀಪಕ್‌ ಚಹರ್‌ ಅವರ ಸ್ಥಾನಗಳಿಗೆ ಮಿಚೆಲ್‌ ಸ್ಯಾಂಟ್ನರ್‌ ಹಾಗೂ ಮಯಾಂಕ್‌ ಮಾರ್ಕಂಡೆಗೆ ಅವಕಾಶವನ್ನು ಕಲ್ಪಿಸಲಾಗಿದೆ.



ಇನ್ನು ರಜತ್‌ ಪಾಟಿದಾರ್‌ ನಾಯಕತ್ವದ ಆರ್‌ಸಿಬಿ ಇಲ್ಲಿಯವರೆಗೂ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಒಂದು ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಇದೀಗ ತನ್ನ ನಾಲ್ಕನೇ ಪಂದ್ಯದಲ್ಲಿ ಗೆದ್ದು ಕಮ್‌ಬ್ಯಾಕ್‌ ಮಾಡಲು ಆರ್‌ಸಿಬಿ ಎದುರು ನೋಡುತ್ತಿದೆ. ಇನ್ನು ಐದು ಬಾರಿ ಚಾಂಪಿಯನ್ಸ್‌ ಮುಂಬೈ, ಆಡಿದ ಮೂರು ಪಂದ್ಯಗಳ ಪೈಕಿ ಆರಂಭಿಕ ಪಂದ್ಯದಲ್ಲಿ ಇದೇ ಅಂಗಣದಲ್ಲಿ ಗೆದ್ದಿತ್ತು, ಆದರೆ ಕೊನೆಯ ಎರಡು ಹೊರಗಿನ ಪಂದ್ಯಗಳಲ್ಲಿ ಮುಂಬೈ ಸೋಲು ಅನುಭವಿಸಿತ್ತು.



ಇತ್ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲಿಪ್‌ ಸಾಲ್ಟ್‌, ವಿರಾಟ್‌ ಕೊಹ್ಲಿ, ದೇವದತ್‌ ಪಡಿಕ್ಕಲ್‌, ರೆಜತ್‌ ಪಾಟಿದಾರ್‌ (ನಾಯಕ), ಟಿಮ್‌ ಡೇವಿಡ್‌, ಜಿತೇಶ್‌ ಶರ್ಮಾ (ವಿಕೆಟ್‌ ಕೀಪರ್‌), ರೊಮ್ಯಾರಿಯೊ ಶಫರ್ಡ್‌, ಕೃಣಾಲ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಜೇಕಬ್‌ ಡಫಿ, ಸುಯಾಶ್‌ ಶರ್ಮಾ

ಮುಂಬೈ ಇಂಡಿಯನ್ಸ್‌: ರೋಹಿತ್‌ ಶರ್ಮಾ, ರಯಾನ್‌ ರಿಕಲ್ಟನ್‌ (ವಿಕೆಟ್‌ ಕೀಪರ್‌), ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮಾ, ಹಾರ್ದಿಕ್‌ ಪಾಂಡ್ಯ (ನಾಯಕ), ನಮದ ಧೀರ್‌, ಮಿಚೆಲ್‌ ಸ್ಯಾಂಟ್ನರ್‌, ಶಾರ್ದುಲ್‌ ಠಾಕೂರ್‌, ಟ್ರೆಂಟ್‌ ಬೌಲ್ಟ್‌, ಮಯಾಂಕ್‌ ಮಾರ್ಕಂಡೆ, ಜಸ್‌ಪ್ರೀತ್‌ ಬುಮ್ರಾ